ಚಿತ್ರದುರ್ಗ, ಚಳ್ಳಕೆರೆ ಹಾಗೂ ಚಿಕ್ಕಜಾಜೂರು ರೈಲ್ವೆ ನಿಲ್ದಾಣಗಳ ಮೇಲ್ದರ್ಜೆಗೆ, ಇದಕ್ಕೆ ತಗಲುವ ವೆಚ್ಚ ಎಷ್ಟು ಕೋಟಿ ಗೊತ್ತಾ?
ಚಿತ್ರದುರ್ಗ, ಜನವರಿ, 09: ಚಿತ್ರದುರ್ಗ, ಚಳ್ಳಕೆರೆ ಹಾಗೂ ಚಿಕ್ಕಜಾಜೂರು ರೈಲ್ವೆ ನಿಲ್ದಾಣಗಳನ್ನು ಅಮೃತ್ ಯೋಜನೆಯಡಿ ಮೇಲ್ದರ್ಜೆಗೇರಿಸಲಾಗುವುದು ಎಂದು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಚಿತ್ರದುರ್ಗದಲ್ಲಿ ಹೇಳಿದರು.
ಚಿತ್ರದುರ್ಗ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ, ನೀಲನಕ್ಷೆ ಹಾಗೂ ಕಾಮಗಾರಿ ಸ್ಥಳ ವೀಕ್ಷಿಸಿ, ಅಮೃತ್ ಯೋಜನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಂದಾಜು 16 ಕೋಟಿ ರೂಪಾಯಿ ವೆಚ್ಚಕ್ಕೆ ಟೆಂಡರ್ ಕರೆಯಲಾಗಿದೆ.

ಚಿತ್ರದುರ್ಗ ರೈಲು ನಿಲ್ದಾಣದಲ್ಲಿ ದಾವಣಗೆರೆ-ತುಮಕೂರು ನೇರ ರೈಲ್ವೇ ಯೋಜನೆಯಲ್ಲಿ ಕಾಮಗಾರಿಗಳನ್ನು ಹೊರತುಪಡಿಸಿ, ಅಮೃತ್ ಯೋಜನೆಯಡಿ ಮೂಲಭೂತ ಸೌಕರ್ಯ ಹಾಗೂ ಆಡಳಿತಾತ್ಮಕ ಕಚೇರಿಯನ್ನು ನಿರ್ಮಿಸಲಾಗುತ್ತಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ ಅಂತಾರಾಷ್ಟ್ರೀಯ ಮಟ್ಟದ ರೈಲ್ವೇ ನಿಲ್ದಾಣ ನಿರ್ಮಿಸಲಾಗುವುದು. 02.36 ಕೋಟಿ ರೂಪಾಯಿ ವೆಚ್ಚದಲ್ಲಿ ಚಳ್ಳಕೆರೆ ರೈಲ್ವೇ ಫ್ಲಾಟ್ ಫಾರಂ ಅಭಿವೃದ್ಧಿ ಪಡಿಸಲಾಗುತ್ತಿದೆ. ಮೈಸೂರಿನಲ್ಲಿ ನಡೆದ ರೈಲ್ವೆ ಯೋಜನೆ ಪ್ರಗತಿ ಪರಿಶೀಲನೆ ಸಭೆಯಲ್ಲಿ, ಜಿಲ್ಲೆಯ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಸುಮಾರು 18 ಕೋಟಿ ರೂಪಾಯಿ ಬಿಡುಗಡೆ ಆಗಿದೆ ಎಂದರು.
ಕಾಮಗಾರಿಗಳನ್ನು ಆರಂಭಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ಜನಪ್ರತಿನಿಧಿಗಳೊಂದಿಗೆ ಸೋಮವಾರ (ಜನವರಿ 09) ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಶೀಘ್ರವೇ ಅಮೃತ್ ಯೋಜನೆಗೆ ಪ್ರಧಾನ ಮಂತ್ರಿಗಳು ಚಾಲನೆ ನೀಡುವರು ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.
