ಹಿರಿಯೂರು: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ-ಕಾರು ಚಾಲಕ ಸ್ಥಳದಲ್ಲೇ ಸಾವು
ಹಿರಿಯೂರು, ಅಕ್ಟೋಬರ್, 03: ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಏರಿಕೆ ಆಗುತ್ತಲೇ ಇವೆ. ಹಾಗೆಯೇ ಇದೀಗ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ಲ್ಲಿ ಗುರುವಾರ (ಅಕ್ಟೋಬರ್ 3) ಬೆಳ್ಳಂಬೆಳಗ್ಗೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಂಗಳೂರು ಕಡೆಯಿಂದ ದಾವಣಗೆರೆ ಕಡೆ ಹೋಗುವಾಗ ಹಿಂದಿನಿಂದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಅವರು ಇಂದು ಬೆಳಗ್ಗೆ 6 ಗಂಟೆ ವೇಳೆ ಕಾರು ಅಪಘತದಲ್ಲಿ ಮೃತಪಟ್ಟವರಾಗಿದ್ದು, ಇವರು ರಾಮನಗರ ಮೂಲದವರಾಗಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಚಂದ್ರಶೇಖರ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಓರ್ವ ಮಗನಿಗೆ ಮೆಡಿಕಲ್ ಸೀಟ್ ಸಿಕ್ಕಿದ್ದರಿಂದ ಇಂದು ಅವರನ್ನು ದಾವಣಗೆರೆ ಕಾಲೇಜಿಗೆ ಬಿಟ್ಟು ಬರಲು ಬರುತ್ತಿದ್ದರು. ಆಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ತಂದೆ-ತಾಯಿ ಮಗನನ್ನು ದಾವಣಗೆರೆ ಶಾಲೆಯೊಂದರಲ್ಲಿ ಪ್ರವೇಶ ಕೊಡಿಸಲು ಹೋಗುತ್ತಿದ್ದು. ಈ ವೇಳೆ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಈ ರಭಸಕ್ಕೆ ಕಾರು ಚಾಲಕ ಅಂದರೆ ಮಗನ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ತಾಯಿ-ಮಗ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ಪ್ರಕರಣ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗುತ್ತಿದೆ.
ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ರಾಜ್ಯದ ಹಲವೆಡೆ ಕೆಎಸ್‌ಆರ್‌ಟಿಸಿ ಬಸ್ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇನ್ನು ಸೆಪ್ಟೆಂಬರ್ 30ರಂದು ಮತ್ತೆ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ (KSRTC) ಬಸ್ ಪಲ್ಟಿಯಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಓಬಳಾಪುರ ತಾಂಡಾ ಬಳಿ ಸೋಮವಾರ ಬೆಳಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಬಸ್‌ನಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು. ಹಿರಿಯೂರು ಕಡೆ ಬರುವಾಗ ಓಬಳಾಪುರ ತಾಂಡಾ ಬಳಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಸದ್ಯ ಈ ವೇಳೆ ಯಾವುದೇ ಪ್ರಾಣಾಪಾಯ ಸಂಬವಿಸಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ಕೈ, ಕಾಲು, ಕಣ್ಣು ಇನ್ನೀತರ ಭಾಗಗಳಲ್ಲಿ ಗಾಯಗಳಾಗಿವೆ. ಈ ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಸ್ಥಳೀಯ ವಾಹನ ಹಾಗೂ ಅಂಬುಲೆನ್ಸ್‌ಗಳಲ್ಲಿ ಸಾಗಿಸಿ ಸ್ಥಳೀಯ ಮತ್ತು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಇನ್ನು ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣದ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ಹಳ್ಳಕ್ಕೆ ಇಳಿದ ಕೆಆರ್‌ಎಸ್‌ಟಿಸಿ ಬಸ್: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆ KSRTC ಬಸ್ ಹಳ್ಳಕ್ಕೆ ಇಳಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಯರಿಯೂರು ಸಮೀಪ ಸೆಪ್ಟೆಂಬರ್ 27ರಂದು ನಡೆದಿದೆ. ಇನ್ನು ಬಸ್‌ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಯರಿಯೂರು ಗ್ರಾಮದ ಕಡೆಯಿಂದ ಬೊಮ್ಮಲಾಪುರ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 47 ಪ್ರಯಾಣಿಕರು ಇದ್ದರು. ಇನ್ನು ಈ ಬಸ್ ಕಂದಕಕ್ಕೆ ಉರುಳಿದ ವೇಳೆ ಕುಂದಕೆರೆ ಗ್ರಾಮದ ರಂಗಯ್ಯ (62) ಮಹಾದೇವಯ್ಯ(55 ) ಸೇರಿ ಮೂವರಿಗೆ ಗಂಭೀರ ಪೆಟ್ಟು ಬಿದ್ದಿದ್ದು, ಅವರನ್ನು ಆಂಬುಲೆನ್ಸ್‌ನಲ್ಲಿ ಗುಂಡ್ಲುಪೇಟೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ಚಾಲಕ ಚಂದ್ರಶೇಖರಪ್ಪ ಈ ಕುರಿತು ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದು, ಆಕಸ್ಮಿಕವಾಗಿ ತನ್ನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದಿದ್ದು, ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ. ಕಂಡಕ್ಟರ್ ಪ್ರಸನ್ನ ಜೊತೆ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಇನ್ನು ಬಸ್ಸನ್ನು ಮೇಲೆತ್ತಲು ಕ್ರೇನ್ ತರಿಸಲಾಗುತ್ತಿದೆ ಎಂದು ಹೇಳಿದರು. ಸದ್ಯ ಈ ಪ್ರಕರಣ ತೆರಕಣಾಂಬಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.












Click it and Unblock the Notifications