ಚಿತ್ರದುರ್ಗ ಜೆಡಿಎಸ್ ತೊರೆದಿದ್ದ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಪಪ್ಪಿ ಮುನ್ನಡೆ
ಚಿತ್ರದುರ್ಗ, ಮೇ.13: ಭಾರಿ ಕುತೂಹಲಕ್ಕೆ ಕಾರಣವಾಗಿರುವ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಸಿ ವೀರೇಂದ್ರ ಪಪ್ಪಿ ಮುನ್ನಡೆ ಸಾಧಿಸುತ್ತಿದ್ದಾರೆ. ಕಳೆದ ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಇವರು, ಈ ಬಾರಿ ಕಾಂಗ್ರೆಸ್ ಟಿಕೆಟ್‌ನಿಂದ ಕಣಕ್ಕಿಳಿದಿದ್ದಾರೆ. ಐರು ಬಾರಿ ಶಾಸಕರಾಗಿ ಒಂದು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದ ಜಿ.ಎಚ್ ತಿಪ್ಪಾರೆಡ್ಡಿಗೆ ಬಿಜೆಪಿ ಟಿಕೆಟ್ ನೀಡಿದೆ. ಇಬ್ಬರ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ.
ಇನ್ನು, ಚಿತ್ರದುರ್ಗದ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಆರಿ ಸ್ಥಾನಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಜಿ.ಎಚ್ ತಿಪ್ಪಾರೆಡ್ಡಿಗೆ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ವಿರೇಂದ್ರ ಪಪ್ಪಿ ವಿರುದ್ಧ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದರು. ಆದರೆ ಈ ಬಾರಿ ವೀರೇಂದ್ರ ಪಪ್ಪಿ ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಿದ್ದಾರೆ. ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಇತ್ತ, ವೀರೇಂದ್ರ ಪಪ್ಪಿ ಅವರು ಕಾಂಗ್ರೆಸ್ ಪಾಲಾಗಿರುವ ಕಾರಣ ಜೆಡಿಎಸ್ ರಘು ಆಚಾರ್ ಅವರಿಗೆ ಟಿಕೆಟ್ ನೀಡಿ ಚುನಾವಣಾ ಕಣಕ್ಕೆ ನಿಲ್ಲಿಸಿದೆ.

ಚುನಾವಣಾ ಆಯೋಗದ ಮಾಹಿತಿಯಂತೆ ವೀರೇಂದ್ರ ಪಪ್ಪಿ ಅವರು 29, 616 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಜಿ.ಎಚ್ ತಿಪ್ಪಾರೆಡ್ಡಿ 17,716 ಮತಗಳನ್ನು ಗಳಿಸಿದ್ದರೇ, ಜೆಡಿಎಸ್ ಅಭ್ಯರ್ಥಿ ರಘು ಆಚಾರ್ 883 ಮತಗಳನ್ನು ಪಡೆದಿದ್ದಾರೆ. ಕಣದಲ್ಲಿ 21 ಮಂದಿ ಕಣದಲ್ಲಿದ್ದಾರೆ.












Click it and Unblock the Notifications