ಕೋಟೆನಾಡು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಎ.ನಾರಾಯಣಸ್ವಾಮಿಗೆ ಬಿಜೆಪಿ ಟಿಕೆಟ್ ಬಹುತೇಕ ಫೈನಲ್‌

ಚಿತ್ರದುರ್ಗ, ಮಾರ್ಚ್‌, 15: ಲೋಕಸಭಾ ಚುನಾವಣೆ ದಿನಕಳೆದಂತೆ ರಣ ಬೀಸಿಲಿಗೆ ರಂಗೇರುತ್ತಿದ್ದು, ಇತ್ತ ಕೋಟೆ ನಾಡು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಬಹುತೇಕ ಪಿಕ್ಸ್ ಆಗಿದ್ದು, ಈ ಬಗ್ಗೆ ಆಪ್ತ ಮೂಲೆಗಳಿಂದ ಮಾಹಿತಿ ಹೊರಬಿದ್ದಿದೆ. ಇನ್ನು ಇಂದು ಅಥವಾ ನಾಳೆ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಎ.ನಾರಾಯಣಸ್ವಾಮಿ ಅವರು ನಾನು ಚುನಾವಣೆಗೆ ಸ್ಪರ್ಧಿಸಲ್ಲ. ಭ್ರಷ್ಟಾ ರಾಜಕಾರಣದಲ್ಲಿ ರಾಜಕೀಯ ಮಾಡುವುದು ತುಂಬಾ ಕಷ್ಟ ಇದೆ ಎಂದು ರಾಜಕೀಯದಿಂದ ದೂರ ಸರಿಯುವ ಮಾತುಗಳನ್ನಾಡಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಹೆಸರು ಕೇಳಿ ಬಂದಿತ್ತು.

Chitradurga Lok Sabha constituency BJP ticket for A Narayanaswamy

ಆದರೆ ಗೋವಿಂದ ಕಾರಜೋಳ ಅವರು ನಾನು ಸ್ಪರ್ಧಿಸುವುದಿಲ್ಲ. ಎ.ನಾರಾಯಣಸ್ವಾಮಿಯವರೇ ಸ್ಪರ್ಧಿಸಲಿ ಎಂದು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಅದರಂತೆಯೇ ಕೇಂದ್ರ ಹಾಲಿ ಸಚಿವ ಎ.ನಾರಾಯಣಸ್ವಾಮಿ ಅವರು ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ.

ಕಳೆದ 2019ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಸೋಲಿಸಿದ್ದರು. ಚಿತ್ರದುರ್ಗ ಕ್ಷೇತ್ರದ ಸಂಖ್ಯೆ 147 ಆಗಿದೆ. ಇದು ಪ್ರಸ್ತುತ 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. 2019ರಲ್ಲಿ ಚಿತ್ರದುರ್ಗ ಕ್ಷೇತ್ರದಲ್ಲಿ ಒಟ್ಟು 17,60,633 ಮತದಾರರು ಇದ್ದಾರೆ. 2019ರಲ್ಲಿ ಒಟ್ಟು 12,45,950 ಮತದಾರರು ಇದ್ದರು. 2019ರಲ್ಲಿ ಕ್ಷೇತ್ರದಲ್ಲಿ ಶೇಕಡಾ 70.77% ರಷ್ಟು ಮತದಾನ ನಡೆದಿತ್ತು.

ಶ್ರೀನಿವಾಸ್‌ ಪ್ರಸಾದ್ ಅಳಿಯಂದಿರಿಗೆ ತಪ್ಪಿದ ಟಿಕೆಟ್: ಲೋಕಸಭಾ ಚುನಾವಣೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದ ಸಂಸದ ಶ್ರೀನಿವಾಸ್‌ ಪ್ರಸಾದ್ ಅಳಿಯಂದಿರಿಗೆ ಟಿಕೆಟ್ ಕೈ ತಪ್ಪಿದ್ದು, ಮಾಜಿ ಶಾಸಕ ಬಾಲಾರಾಜು ಕಮಲಪಡೆ ಹುರಿಯಾಳಾಗಿದ್ದಾರೆ.

2004ರಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿ ಶಾಸಕರಾಗಿದ್ದ ಬಾಲರಾಜು ಬಳಿಕ ನಡೆದ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದರೂ ಕೈ ಹಿಡಿದಿರಲಿಲ್ಲ. 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ಬಾಲರಾಜು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಗುರುರಿಸಿಕೊಂಡು ಕ್ಷೇತ್ರದಲ್ಲಿ ಓಡಾಟ ನಡೆಸಿದ್ದರು.

