Chitradurga Lok Sabha constituency:ಕೋಟೆನಾಡು ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಯಾರಿಗೆ ಗೊತ್ತಾ? ಇಲ್ಲಿದೆ ಮಾಹಿತಿ
ಚಿತ್ರದುರ್ಗ, ಮಾರ್ಚ್, 22: ಮಧ್ಯ ಕರ್ನಾಟಕದಲ್ಲಿ ಕೋಟೆನಾಡು ಅಂತಲೇ ಹೆಸರುವಾಸಿಯಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಗ್ಗಂಟಾಗಿದ್ದ ಕಾಂಗ್ರೆಸ್ ಟಿಕೆಟ್ ಕೊನೆಗೂ ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ಪಾಲಾಗಿದೆ. ಅಧಿಕೃತ ಪಟ್ಟಿಯಲ್ಲಿ ಚಂದ್ರಪ್ಪ ಅವರ ಹೆಸರು ಘೋಷಣೆ ಮಾಡಿದ್ದಾರೆ.
ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದ್ದ ಹೆಸರು ಕೊನೇ ಕ್ಷಣದಲ್ಲಿ ಮತ್ತೆ ಚಂದ್ರಪ್ಪ ಅವರ ಹೆಸರನ್ನು ತಡೆ ಹಿಡಿಯಲಾಗಿತ್ತು. ಸ್ಥಳೀಯರಿಗೆ ಟಿಕೆಟ್ ಕೊಡಿ ಎಂಬ ಮಾತುಗಳು ಕೇಳಿಬಂದಿದ್ದವು. ಅದರಲ್ಲೂ ಒಮ್ಮೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆದು ಸೋಲು ಕಂಡಿದ್ದ ಡಾ.ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ಅವರು ನನಗೆ ಟಿಕೆಟ್ ನೀಡಬೇಕು ಎಂದು ಒತ್ತಡ ಹಾಕಿದ್ದರು. ಆದರೆ ಇದರ ಮಧ್ಯೆ ಚಂದ್ರಪ್ಪ ಹೆಸರು ಘೋಷಣೆ ಆಗಿದೆ.

2014ರಲ್ಲಿ ಮೋದಿ ಅಲೆಯಲ್ಲಿ ಬಿಜೆಪಿ ಅಭ್ಯರ್ಥಿ ಜನಾರ್ಧನಸ್ವಾಮಿ ವಿರುದ್ಧ ಗೆದ್ದಿದ್ದ ಬಿ.ಎನ್.ಚಂದ್ರಪ್ಪ, 2019ರಲ್ಲಿ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ವಿರುದ್ಧ 80,000ಕ್ಕೂ ಹೆಚ್ಚು ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಂದ್ರಪ್ಪ ಅಖಾಡಕ್ಕೆ ಇಳಿದಿದ್ದಾರೆ. ಇನ್ನು ಬಿಜೆಪಿಯಿಂದ ಟಿಕೆಟ್ ಘೋಷಣೆ ಮಾಡಿಲ್ಲ. ಹಾಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಬಹುತೇಕ ಪಿಕ್ಸ್ ಎನ್ನಲಾಗಿದೆ. ಈಗ ಮೂರನೇ ಬಾರಿಗೆ ಅವರಿಗೆ ಟಿಕೆಟ್ ಸಿಕ್ಕಿದ್ದು, ದುರ್ಗದ ಕೋಟೆಗೆ ಅಧಿಪತಿಯಾಗಲಿದ್ದಾರಾ ಎಂದು ಕಾದು ನೋಡಬೇಕಿದೆ.
ಮಲ್ಲಿಕಾರ್ಜುನ್ ಪತ್ನಿಗೆ ಕೈ ಟಿಕೆಟ್: ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಟಿಕೆಟ್‌ಗಾಗಿ ಭಾರೀ ಪೈಪೋಟಿ ನಡೆಯುತ್ತಿದ್ದು, ಈಗಾಗಲೇ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಜಿ.ಎಂ.ಸಿದ್ದೇಶ್ವರ್ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇನ್ನು ಇವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್‌ನಿಂದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಇಂದು (ಮಾರ್ಚ್ 21)ಟಿಕೆಟ್ ಘೋಷಣೆ ಮಾಡಲಾಗಿದೆ.
ವಿನಯ್ ಕುಮಾರ್‌ಗೆ ತಪ್ಪಿದ ಕೈ ಟಿಕೆಟ್: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್ ಇಲ್ಲವೇ ಯುವ ಕಾಂಗ್ರೆಸ್ ನಾಯಕ ಜಿ.ಬಿ.ವಿನಯ್ ಕುಮಾರ್ ನಡುವೆ ನೇರ ಹಣಾಹಣಿ ನಡೆಯುತ್ತಿತ್ತು. ಆದರೆ ಕೊನೆಗೂ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.
ಬಿಜೆಪಿ ಭದ್ರಕೋಟೆ ಛಿದ್ರ ಮಾಡುವ ತಂತ್ರಗಾರಿಕೆ: ಬಿಜೆಪಿ ಭದ್ರಕೋಟೆ ಛಿದ್ರ ಮಾಡಲು ಈ ಬಾರಿ ಎಐಸಿಸಿ ತಂತ್ರಗಾರಿಕೆ ರೂಪಿಸಿದೆ. ಪ್ರತಿಷ್ಠೆಯಾಗಿ ಸ್ವೀಕರಿಸುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ದಾವಣಗೆರೆ ಜಿಲ್ಲೆಯಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಅಳೆದು ತೂಗಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಿದೆ. ದಾವಣಗೆರೆ ಜಿಲ್ಲೆಯಾದಾಗಿನಿಂದಲೂ ಇದುವರೆಗೆ ಕಾಂಗ್ರೆಸ್‌ಗೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ದಕ್ಕಿಲ್ಲ. ಈ ಬಾರಿ ಡಾ.ಪ್ರಭಾ ಮಲ್ಲಿಕಾರ್ಜುನ್ ಟಿಕೆಟ್ ನೀಡಿದ್ದು, ಈ ಮೂಲಕ ಕಾಂಗ್ರೆಸ್ ಗೆಲುವಿನ ಭರವಸೆಯಲ್ಲಿದೆ.
ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವಿನಯ್ ಕುಮಾರ್ ಪರ ಒಲವು ಇತ್ತು. ಸಿದ್ದರಾಮಯ್ಯ ಅವರು ಕೊಪ್ಪಳ, ಮೈಸೂರು ಹಾಗೂ ದಾವಣಗೆರೆಯಲ್ಲಿ ಕುರುಬ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎಂಬ ಮನವಿಯನ್ನು ಹೈಕಮಾಂಡ್‌ಗೆ ಮಾಡಿದ್ದರು. ಇನ್ನು ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಪ್ರಬಲವಾಗಿ ಕೇಳಿಬಂದಿತ್ತು.
ಗಮನ ಸೆಳೆದಿದ್ದ ಪ್ರಭಾ ಮಲ್ಲಿಕಾರ್ಜುನ್: ಸಮಾಜ ಸೇವೆ, ಆರೋಗ್ಯ ಶಿಬಿರ, ಉಚಿತ ತಪಾಸಣಾ ಶಿಬಿರ, ಕ್ಯಾನ್ಸರ್ ಬಗ್ಗೆ ಜಾಗೃತಿ, ಬಡವರಿಗೆ ಸಹಾಯ ಮಾಡುವ ಮೂಲಕ ಗಮನ ಸೆಳೆದಿರುವ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿತ್ತು. ಅದೇ ರೀತಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಕೆಲಸ ಮಾಡಿರುವ ಹಾಗೂ ಪಾದಯಾತ್ರೆ ಮೂಲಕ ಜಿಲ್ಲೆಯ ಜನರ ಮನೆಮಾತಾಗಿರುವ ವಿನಯ್ ಕುಮಾರ್ ಅವರ ಹೆಸರು ಸಹ ಅಷ್ಟೇ ಪ್ರಬಲವಾಗಿ ಕೇಳಿ ಬರತೊಡಗಿತ್ತು. ಆದರೆ ಕೊನೆಗೂ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಲಾಗಿದೆ.
ಚನ್ನಯ್ಯ ಒಡೆಯರ್ ಅವರು ಮೂರು ಬಾರಿ ದಾವಣಗೆರೆ ಜಿಲ್ಲೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದು ಬಿಟ್ಟರೆ, ಉಳಿದಂತೆ ಸಾದು ಲಿಂಗಾಯತ ಸಮಾಜದವರೇ ಸಂಸದರಾಗಿರುವುದು ವಿಶೇಷ. ಚಿತ್ರದುರ್ಗ-ದಾವಣಗೆರೆ ಲೋಕಸಭಾ ಕ್ಷೇತ್ರ ಇದ್ದಾಗಲೂ ಕಾಂಗ್ರೆಸ್‌ನಿಂದ ಲಿಂಗಾಯತ ಸಮುದಾಯದವರನ್ನು ಹೊರತುಪಡಿಸಿದಂತೆ ಚನ್ನಯ್ಯ ಒಡೆಯರ್ ಮಾತ್ರ ಎಂಪಿ ಆಗಿದ್ದರು.
ಒಟ್ಟಾರೆ ಲೋಕಸಭಾ ಕ್ಷೇತ್ರದ ಇತಿಹಾಸ ಗಮನಿಸಿದರೆ ಆರು ಬಾರಿ ಕಾಂಗ್ರೆಸ್ ಹಾಗೂ ಆರು ಬಾರಿ ಬಿಜೆಪಿ ಗೆದ್ದಿದೆ. ಆದರೆ ಈ ಬಾರಿ ಗೆಲ್ಲುತ್ತಾರೆ ಎಂಬುದೇ ಕುತೂಹಲ.
ಪಾದಯಾತ್ರೆ ಯಶಸ್ಸು: ವಿನಯ್ ಕುಮಾರ್ ಅವರ ಪರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿತ್ತು. ಚನ್ನಗಿರಿ, ಜಗಳೂರು, ಹರಪನಹಳ್ಳಿ, ದಾವಣಗೆರೆ, ಹೊನ್ನಾಳಿ, ಹರಿಹರ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿಯೂ ವಿನಯ್ ಕುಮಾರ್ ಅವರ ಪರ ಒಲವು ಇತ್ತು. ಯಾಕೆಂದರೆ ವಿನಯ್ ಕುಮಾರ್ ಇನ್ನೂ ಯುವಕರು. ಶಿಕ್ಷಣ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಪಾದಯಾತ್ರೆ ನಡೆಸಿ ಜನರ ಮಾತಾಗಿದ್ದಾರೆ ಎಂಬ ಚರ್ಚೆ ಆಗಿತ್ತು.
ಇನ್ನು ಅವರು ಎಲ್ಲಾ ಸಮುದಾಯದವರ ಪ್ರೀತಿ, ವಿಶ್ವಾಸ ಸಂಪಾದನೆ ಮಾಡಿದ್ದಾರೆ. ಹಾಗಾಗಿ, ಯುವಕರಿಗೆ ಟಿಕೆಟ್ ನೀಡಿದರೆ ಗೆಲುವು ಕಷ್ಟವಾಗದು ಎಂದು ಹೇಳಲಾಗಿತ್ತು. ಎಸ್.ಎಸ್.ಮಲ್ಲಿಕಾರ್ಜುನ್, ಶಾಮನೂರು ಶಿವಶಂಕರಪ್ಪ ಅವರ ಆಶೀರ್ವಾದ ಸಿಕ್ಕರೆ, ಅಹಿಂದ ಮತ ಕಾಂಗ್ರೆಸ್‌ಗೆಗೆ ಬಿದ್ದರೆ ವಿನಯ್ ಕುಮಾರ್ ಗೆಲುವು ಕಷ್ಟವಾಗದು ಎಂಬ ವಿಶ್ಲೇಷಣೆಯೂ ನಡೆದಿತ್ತು. ಹಾಗಾಗಿ, ವಿನಯ್ ಕುಮಾರ್ ಹೆಸರು ಹೈಕಮಾಂಡ್ ಮಟ್ಟದಲ್ಲಿ ತುಂಬಾನೇ ಚರ್ಚೆಯಾಗಿತ್ತು.
ವಿನಯ್ ಕುಮಾರ್ ಪಾದಯಾತ್ರೆ, ಕಾರ್ಯಕ್ರಮಗಳು, ಅಂಗವಿಕಲರು, ಆಟೋ ಚಾಲಕರು, ಆಟೋ ಚಾಲಕರ ಮಕ್ಕಳಿಗೆ ಸಹಾಯ, ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಪೀಠೋಪಕರಣ, ಶೂ, ಸಹಾಯ ಹಸ್ತ, ಸಂಘ ಸಂಸ್ಥೆಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸಮಾಜ ಸೇವೆಯಲ್ಲಿಯೂ ಮುಂದಿದ್ದಾರೆ. ರಾಜಕೀಯದಲ್ಲಿ ಚತುರತೆಯ ಮಾತು ಆಡುತ್ತಾರೆ. ಅಲ್ಲದೆ, ತಂತ್ರಗಾರಿಕೆ ರೂಪಿಸುವುದರಲ್ಲಿ ನಿಪುಣರು. ಸಂಘಟನೆಯ ಶಕ್ತಿ ಇರುವ ಕಾರಣಕ್ಕೆ ಬಿಜೆಪಿ ಮಣಿಸಲು ಕಾಂಗ್ರೆಸ್ ಹೈಕಮಾಂಡ್ ನಲ್ಲಿಯೂ ಈ ಬಗ್ಗೆ ದೀರ್ಘ ಹೊತ್ತು ಚರ್ಚೆಯಾಗಿತ್ತು.
