ಚಿತ್ರದುರ್ಗದ 6 ಜನರಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
ಚಿತ್ರದುರ್ಗ, ಫೆಬ್ರವರಿ, 29: ಸರ್ಕಾರದಿಂದ ನೇಮಕ ಮಾಡುವ ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಕ್ಕೆ ಕೊನೆಗೂ ಅಂತ್ಯ ಕಂಡಿದೆ. 44 ಜನರನ್ನು ನಿಗಮ ಮಂಡಳಿಗೆ ನೇಮಕ ಮಾಡುವ ಮೂಲಕ ಸರ್ಕಾರ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದು, ಇತ್ತ ಕೋಟೆ ನಾಡು ಚಿತ್ರದುರ್ಗದ ಆರು ಮಂದಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಲಭಿಸಿದೆ.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ವಂಚಿತರಾಗಿದ್ದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಬಾಬು ಅವರಿಗೆ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಸ್ಥಾನ ಸಿಕ್ಕಿದೆ. ಹೊಳಲ್ಕೆರೆಯ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಸವಿತಾ ರಘು ಅವರಿಗೆ ಕರ್ನಾಟಕ ಸಿಪಾಯಿ ಕರ್ಮಚಾರಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಜಿಎಸ್ ಮಂಜುನಾಥ್ ಅವರಿಗೆ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಸ್ಥಾನ, ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ ತಾಜ್ ಪೀರ್ ಅವರಿಗೆ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಮುಂಡರಗಿ ನಾಗರಾಜ್ ಅವರಿಗೆ ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಧ್ಯಕ್ಷ ಸ್ಥಾನ, ಮೆಹಬೂಬ್ ಪಾಷಾ, ಕಂಠೀರವ ಸ್ಟುಡಿಯೋ ನೀಡಲಾಗಿದೆ. ಇದಕ್ಕೂ ಮೊದಲು ನಿಗಮ ಮಂಡಳಿ ಪಟ್ಟಿಯಲ್ಲಿ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಹಾಗೂ ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಅವರಿಗೆ ನಿಗಮ ಮಂಡಳಿ ಸ್ಥಾನ ನೀಡಲಾಗಿದೆ.












Click it and Unblock the Notifications