ಬಿ.ಎಸ್‌.ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬಾಲರಾಜು ಬಿಜೆಪಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಮೊದಲ ಬಾರಿಗೆ ಲೋಕಸಭಾ ಅಖಾಡಕ್ಕೆ ಇಳಿಯಲಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಚಾಮರಾಜನಗರದಲ್ಲಿ ಮೊದಲ ಬಾರಿಗೆ ಪ್ರಸಾದ್ ಕಮಲ ಅರಳಿಸಿದ್ದರು.

ಟಿಕೆಟ್ ಆಕಾಂಕ್ಷಿಗಳು ಇದ್ದರರ್ಯಾರು?: ಬಿಜೆಪಿಯಿಂದ ಟಿಕೆಟ್ ಪಡೆಯಲು ಆಕಾಂಕ್ಷಿಗಳ ಸರತಿ ಸಾಲೆ ನಿರ್ಮಾಣವಾಗಿತ್ತು. ಎಸ್.ಬಾಲರಾಜು, ಪ್ರಸಾದ್ ಅಳಿಯಂದಿರಾದ ಡಾ.ಮೋಹನ್, ಹರ್ಷವರ್ಧನ್, ದಿ.ಕೆ.ಶಿವರಾಂ, ಎಸ್.ಮಹಾದೇವಯ್ಯ, ವೆಂಕಟರಮಣಸ್ವಾಮಿ ಪಾಪು ಆಕಾಂಕ್ಷಿಗಳಾಗಿ ಗುರುತಿಸಿಕೊಂಡಿದ್ದರು.

ಬಾಲರಾಜು ವಿವರ: ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಬಾಲರಾಜು 1991ರಲ್ಲಿ ಮುತ್ಸದಿ ರಾಜಕಾರಣಿ ಎಂ.ರಾಜಶೇಖರಮೂರ್ತಿ ಅವರ ಗರಡಿಯಿಂದ ಬಂದ ರಾಜಕಾರಣಿಯಾಗಿದ್ದಾರೆ. ರಾಜಶೇಖರಮೂರ್ತಿ ಶಿಷ್ಯನಾಗಿ ಕಾಂಗ್ರೆಸ್ ಮೂಲಕ ರಾಜಕೀಯಕ್ಕೆ ಬಂದು ವಿವಿಧ ಘಟಕಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅದಾದ ಬಳಿಕ, 1993ರಲ್ಲಿ ಟಿಎಪಿಎಂಎಸ್ ನಿರ್ದೇಶಕರಾಗಿ ಆಯ್ಕೆಯಾಗಿ, 1997ರಲ್ಲಿ ಯುವ ಕಾಂಗ್ರೆಸ್ ಚಾಮರಾಜನಗರ ವಿಭಾಗದ ಅಧ್ಯಕ್ಷರಾದರು.

1999ರಲ್ಲಿ ರಾಜಶೇಖರಮೂರ್ತಿ ಅವರೊಟ್ಟಿಗೆ ಬಿಜೆಪಿಗೆ ಸೇರ್ಪಡೆಗೊಂಡು ಕೊಳ್ಳೇಗಾಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 5,421 ಮತಗಳಿಂದ ಸೋಲು ಕಂಡರು. ಅದೇ ವರ್ಷ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ-ಜೆಡಿಯು ಹೊಂದಾಣಿಕೆ ನಡುವೆ ಟಿಕೆಟ್ ಕೈ ತಪ್ಪಿದ್ದರಿಂದ 2004ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಮೊದಲ ಬಾರಿಗೆ ಶಾಸಕರಾದರು.

2013ರಲ್ಲಿ ಯಡಿಯೂರಪ್ಪ ಅವರನ್ನು ಹಿಂಬಾಲಿಸಿ ಕೆಜೆಪಿ ಸೇರಿದ ಬಾಲರಾಜು ಮತ್ತೇ ಚುನಾವಣೆಗೆ ನಿಂತು ಮೂರನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. 2013 ರಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿ ಸೇರ್ಪಡೆಗೊಂಡು ಎನ್.ಮಹೇಶ್ ಪರ ಪ್ರಚಾರ ನಡೆಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+