ಕಾಯ್ದಿರಿಸಿದ 20,000 ಟಿಕೆಟ್ ರದ್ದು
ಮಳೆಗಾಲ ಮುಗಿದು ಇದೀಗ ಚಳಿಗಾಲ ಆವರಿಸಿದ್ದು, ಬಹುತೇಕ ರಾಜ್ಯಗಳಲ್ಲಿ ಬೆಳಗ್ಗೆ 10 ಗಂಟೆಯಾದರೂ ಮಂಜು ಕವಿದ ವಾತಾವರಣವೇ ಮುಂದುವರೆಯುತ್ತಿದೆ. ಅದರಲ್ಲೂ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ದಟ್ಟವಾದ ಮಂಜು ಕವಿದ ಹಿನ್ನೆಲೆ ಭಾರತೀಯ ರೈಲ್ವೆಯ ಮೊರಾದಾಬಾದ್ ವಿಭಾಗವು ಡಿಸೆಂಬರ್ 2023ರಲ್ಲಿ 20,000 ಕಾಯ್ದಿರಿಸಿದ ಟಿಕೆಟ್‌ಗಳ ರದ್ದು ಮಾಡಲಾಗಿದೆ. ಹಾಗಾದರೆ ರೈಲ್ವೇ ಇಲಾಖೆಗೆ ಆದ ನಷ್ಟ ಎಷ್ಟು ಕೋಟಿ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.
ಮೊರಾದಾಬಾದ್ ವಿಭಾಗದ ಡಿವಿಜನಲ್ ರೈಲ್ವೇ ಮ್ಯಾನೇಜರ್ ರಾಜ್ ಕುಮಾರ್ ಸಿಂಗ್ ನೀಡಿದ ಮಾಹಿತಿ ಪ್ರಕಾರ, ರಿಸರ್ವೇಶನ್ ಅಡಿಯಲ್ಲಿ ಟಿಕೆಟ್ ಕಾಯ್ದಿರಿಸಿದ್ದ ಪ್ರಯಾಣಿಕರು ರೈಲುಗಳ ವಿಳಂಬದಿಂದ ತಮ್ಮ ಟಿಕೆಟ್‌ಗಳನ್ನು ರದ್ದುಪಡಿಸಿದ ಹಿನ್ನೆಲೆ ಇಲಾಖೆಗೆ ಸುಮಾರು 1.22 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿಸಿದ್ದಾರೆ.
ಒಟ್ಟು ರದ್ದಾದ ಕಾಯ್ದಿರಿಸಲಾದ ಟಿಕೆಟ್‌ಗಳಲ್ಲಿ 4,230 ಬರೇಲಿಯಲ್ಲಿ ರದ್ದುಗೊಳಿಸಲಾಗಿದ್ದು, 3,239 ಟಿಕೆಟ್‌ಗಳನ್ನು ಮೊರಾದಾಬಾದ್‌ನಲ್ಲಿ ರದ್ದುಗೊಳಿಸಲಾಗಿದೆ. 3,917 ಟಿಕೆಟ್‌ಗಳು ಹರಿದ್ವಾರದಲ್ಲಿ ಮತ್ತು 2,448 ಟಿಕೆಟ್‌ಗಳನ್ನು ರದ್ದುಗೊಳಿಸಲಾಗಿದೆ ಮತ್ತು ಇತರವುಗಳಲ್ಲಿ 2,448 ರದ್ದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಮತ್ತೊಂದೆಡೆ ಜನವರಿ 6ರವರೆಗೆ ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಪೂರ್ವ ರಾಜಸ್ಥಾನದ ಕೆಲವು ಭಾಗಗಳಲ್ಲಿ ರಾತ್ರಿ ಮತ್ತು ಬೆಳಗ್ಗೆ ವೇಳೆ ದಟ್ಟವಾದ ಮಂಜಿನ ಪರಿಸ್ಥಿತಿಗಳು ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications