ಮುರುಘಾ ಸ್ವಾಮೀಜಿ ವಿರುದ್ಧ ಆರೋಪ: ಬಸವರಾಜನ್ ದಂಪತಿ ಪಿತೂರಿ ಕಾರಣ

ಬೆಂಗಳೂರು, ಅಕ್ಟೋಬರ್ 27; ಮುರುಘಾಮಠದ ಶಿವಮೂರ್ತಿ ಸ್ವಾಮೀಜಿ ಪೋಕ್ಸೊ ಸೇರಿದಂತೆ ವಿವಿಧ ಕಾಯ್ದೆಗಳ ಅಡಿಯಲ್ಲಿ ಕ್ರಿಮಿನಲ್‌ ಕೇಸ್ ಎದುರಿಸುವಂತಾಗಲು ಮಠದ ಮಾಜಿ ಆಡಳಿತಾಧಿಕಾರಿ ಎಸ್‌. ಕೆ. ಬಸವರಾಜನ್‌ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯೂ ಆದ ಅವರ ಪತ್ನಿ ಸೌಭಾಗ್ಯ ಬಸವರಾಜನ್‌ ಪಿತೂರಿಯ ಕಾರಣ ಎಂದು ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಸ್ವಾಮೀಜಿ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು.

ಜಾಮೀನು ಕೋರಿ ಶಿವಮೂರ್ತಿ ಸ್ವಾಮೀಜಿ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಅವರಿದ್ದ ಏಕಸದಸ್ಯಪೀಠ ಗುರುವಾರ ವಿಚಾರಣೆ ನಡೆಸಿತು. ಕೋರ್ಟ್‌ ಕಲಾಪದ ಅವಧಿ ಮುಕ್ತಾಯಗೊಂಡ ಕಾರಣ ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಲಾಗಿದೆ.

Case Against Murugha Shree Conspiracy Of Basavarajan Couple Argued Before HC

ಅರ್ಜಿದಾರರ ಪರ ವಾದಿಸಿದ ವಕೀಲರು, ಇಬ್ಬರು ಸಂತ್ರಸ್ತ ಬಾಲಕಿಯರು ಶರಣರ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಮೈಸೂರಿನ ನಜರ್‌ಬಾದ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸುವ ಮುನ್ನ ಒಂದು ತಿಂಗಳು ಬಸವರಾಜನ್‌ ಮತ್ತು ಸೌಭಾಗ್ಯ ವಶದಲ್ಲಿ ಅವರ ಮನೆಯಲ್ಲೇ ತಂಗಿದ್ದರು. ತದನಂತರ ಚಿತ್ರದುರ್ಗದಿಂದ ದೂರದ ಮೈಸೂರಿಗೆ ತೆರಳಿ ಒಡನಾಡಿ ಎಂಬ ಸಂಸ್ಥೆಯ ಆಶ್ರಯ ಪಡೆದು ದೂರು ದಾಖಲಿಸಿದರು. ಇದೊಂದು ಪೂರ್ವನಿಯೋಜಿತ ಕೃತ್ಯ ಎಂದರು.

ಅರ್ಜಿದಾರರ ವಾದ; ಅಲ್ಲದೆ, ಸಂತ್ರಸ್ತ ಬಾಲಕಿಯರು ಮಠದ ಆವರಣದಲ್ಲಿನ ಹಾಸ್ಟೆಲ್‌ನಲ್ಲೇ ಇದ್ದರು, ಅವರ ಉಸ್ತುವಾರಿಯನ್ನು ಮಹಿಳಾ ವಾರ್ಡನ್‌ ನೋಡಿಕೊಳ್ಳುತ್ತಿದ್ದರು. ಸ್ವಾಮೀಜಿ ಹದಿನೈದು ದಿನಕ್ಕೋ ಅಥವಾ ತಿಂಗಳಿಗೆ ಒಮ್ಮೆಯೋ ಬಾಲಕಿಯರಿಗೆ ಇಂಗ್ಲಿಷ್‌ ಮತ್ತು ಸಂಸ್ಕೃತದ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದರು. ಆಗಾಗ್ಗೆ ಮಕ್ಕಳಿಗೆ ಚಾಕೋಲೆಟ್‌, ಮೂಸಂಬಿ ಮತ್ತು ದ್ರಾಕ್ಷಿಹಣ್ಣು ಕೊಡುತ್ತಿದ್ದರು ಎಂದು ಹೇಳಿದರು.

ಇಬ್ಬರೂ ಬಾಲಕಿಯರು ಚಿತ್ರದುರ್ಗದಿಂದ 2022ರ ಜುಲೈ 24ರಂದು ಕೆಎಸ್‌ಆರ್‌ಟಿಸಿ ಬಸ್‌ ಹತ್ತಿ ಬೆಂಗಳೂರಿಗೆ ಬಂದು ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪೊಲೀಸರೆದುರು ನಮಗೆ ಅನ್ಯಾಯವಾಗಿದೆ ಎಂದು ವ್ಯಥೆ ತೋಡಿಕೊಂಡರು. ಮರುದಿವಸವೇ ಬಸವರಾಜನ್‌ ದಂಪತಿ ಬೆಂಗಳೂರಿಗೆ ಬಂದು ಮಕ್ಕಳನ್ನು ಕರೆದೊಯ್ದರು. ನಂತರ ನ್ಯಾಯ ಸಿಗುವ ತನಕ ವಿರಮಿಸುವುದಿಲ್ಲ ಎಂದು ವಿವರಿಸಿದರು.

ಒಂದು ತಿಂಗಳು ಪೂರೈಸಿದ ನಂತರ ಮೈಸೂರಿಗೆ ತೆರಳಿ ಒಡನಾಡಿ ಎಂಬ ಸಂಸ್ಥೆಯ ಆಶ್ರಯದಲ್ಲಿ ಮಕ್ಕಳಿಂದ ದೂರು ದಾಖಲಿಸಿದರು. ಆದರೆ, ವೈದ್ಯಕೀಯ ಪರೀಕ್ಷೆಯಲ್ಲಿ ಮಕ್ಕಳ ಮೇಲೆ ಉದ್ರೇಕಿತ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂಬುದು ಸಾಬೀತಾಗಿದೆ. ಈ ಮಕ್ಕಳೇನೂ ಅಶಿಕ್ಷಿತರಲ್ಲ, ಮುರುಘಾಮಠದ ಬೃಹತ್‌ ವಿದ್ಯಾಸಂಸ್ಥೆಗೆ ಮಸಿ ಬಳಿಯಲೆಂದೇ ಇಂತಹ ಸುಳ್ಳು ಪ್ರಕರಣವನ್ನು ಸ್ವಾಮೀಜಿ ವಿರುದ್ಧ ಹೆಣೆಯಲಾಗಿದೆ. ಪೋಕ್ಸೊ, ಎಸ್ಸಿ ಎಸ್ಟಿ ದೌ‌ರ್ಜನ್ಯ ತಡೆ, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ, ಬಾಲನ್ಯಾಯ ಅಪರಾಧಗಳಡಿ ಗುರುತರ ಕ್ರಿಮಿನಲ್‌ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+