Breaking; ಪರಿಷತ್ ಫೈಟ್; ಚಿತ್ರದುರ್ಗದಲ್ಲಿ ಬಿಜೆಪಿಗೆ ಗೆಲುವು

ಚಿತ್ರದುರ್ಗ, ಡಿಸೆಂಬರ್ 14; ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಮಂಗಳವಾರ ನಡೆಯುತ್ತಿದೆ. ಚಿತ್ರದುರ್ಗ- ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಎಸ್. ನವೀನ್ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 354 ಮತಗಳ ಅಂತರದಿಂದ ಜಯಗಳಿಸಿದರು.

ಚಿತ್ರದುರ್ಗ-ದಾವಣಗೆರೆ ಜಿಲ್ಲೆಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ. ಸೋಮಶೇಖರ್ ಸೋಲು ಕಂಡಿದ್ದು, ಬಿಜೆಪಿಯ ಕೆ. ಎಸ್. ನವೀನ್ ಮೇಲ್ಮನೆಗೆ ಆಯ್ಕೆಯಾದರು.

ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಇಲ್ಲದ ಕಾರಣ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳಿಬ್ಬರ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿತ್ತು. ಇಬ್ಬರೂ ಅಭ್ಯರ್ಥಿಗಳ ಗೆಲುವಿಗಾಗಿ ಪಕ್ಷದ ನಾಯಕರು ಭರ್ಜರಿ ಪ್ರಚಾರ ಕೈಗೊಂಡಿದ್ದರು.

Chitradurga Davanagere MLC Election Result 2021: BJP Candidate KS Naveen Won By 354 Votes

ಕಳೆದ ಎರಡು ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದ ಬಿಜೆಪಿಯ ಕೆ. ಎಸ್. ನವೀನ್ ಮೂರನೇ ಬಾರಿಗೆ ಗೆಲುವು ಕಂಡಿದ್ದಾರೆ. ಹಾಲಿ ಪರಿಷತ್ ಸದಸ್ಯ ಸ್ಥಾನವನ್ನು ಕಾಂಗ್ರೆಸ್ ಕಳೆದುಕೊಂಡಿದೆ.

ಮತ ಎಣಿಕೆ: ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು (ಹೊಸ ಕಟ್ಟಡ) ದಲ್ಲಿ ಮತ ಎಣಿಕೆ ಕಾರ್ಯ ಆರಂಭಗೊಂಡಿತು. ಮತ ಎಣಿಕೆಗೆ 14 ಟೇಬಲ್ ವ್ಯವಸ್ಥೆ ಮಾಡಲಾಗಿತ್ತು. ಒಂದು ಟೇಬಲ್‌ಗೆ ಒಬ್ಬ ಮೇಲ್ವಿಚಾರಕ ಹಾಗೂ ಇಬ್ಬರು ಎಣಿಕೆ ಸಹಾಯಕರನ್ನು ನೇಮಕ ಮಾಡಲಾಗಿತ್ತು.

ವಿಧಾನ ಪರಿಷತ್ ಚುನಾವಣೆಗೆ ಡಿಸೆಂಬರ್ 10ರ ಶುಕ್ರವಾರ ಮತದಾನ ನಡೆದಿತ್ತು. ಶೇ 99.88 ರಷ್ಟು ಮತದಾನ ಶಾಂತಿಯುತವಾಗಿ ನಡೆದಿತ್ತು. ಬಿಜೆಪಿ ಕಾರ್ಯಕರ್ತರು ಮತದಾನದ ದಿನವೇ ತಮ್ಮ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವ್ಯಾಪ್ತಿಗೆ ದಾವಣಗೆರೆ ಜಿಲ್ಲೆಯ ಹರಿಹರ, ದಾವಣಗೆರೆ ಹಾಗೂ ಜಗಳೂರು ತಾಲ್ಲೂಕು ಸೇರಿವೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕು ಸೇರಿದಂತೆ ದಾವಣಗೆರೆ ಜಿಲ್ಲೆಯ ಮೂರು ತಾಲ್ಲೂಕುಗಳು ಹಾಗೂ ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕು ಸೇರಿವೆ.

ಗ್ರಾಮ ಪಂಚಾಯಿತಿ, ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ, ನಗರಪಾಲಿಕೆ ಕಚೇರಿಗಳಲ್ಲಿ ಮತದಾರರಾದ ಸ್ಥಳೀಯ ಸಂಸ್ಥೆಗಳ ಸದಸ್ಯರು ಹಾಗೂ ಶಾಸಕರು ಹಾಗೂ ಸಂಸದರು ಮತ ಚಲಾಯಿಸಿದ್ದರು.

ವಿಧಾನ ಪರಿಷತ್ ಚುನಾವಣೆಗೆ ಸ್ಥಳೀಯರು ಯಾರು ಮುಂದೆ ಬಾರದ ಕಾರಣ ಬಿ. ಸೋಮಶೇಖರ್‌ಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು. ಚುನಾವಣೆ ಸಂದರ್ಭದಲ್ಲಿ ಹಣ ಹಂಚುವಾಗ ತಾರತಮ್ಯ ಮಾಡಲಾಗಿದೆ ಜೊತೆಗೆ ಲೀಡರ್ ಎಂದು ಗುರುತಿಸಿಕೊಂಡವರು ಹಣ ಹಂಚುವಾಗ ಸದಸ್ಯರುಗಳಿಗೆ ತಲುಪಸದೇ ಇದ್ದುದ್ದರಿಂದ ಸೋಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಅಭ್ಯರ್ಥಿಗಳು ಪಡೆದ ಮತ

* ಬಿಜೆಪಿಯ ಕೆ. ಎಸ್. ನವೀನ್ 2,629

* ಕಾಂಗ್ರೆಸ್‌ನ ಬಿ. ಸೋಮಶೇಖರ್ 2, 271

* ಪಕ್ಷೇತರ ಅಭ್ಯರ್ಥಿ 16 ಮತಗಳು.

* ತಿರಸ್ಕತ ಮತಗಳು 144

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+