ಚಿತ್ರದುರ್ಗಕ್ಕೆ ಸಿಕ್ಕಿತು ಪಾಸ್‌ಪೋರ್ಟ್ ಸೇವಾಕೇಂದ್ರ

ಚಿತ್ರದುರ್ಗ, ನವೆಂಬರ್ 20 : ಚಿತ್ರದುರ್ಗದಲ್ಲಿ ಪಾಸ್‌ಪೋರ್ಟ್‌ ಸೇವಾಕೇಂದ್ರ ತೆರೆಯಬೇಕು ಎಂಬ ಹಲವು ವರ್ಷಗಳ ಬೇಡಿಕೆಗೆ ಒಪ್ಪಿಗೆ ಸಿಕ್ಕಿದೆ. 2019ರ ಜನವರಿಯಿಂದ ಸೇವಾಕೇಂದ್ರ ಕಾರ್ಯಾರಂಭ ಮಾಡಲಿದೆ.

ಚಿತ್ರದುರ್ಗದ ಸಂಸದ ಬಿ.ಎನ್.ಚಂದ್ರಪ್ಪ ಸೋಮವಾರ ನಗರದ ಮುಖ್ಯ ಅಂಚೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಚೇರಿಯಲ್ಲಿ ಪಾಸ್‌ಪೋರ್ಟ್ ಸೇವಾಕೇಂದ್ರ ಆರಂಭಿಸಲು ಇರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದರು, 'ಚಿತ್ರದುರ್ಗಕ್ಕೆ ಪಾಸ್‌ಪೋರ್ಟ್ ಸೇವಾಕೇಂದ್ರ ಬೇಕು ಎನ್ನುವ ಬೇಡಿಕೆ ಈಗ ಈಡೇರಿದೆ. ಪಾಸ್‌ಪೋರ್ಟ್ ಮಾಡಿಸಲು ಹುಬ್ಬಳ್ಳಿ, ಬೆಂಗಳೂರಿಗೆ ಹೋಗುವುದು ತಪ್ಪಲಿದೆ' ಎಂದರು.

Chitradurga gets Passport Seva Kendra

ಜನಪ್ರತಿನಿಧಿಗಳ ನಿರಂತರ ಪ್ರಯತ್ನ, ಅಧಿಕಾರಿಗಳ ವರದಿಗಳನ್ನು ಪರಿಶೀಲನೆ ಮಾಡಿರುವ ಕೇಂದ್ರ ಸರ್ಕಾರ ಪಾಸ್‌ಪೋರ್ಟ್ ಸೇವಾಕೇಂದ್ರ ತೆರೆಯಲು ಒಪ್ಪಿಗೆ ನೀಡಿದೆ. 2019ರ ಜನವರಿಯಿಂದ ಮುಖ್ಯ ಅಂಚೆ ಕಚೇರಿಯಲ್ಲಿ ಪಾಸ್‌ಪೋರ್ಟ್‌ ಕೇಂದ್ರ ಆರಂಭವಾಗಲಿದೆ.

'ಕೇಂದ್ರ ಸರ್ಕಾರ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಮಂಜುರು ಮಾಡಿದೆ. ಅಂಚೆ ಕಚೇರಿಯಲ್ಲಿ ಕೇಂದ್ರ ಆರಂಭಿಸಲು ಪರಿಶೀಲನೆ ನಡೆಸಲಾಗಿದೆ. ಜನವರಿ ಮೊದಲ ವಾರದಲ್ಲಿ ಕೇಂದ್ರವನ್ನು ಆರಂಭಿಸಲು ಎಲ್ಲಾ ಸಿದ್ಧತೆಗಳು ನಡೆದಿವೆ' ಎಂದು ಸಂಸದ ಚಂದ್ರಪ್ಪ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+