ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭದ್ರಾ ಮೇಲ್ಡಂಡೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ?

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಡಿಸೆಂಬರ್ 21: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಜೀವನಾಡಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಕೇಂದ್ರ ಜಲ ಆಯೋಗದ ಅಧಿಕಾರಿಗಳು ವೀಕ್ಷಣೆ ಮಾಡಿದರು. ವಾಣಿ ವಿಲಾಸ ಸಾಗರಕ್ಕೆ ಈಗಾಗಲೇ ಪ್ರಾಯೋಗಿಕವಾಗಿ ನೀರನ್ನು ಹರಿಸಿದ್ದು, ಇನ್ನಷ್ಟು ಕಾಮಗಾರಿ ಬಾಕಿ ಇದೆ.

ಕೇಂದ್ರ ಜಲ ಆಯೋಗದ ಜಿತೇಂದ್ರ ಪವಾರ್ ಜಾನಕಲ್ಲು‌ ಬಳಿಯ ಪ್ಯಾಕೇಜ್ 9ರ ಸುರಂಗ 1ರ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಭದ್ರಾ ಮೇಲ್ದಂಡೆ ಯೋಜನೆಗಾಗಿ ವಿವಿಧ ಸಂಘಟನೆಗಳು, ಜನ ಪ್ರತಿನಿಧಿಗಳು, ರೈತರು ಸುಮಾರು 40 ವರ್ಷಗಳ ಕಾಲ ಹೋರಾಟ ಮಾಡಿದ್ದಾರೆ.

 ಶ್ರೀಗಂಧದ ಸಹವಾಸವೇ ಬೇಡ; ಚಿತ್ರದುರ್ಗ ರೈತನ ಗೋಳಾಟ ಶ್ರೀಗಂಧದ ಸಹವಾಸವೇ ಬೇಡ; ಚಿತ್ರದುರ್ಗ ರೈತನ ಗೋಳಾಟ

ಸರ್ಕಾರ ಕಾಲ-ಕಾಲಕ್ಕೆ ತಕ್ಕಂತೆ ಹಣವನ್ನು ಬಿಡುಗಡೆ ಮಾಡಿದ್ದು, ಭದ್ರಾ ನದಿ ನೀರನ್ನು ವಾಣಿ ವಿಲಾಸ ಸಾಗರಕ್ಕೆ ಪ್ರಾಯೋಗಿಕವಾಗಿ ಹರಿಸಲಾಗಿದೆ. ಆದರೆ, ಮತ್ತಷ್ಟು ಕಾಮಗಾರಿ ಬಾಕಿ ಉಳಿದಿದ್ದು, ಇವುಗಳಲ್ಲಿ ಸುರಂಗ ಮಾರ್ಗದ ಕಾಮಗಾರಿಯೂ ಸೇರಿದೆ.

ಭದ್ರಾ ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಭದ್ರಾ ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Central Water Commission Inspects Upper Bhadra Project

ಸುರಂಗದ ಮೂಲಕ ನಿರಂತರವಾಗಿ ನೀರು ಹರಿಸಬೇಕು ಆಗ ಜಿಲ್ಲೆಗೆ ಭದ್ರಾ ನದಿ ನೀರು ನಿರಂತರವಾಗಿ ಹರಿಯಲಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಎಂಬ ಬೇಡಿಕೆಯೂ ಇದೆ.

ಭದ್ರಾ ಹುಲಿ ಯೋಜನೆ; ಚಿಕ್ಕಮಗಳೂರಿನ ಎನ್.ಆರ್.ಪುರ ಸ್ವಯಂ ಬಂದ್ಭದ್ರಾ ಹುಲಿ ಯೋಜನೆ; ಚಿಕ್ಕಮಗಳೂರಿನ ಎನ್.ಆರ್.ಪುರ ಸ್ವಯಂ ಬಂದ್

ಇದು ಕೂಡ ದಶಕಗಳ ಬೇಡಿಕೆಯಾಗಿದೆ. ಈ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಜಲಶಕ್ತಿ ಆಯೋಗದ ಅಧ್ಯಕ್ಷ ರಾಜೇಂದ್ರ ಕುಮಾರ್ ಜೈನ್‌ಗೆ ಕಳಿಸಲಾಗಿತ್ತು. ಇದಕ್ಕೆ ಪೂರಕವಾಗಿ ಕಳೆದ ಒಂದು ದಿನದ ಹಿಂದೆ ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದರು.

ಈ ಹಿನ್ನಲೆಯಲ್ಲಿ ಹೊಸದುರ್ಗ ತಾಲೂಕಿನ ಸಮೀಪ ನಡೆಯುತ್ತಿರುವ ಪ್ಯಾಕೇಜ್ 9ರ ಸುರಂಗ 1ರ ಕಾಮಗಾರಿಯನ್ನು ಜಿತೇಂದ್ರ ಪವಾರ್ ಅವರ ನೇತೃತ್ವದ ತಂಡ ವೀಕ್ಷಣೆ ಮಾಡಿತು. ಈ ಸಮಯದಲ್ಲಿ ನಿರ್ಮಿತಿ‌ ಕೇಂದ್ರದ ಇಂಜಿನಿಯರ್ ಮಲ್ಲಿಕಾರ್ಜುನ್ ಹಾಗೂ ಜೆಇ ಪ್ರಸಾದ್ ಜೊತೆಗಿದ್ದರು.

Recommended Video

ಭಿಕ್ಷುಕನಿಗೆ ಒಲಿದ ಅದೃಷ್ಟ !! | Oneindia Kannada

ತಂಡವು ಯೋಜನೆಯ ವರದಿಯನ್ನು ಶೀಘ್ರದಲ್ಲಿಯೇ ಕೇಂದ್ರ ಸರ್ಕಾರಕ್ಕೆ ನೀಡಲಿದೆ. ಬಳಿಕ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.

English summary
Central Water Commission (CWC) team members inspected the Upper Bhadra project tunnel work. Project may announced as national project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X