ಚಿತ್ರದುರ್ಗ: ಜೆಡಿಎಸ್ ತೊರೆದಿದ್ದ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಪಪ್ಪಿ ಗೆಲುವು
ಚಿತ್ರದುರ್ಗ, ಮೇ.13: ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಸಿ ವೀರೇಂದ್ರ ಪಪ್ಪಿ ಭರ್ಜರಿ ಜಯ ಸಾಧಿಸಿದ್ದಾರೆ. ಕಳೆದ ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಇವರು, ಈ ಬಾರಿ ಕಾಂಗ್ರೆಸ್ ಟಿಕೆಟ್‌ನಿಂದ ಕಣಕ್ಕಿಳಿದಿದ್ದರು. ಐರು ಬಾರಿ ಶಾಸಕರಾಗಿ ಒಂದು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದ ಜಿ.ಎಚ್ ತಿಪ್ಪಾರೆಡ್ಡಿಗೆ ಬಿಜೆಪಿ ಟಿಕೆಟ್ ನೀಡಿತ್ತು, ಈ ಬಾರಿ ಕಾಂಗ್ರೆಸ್‌ಗೆ ಮಣೆ ಹಾಕಿದ್ದಾರೆ.
ಕಳೆದ ಬಾರಿಯ ಚುನಾವಣೆಯಲ್ಲಿ ಜಿ.ಎಚ್ ತಿಪ್ಪಾರೆಡ್ಡಿ, ತಮ್ಮ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ವಿರೇಂದ್ರ ಪಪ್ಪಿ ವಿರುದ್ಧ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದರು. ಆದರೆ ಈ ಬಾರಿ ವೀರೇಂದ್ರ ಪಪ್ಪಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಜಯ ಗಳಿಸಿದ್ದಾರೆ. ಇತ್ತ, ವೀರೇಂದ್ರ ಪಪ್ಪಿ ಅವರು ಕಾಂಗ್ರೆಸ್ ಪಾಲಾಗಿರುವ ಕಾರಣ ಜೆಡಿಎಸ್ ರಘು ಆಚಾರ್ ಅವರಿಗೆ ಟಿಕೆಟ್ ನೀಡಿ ಚುನಾವಣಾ ಕಣಕ್ಕೆ ಇಳಿಸಿತ್ತು.

ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಕೈ ಹೊಡೆತಕ್ಕೆ ಬಿಜೆಪಿ ಛಿದ್ರಾ ಛಿದ್ರವಾಗಿದೆ. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದಲ್ಲಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಚಳ್ಳಕೆರೆ ಕೈ ಅಭ್ಯರ್ಥಿ ಟಿ. ರಘುಮೂರ್ತಿ, ಮೊಳಕಾಲ್ಮೂರು ಎನ್ ವೈ ಗೋಪಾಲಕೃಷ್ಣ ಹಾಗೂ ಚಿತ್ರದುರ್ಗ ಕೆಸಿ ವೀರೇಂದ್ರ ಪಪ್ಪಿ ಗೆಲುವು ಸಾಧಿಸಿದ್ದಾರೆ. ಇನ್ನು ಹಿರಿಯೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ ಸುಧಾಕರ್ ಹಾಗೂ ಹೊಸದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಜಿ ಗೋವಿಂದಪ್ಪ ಗೆಲುವು ಸಾಧಿಸಿದ್ದಾರೆ.












Click it and Unblock the Notifications