ಅಧಿಕಾರ ಸ್ವೀಕರಿಸುವ ಮುನ್ನ ನಾಯಕನಹಟ್ಟಿ ತಿಪ್ಪೇರದ್ರಸ್ವಾಮಿ ದರ್ಶನ ಪಡೆದ ಚಿತ್ರದುರ್ಗ ಜಿಲ್ಲೆಯ ನೂತನ ಡಿಸಿ-ಯಾಕೆ ಗೊತ್ತಾ?
ಚಿತ್ರದುರ್ಗ, ಜನವರಿ, 23: ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಅವರು ಇಂದು (ಜನವರಿ 23) ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದರ್ಶನ ಪಡೆದು ಗಮನ ಸೆಳೆದರು.
ಇಲ್ಲಿವರೆಗೂ ಜಿಲ್ಲಾಧಿಕಾರಿಯಾಗಿದ್ದ ದಿವ್ಯಪ್ರಭು ಜಿ.ಆರ್.ಜೆ. ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ, ವೆಂಕಟೇಶ್ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿರುವುದರಿಂದ, ಟಿ.ವೆಂಕಟೇಶ್ ಅವರು ಮಂಗಳವಾರದಂದು ಅಧಿಕಾರ ವಹಿಸಿಕೊಂಡರು. ಇನ್ನು ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.

2015ರ ಬ್ಯಾಚ್‍ನ ಐಎಎಸ್ ಅಧಿಕಾರಿ ಆಗಿರುವ ಅವರು ಟಿ.ವೆಂಕಟೇಶ್ ಅವರು, ಈ ಮೊದಲು ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ, ಹರಪನಹಳ್ಳಿ ಉಪವಿಭಾಗಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ ಅಪರ ಜಿಲ್ಲಾಧಿಕಾರಿ, ಮೈಸೂರು ಜಿಲ್ಲೆ ಅಪರ ಜಿಲ್ಲಾಧಿಕಾರಿ, ರಾಜ್ಯ ಪುರಾತತ್ವ ಇಲಾಖೆ ಆಯುಕ್ತರು, ಕೆಎಸ್‌ಆರ್‌ಟಿಸಿ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಹಾಗೂ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನವಾಗಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಬರ ಪರಿಹಾರ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು. ಅಲ್ಲದೆ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಅರ್ಹ ಎಲ್ಲ ಫಲಾನುಭವಿಗಳಿಗೆ ತಲುಪಿಸಲು ಆದ್ಯತೆ ನೀಡಲಾಗುವುದು ಎಂದು ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಪ್ರಭಾರ ಉಪವಿಭಾಗಾಧಿಕಾರಿ ವಿವೇಕ್, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಬಿ.ಆನಂದ್ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಇದಕ್ಕೂ ಮುನ್ನ ಚಳ್ಳಕೆರೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ನಾಯಕನಹಟ್ಟಿಯ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ತಿಪ್ಪೇರುದ್ರಸ್ವಾಮಿ ದೇವರ ದರ್ಶನ ಮಾಡಿ, ಆಶೀರ್ವಾದ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿ, ಅಧಿಕಾರ ವಹಿಸಿಕೊಂಡರು.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications