ಚಿಕ್ಕಜಾಜೂರು-ಹುಬ್ಬಳ್ಳಿ ಜೋಡಿ ಮಾರ್ಗಕ್ಕೆ ಒಪ್ಪಿಗೆ

Posted By:
Subscribe to Oneindia Kannada

ಚಿತ್ರದುರ್ಗ, ಫೆಬ್ರವರಿ 18 : ಚಿಕ್ಕಜಾಜೂರು-ಹುಬ್ಬಳ್ಳಿ ನಡುವೆ ಜೋಡಿ ರೈಲು ಮಾರ್ಗ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸುಮಾರು 1,294 ಕೋಟಿ ರೂ.ಗಳ ಯೋಜನೆ ನಾಲ್ಕು ವರ್ಷಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟದ ಆರ್ಥಿಕ ವ್ಯವಹಾರಗಳ ಸಮಿತಿ ಸಭೆಯಲ್ಲಿ ಜೋಡಿ ರೈಲು ಮಾರ್ಗ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. 190 ಕಿ.ಮೀ.ಉದ್ದದ ಈ ಮಾರ್ಗದಲ್ಲಿ ಸದ್ಯ ಒಂದು ಮಾರ್ಗವಿದ್ದು, ಇದರ ಜೊತೆ ಮತ್ತೊಂದು ಮಾರ್ಗವನ್ನು ನಿರ್ಮಿಸಲಾಗುತ್ತದೆ. [ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಒಪ್ಪಿಗೆ ಸಿಕ್ಕಿತು]

hubballi

ಜೋಡಿ ರೈಲು ಮಾರ್ಗ ಯೋಜನೆಗೆ ಸುಮಾರು 1,294 ಕೋಟಿ ರೂ.ಗಳು ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಯೋಜನೆಗೆ ಬಜೆಟ್ ಹೊರಗೆ ಬೇರೆ ಮೂಲಗಳಿಂದ ಹಣ ಸಂಗ್ರಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. [ಗದಗ-ಕೂಡಗಿ-ಹುಟಗಿ ಜೋಡಿ ಮಾರ್ಗಕ್ಕೆ ಒಪ್ಪಿಗೆ]

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನಲ್ಲಿರುವ ಚಿಕ್ಕಜಾಜೂರಿನಿಂದ ದಾವಣಗೆರೆ, ಹರಿಹರ, ಹಾವೇರಿ ಮೂಲಕ ಜೋಡಿ ಮಾರ್ಗ ಹುಬ್ಬಳ್ಳಿ ತಲುಪಲಿದೆ. 4 ವರ್ಷಗಳಲ್ಲಿ ಈ ಜೋಡಿ ಮಾರ್ಗ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. [ಹಾವೇರಿ-ಶಿರಸಿ ರೈಲು ಮಾರ್ಗಕ್ಕೆ ಒಪ್ಪಿಗೆ ಸಿಗಲಿದೆಯೇ?]

ಈ ಮಾರ್ಗದಲ್ಲಿ ಈಗಾಗಲೇ ಬೆಂಗಳೂರು-ತುಮಕೂರು, ಅರಸೀಕೆರೆ-ಚಿಕ್ಕಜಾಜೂರು ನಡುವೆ ಜೋಡಿ ಮಾರ್ಗಗಳಿವೆ. ಹುಬ್ಬಳ್ಳಿ-ಲೋಂಡಾ-ವಾಸ್ಕೊ ಮಧ್ಯದ 2ನೇ ಮಾರ್ಗ ಕಾಮಗಾರಿ ಪ್ರಗತಿಯಲ್ಲಿದೆ. ಎಲ್ಲವೂ ಪೂರ್ಣಗೊಂಡರೆ ಮಧ್ಯ ಕರ್ನಾಟಕ, ಮಂಗಳೂರು ಬಂದರಿಗೂ ಸಂಪರ್ಕ ಕಲ್ಪಿಸಲು ಅನುಕೂಲವಾಗಲಿದೆ.

ಅಭಿನಂದನೆ ಸಲ್ಲಿಸಿದ ಜೋಶಿ : ಚಿಕ್ಕಜಾಜೂರು-ಹುಬ್ಬಳ್ಳಿ ನಡುವೆ ಜೋಡಿ ಮಾರ್ಗ ನಿರ್ಮಾಣಕ್ಕೆ ಒಪ್ಪಿಗೆ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಯೋಜನೆ ನೈಋತ್ಯ ರೈಲ್ವೆಯಲ್ಲಿನ ಅಭಿವೃದ್ಧಿಯಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಜೋಶಿ ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Cabinet Committee on Economic Affairs (CCEA) approved for Chikkajajur-Hubballi double rail line project. CCEA meeting chaired by Prime Minister Narendra Modi on Wednesday, February 17, 2016.
Please Wait while comments are loading...