ಚಿತ್ರದುರ್ಗ : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ಸಾವು

ಚಿತ್ರದುರ್ಗ, ಮೇ 20 : ಸಚಿವರನ್ನು ಭೇಟಿಯಾಗಲು ಬೆಂಗಳೂರಿಗೆ ತೆರಳಿದ್ದ ಚಿತ್ರದುರ್ಗ ನಗರ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

ಸರ್ಕಲ್ ಇನ್ಸ್‌ಪೆಕ್ಟರ್ ನಾಗರಾಜ್ ಹೊನ್ನೂರು (37) ಸಮಾಜಕಲ್ಯಾಣ ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಆಂಜನೇಯ ಅವರನ್ನು ನೋಡಲು ಧಾರವಾಡ ಲೋಕಾಯುಕ್ತ ಎಸ್ಪಿ ಪರಶುರಾಮ್ ಜೊತೆ ಮಂಗಳವಾರ ಬೆಂಗಳೂರಿಗೆ ತೆರಳಿದ್ದರು. [ಇವರು ಸಿವಿ ರಾಮನ್ ನಗರದ 'ಸಿಂಗಂ']

nagaraj honnur

ಜಯಮಹಲ್‌ ಬಳಿ ಇರುವ ಸಚಿವರ ಮನೆಗೆ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗ ನಾಗರಾಜ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. [ಚಿತ್ರದುರ್ಗದಲ್ಲಿ ಐಐಟಿ ಸ್ಥಾಪಿಸಲು ಪ್ರಧಾನಿಗೆ ಪತ್ರ]

ನಾಗರಾಜ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಯಿತು. ಬುಧವಾರ ಪರೀಕ್ಷೆ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಭಾನುವಾರ ನಾಗರಾಜ್ ಕುಟುಂಬದೊಂದಿಗೆ ತಿರುಪತಿಗೆ ಹೋಗಿ ಬಂದಿದ್ದರು.

ಸಾಹಿತ್ಯದ ಬಗ್ಗೆ ಅಪಾರವಾದ ಆಸಕ್ತಿ ಹೊಂದಿದ್ದ ನಾಗರಾಜ್ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪೊಲೀಸ್ ಇಲಾಖೆಗೆ ಸೇರುವ ಮೊದಲು ಕೆಲವು ಕಾಲ ಅವರು ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿದ್ದರು. ಬಳ್ಳಾರಿ ಜಿಲ್ಲೆಯ ಕಮಲಾಪುರ, ಗಂಡಸಿ, ಹಾಸನ, ಸಕಲೇಶಪುರದಲ್ಲಿ ಅವರು ಕಾರ್ಯನಿರ್ವಹಿಸಿದ್ದಾರೆ. 9 ತಿಂಗಳ ಹಿಂದೆ ಚಿತ್ರದುರ್ಗಕ್ಕೆ ವರ್ಗಾವಣೆಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+