ಪ್ರಭಾ ಮಲ್ಲಿಕಾರ್ಜುನ್ ಮೇಲೆ ಒತ್ತಡ: ಇನ್ನು ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸಮಾಜ ಸೇವೆ, ಉಚಿತ ಆರೋಗ್ಯ ತಪಾಸಣೆ ಶಿಬಿರ, ಜನರೊಟ್ಟಿಗೆ ಬೆರೆಯುವ ರೀತಿ, ಬಡವರಿಗೆ ಸಹಾಯ, ಎಸ್.ಎಸ್.ಕೇರ್ ಟ್ರಸ್ಟ್‌ನಡಿ ಸಾವಿರಾರು ಜನರಿಗೆ ಆರೋಗ್ಯ ದಾಸೋಹ ಸೇರಿದಂತೆ ಎಲ್ಲರನ್ನೂ ಗಮನ ಸೆಳೆಯುತ್ತಿರುವ ನಾಯಕಿ. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲೆಡೆ ಸ್ಪರ್ಧೆ ಮಾಡಬೇಕು ಎಂಬ ಒತ್ತಡ ಬಂದಿತ್ತು.
ಪ್ರಭಾ ಮಲ್ಲಿಕಾರ್ಜುನ್ ಅವರ ಕಾರ್ಯವೈಖರಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಿದ್ದರು. ಮಾವ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಬಿರುಸಿನ ಪ್ರಚಾರ ನಡೆಸಿದ್ದ ಪ್ರಭಾ ಮಲ್ಲಿಕಾರ್ಜುನ್ ಅವರ ಕಾರ್ಯವೈಖರಿ ಸೂಜಿಗಲ್ಲಿನಂತೆ ಸೆಳೆದಿತ್ತು.
ಎಷ್ಟರ ಮಟ್ಟಿಗೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಪ್ರಭಾ ಮಲ್ಲಿಕಾರ್ಜುನ್ ಅವರು ಸ್ಪರ್ಧೆ ಮಾಡುತ್ತಾರೆ ಎಂದೆಲ್ಲಾ ಕಾರ್ಯಕರ್ತರು ಮಾತನಾಡಲಾರಂಭಿಸಿದ್ದರು. ಅಷ್ಟು ಜನಪ್ರಿಯತೆ ಗಳಿಸಿದ್ದರು. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಿದರೆ ಸಾದು ಲಿಂಗಾಯತ ಸಮುದಾಯದ ಮತಗಳು, ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳ ಫಲ, ಅಲ್ಪಸಂಖ್ಯಾತರ ಮತಗಳು ಬಂದರೆ ಗೆಲುವು ಕಷ್ಟವಾಗದು ಎನ್ನುವ ಮಾತುಗಳು ಕೇಳಿಬಂದಿದ್ದವು.
ಮಲ್ಲಿಕಾರ್ಜುನ್ ಹಾಗೂ ಶಾಮನೂರು ಶಿವಶಂಕರಪ್ಪನವರು ಬಿರುಸಿನ ಪ್ರಚಾರ ನಡೆಸಿದರೆ ಈ ಬಾರಿ ಬಿಜೆಪಿ ಮಣ್ಣು ಮುಕ್ಕಿಸಬಹುದು ಎಂಬ ಲೆಕ್ಕಾಚಾರ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿತ್ತು. ಒಟ್ಟಿನಲ್ಲಿ ಪ್ರಭಾ ಮಲ್ಲಿಕಾರ್ಜುನ್ ಹಾಗೂ ವಿನಯ್ ಕುಮಾರ್ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಘೋಷಣೆಯಾ












Click it and Unblock the Notifications