ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಜಿಲ್ಲೆಯ ಜನ: ಡಿಸಿ ವಿನೋತ್ ಪ್ರಿಯಾ ಸ್ಪಷ್ಟನೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಏಪ್ರಿಲ್ 02: ಮಾರ್ಚ್ ನಲ್ಲಿ ದೆಹಲಿಯ ನಿಜಾಮುದ್ದೀನ್ ಪ್ರದೇಶ ಅಲಾಮಿ ಮಾರ್ಕಾಜ್ ಬಂಗ್ಲೆವಾಲಿ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೂವರು ವ್ಯಕ್ತಿಗಳು ಇರುವುದಾಗಿ ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಮಾಹಿತಿ ನೀಡಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ರಾಜ್ಯ ಸರ್ಕಾರ ಪಟ್ಟಿ ಕೊಟ್ಟ ಪ್ರಕಾರ ಚಿತ್ರದುರ್ಗ ಜಿಲ್ಲೆಯಿಂದ ಸಭೆಯಲ್ಲಿ ಮೂರು ಜನ ಇದ್ದಾರೆ. ಅದರಲ್ಲಿ ಒಬ್ಬರು ಇನ್ನೂ ದೆಹಲಿಯಲ್ಲಿ ಇದ್ದಾರೆ. ಇನ್ನೊಬ್ಬರನ್ನು ಕ್ವಾರಂಟೈನ್ ನಲ್ಲಿ ಇರಿಸಿದ್ದು, ಮತ್ತೊಬ್ಬ ವ್ಯಕ್ತಿ ಸಭೆಗೆ ಹೋಗಿರಲಿಲ್ಲ, ಆದರೆ ನಿಜಾಮುದ್ದೀನ್ ಎಕ್ಸ್‌ಪ್ರೆಸ್‌ ರೈಲ್ವೆ ಉದ್ಯೋಗಿಯಾಗಿದ್ದು, ಅವರೂ ಕ್ವಾರಂಟೈನ್ ನಲ್ಲಿ ಇದ್ದಾರೆ" ಎಂದು ತಿಳಿಸಿದರು.

ದೆಹಲಿ ನಿಜಾಮುದ್ದೀನ್ ಮಸೀದಿ ಕಾರ್ಯಕ್ರಮದಲ್ಲಿ ಚಿತ್ರದುರ್ಗದ 8 ಜನ ಭಾಗಿ?ದೆಹಲಿ ನಿಜಾಮುದ್ದೀನ್ ಮಸೀದಿ ಕಾರ್ಯಕ್ರಮದಲ್ಲಿ ಚಿತ್ರದುರ್ಗದ 8 ಜನ ಭಾಗಿ?

Chitradurga DC Clarification On People Participated In Dehli Nijamuddin Religious Meet

ಹಿರಿಯೂರು ತಾಲೂಕಿನಲ್ಲಿ 8 ಜನರು ಪಠಾಣ್ ನಿಂದ ಬಂದಿದ್ದರು. ಹಿರಿಯೂರು ಪಟ್ಟಣಕ್ಕೆ ಬಂದಿದ್ದ ಆ ಎಂಟು ಜನರನ್ನೂ ಇನ್ಸ್ಟಿಟ್ಯೂಟ್ ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ಹೇಳಿದರು.

English summary
chitradurga dc vinot priya gave clarification on people who participatedin dehli nijamuddin religious meet from district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X