ರಸ್ತೆ ಅಪಘಾತ : ಶಾಸಕ ಟಿ.ರಘುಮೂರ್ತಿ ಪುತ್ರ ದುರ್ಮರಣ
ಚಿತ್ರದುರ್ಗ, ಜೂನ್ 20 : ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಚಳ್ಳಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ರಘುಮೂರ್ತಿ ಪುತ್ರ ಅಭಿಷೇಕ್ ಸಾವನ್ನಪ್ಪಿದ್ದಾರೆ. ಹೊಸಕೋಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾನುವಾರ ರಾತ್ರಿ 10.30ರ ಸುಮಾರಿಗೆ ಹೊಸಕೋಟೆ-ಕೋಲಾರ ಹೆದ್ದಾರಿಯ ಅಟ್ಟೂರು ಬಳಿ ಫೋರ್ಡ್ ಫೀಗೋ ಕಾರು ಪಲ್ಪಿಯಾಗಿ ಈ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಅಭಿಷೇಕ್ (24) ಮೃತಪಟ್ಟಿದ್ದಾರೆ. ಉಳಿದ ನಾಲ್ವರು ಗಾಯಗೊಂಡಿದ್ದು ಬೆಂಗಳೂರಿನ ಹಾಸ್ ಮಾಟ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. [ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ]

ಮೃತಪಟ್ಟ ಅಭಿಷೇಕ್ ಬೆಂಗಳೂರಿನ ದಯಾನಂದ ಸಾಗರ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ. ಸ್ನೇಹಿತೆ ಹುಟ್ಟುಹಬ್ಬ ಆಚರಣೆ ಮಾಡಲು ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಅಭಿಷೇಕ್, ಪೂಜಾ, ಅನು, ಸುಮುಖ್, ದ್ರುಪದ್ ಇದ್ದರು. ಪೂಜಾ ಹುಟ್ಟು ಹಬ್ಬ ಆಚರಣೆ ಮಾಡಲು ಎಲ್ಲರೂ ತೆರಳುತ್ತಿದ್ದರು. [ಚಿತ್ರದುರ್ಗ : ಭೀಕರ ಅಪಘಾತ, 7 ವಿದ್ಯಾರ್ಥಿನಿಯರು ಸಾವು]
ಹೊಸಕೋಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೇಗವಾಗಿ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.












Click it and Unblock the Notifications