ಮತ್ತೊಬ್ಬರ ಬಗ್ಗೆ ಮಾತನಾಡುವಾಗ ಸಂಸ್ಕಾರ ಇರಲಿ: ಸಿದ್ದರಾಮಯ್ಯಗೆ ನಾರಾಯಣಸ್ವಾಮಿ ತಿರುಗೇಟು
ಚಿತ್ರದುರ್ಗ, ಜನವರಿ 4: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿರಿಯ ರಾಜಕಾರಣಿ ಬಗ್ಗೆ ಗೌರವವಿದೆ. ಮತ್ತೊಬ್ಬ ರಾಜ್ಯದ ಮುಖ್ಯಮಂತ್ರಿ ಬಗ್ಗೆ ಮತನಾಡುವಾಗ ಸಮಯದಲ್ಲಿ ಗೌರವದಿಂದ ಸಂಬೋಧನೆ ಮಾಡುವುದು ಸಂಸ್ಕಾರ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ ಕಾಲದಲ್ಲಿ ಯಾವ ಅಭಿವೃದ್ಧಿ ಆಗಬೇಕು ಎನ್ನುವುದು ಜನರು ತಿರ್ಮಾನ ಮಾಡಲಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕೊಟ್ಟಂತಹ ಆಶ್ವಾಸನೆಗಳನ್ನು ಪೂರೆಸಿದ್ದೇನೆಂದು ಜಗತ್ ಜಾಹೀರಾತಿಗಾಗಿ ಮಾತನಾಡುತ್ತಿದ್ದಾರೆ. ಜನರು ಉತ್ತರ ಕೊಟ್ಟಿದ್ದಾರೆ. 2017ರಲ್ಲಿ ಜನರು ನಮ್ಮನ್ನು ಯಾಕೆ ತಿರಸ್ಕಾರ ಮಾಡಿದ್ದಾರೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ರಾಜ್ಯದ ಮುತ್ಸದ್ಧಿ ರಾಜಕಾರಣಿ ಮಾಜಿ ಸಿಎಂ ಮಗ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ನಾಯಿ ಎಂದು ಬಳಸುವುದು ಸಿದ್ದರಾಮಯ್ಯಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.

ಚಿತ್ರದುರ್ಗಕ್ಕೆ ಜೆಪಿ ನಡ್ಡಾ ಭೇಟಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಗುರುವಾರ ಚಿತ್ರದುರ್ಗ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ ಮುರಳಿ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರಿಂದ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಎ.ಮುರಳಿ, ಜೆಪಿ ನಡ್ಡಾ ಕರ್ನಾಟಕಕ್ಕೆ ಭೇಟಿ ನೀಡಿ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಗರಕ್ಕೆ ಆಗಮಿಸಿ, ಮದಕರಿ ನಾಯಕ ಪ್ರತಿಮೆ, ಅಂಬೇಡ್ಕರ್ ಪ್ರತಿಮೆ, ಓಬವ್ಚ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಮುರುಘಾ ಮಠದ ಅನುಭವ ಮಂಟಪದಲ್ಲಿ ಎಸ್ಸಿ ಎಸ್ಟಿ ಮತ್ತು ಒಬಿಸಿ ಮೂರ್ಚಾ ಸಭೆ ನಡೆಸಲಿದ್ದಾರೆ. ಇದಾದ ಬಳಿಕ ಮಾದಾರ ಚನ್ನಯ್ಯ ಶ್ರೀಗಳ ಮಠ ಹಾಗೂ ಸಿರಿಗೆರೆ ಮಠಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಸಂಜೆ 7:30ಕ್ಕೆ ದಾವಣಗೆರೆಯಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ, ಶಾಸಕ ತಿಪ್ಪಾರೆಡ್ಡಿ, ಸಿದ್ದೇಶ್ ಯಾದವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications