Get Updates
Get notified of breaking news, exclusive insights, and must-see stories!

Chitradurga Lok Sabha Election 2024 Results LIVE: ಕೋಟೆನಾಡಿನಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವು

ಚಿತ್ರದುರ್ಗ, ಜೂನ್‌ 04: ಲೋಕಸಭೆ ಚುನಾವಣೆ ಫಲಿತಾಂಶ ಇನ್ನೇನು ಕೆಲವೇ ಗಂಟೆಗಳಲ್ಲಿ ಹೊರಬೀಳಲಿದ್ದು, ಕೋಟೆನಾಡು ಚಿತ್ರದುರ್ಗ ಲೋಕಸಭಾ ಕ್ಷೇತ್ರ ಯಾರ ಕೈ ಸೇರಲಿದೆ ಎನ್ನುವ ಕೂತುಹಲ ಜೋರಾಗಿದೆ.

ಏಪ್ರಿಲ್ 26ರಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆಯ ಮತದಾನ ನಡೆದಿದ್ದು, ಈ ಬಾರಿಯ ಲೋಕ ಸಮರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಹಾಗೂ ಎನ್‌ಡಿ ಎ. ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಮತದಾನ ನಡೆದು ಬರೋಬ್ಬರಿ 38 ದಿನಗಳು ಕಳೆದಿದ್ದು ಇಂದು ಫಲಿತಾಂಶ ಹೊರಬೀಳಲಿದೆ.

Chitradurga Lok Sabha Election 2024 Results LIVE Who Will Win Govind Karjol Or B N Chandrappa

ಈ ಬಾರಿ ಚಿತ್ರದುರ್ಗ ಕ್ಷೇತ್ರದಲ್ಲಿ ಇಬ್ಬರೂ ಅಭ್ಯರ್ಥಿಗಳು ದಲಿತ ಸಮುದಾಯಕ್ಕೆ ಸೇರಿದ್ದವರಾಗಿದ್ದಾರೆ. ಕೈ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಅವರು 2014ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ 2019 ರಲ್ಲಿ ಸೋಲು ಕಂಡಿದ್ದು ಇದೀಗ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇನ್ನು ಎನ್‌ಡಿಎ ಅಭ್ಯರ್ಥಿಯಾಗಿ ಹಿರಿಯ ಅನುಭವಿ ರಾಜ್ಯ ಮಾಜಿ ಸಚಿವ ಗೋವಿಂದ ಕಾರಜೋಳ ಮೈತ್ರಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರ ಪರಿಶಿಷ್ಟ ಜಾತಿಯ ಮೀಸಲು ಕ್ಷೇತ್ರವಾಗಿದೆ. ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಕ್ಷೇತ್ರದಲ್ಲಿ ಪುರುಷ- 919064, ಮಹಿಳೆ-922769, ಇತರೆ-104 ಸೇರಿದಂತೆ ಒಟ್ಟು 18,41,937 ಮತದಾರರಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ 72.74% ಶೇಕಡಾವಾರು ಮತದಾನ ನಡೆದಿದ್ದು, ಫಲಿತಾಂಶ ಯಾರ ಪರವಾಗಿರಲಿದೆ ಎನ್ನುವುದು ಇನ್ನೇನು ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಒನ್‌ ಇಂಡಿಯಾ ಕನ್ನಡದ ಈ ಪುಟವನ್ನು ಫಾಲೋ ಮಾಡಿ. ಮತ ಏಣಿಕೆ ಆರಂಭದಿಂದ ಅಭ್ಯರ್ಥಿ ಘೋಷಣೆವರೆಗಿನ ಸಂಪೂರ್ಣ ಮಾಹಿತಿ ಈ ಪುಟದಲ್ಲಿ ಲಭ್ಯವಿರಲಿದೆ.

ಕ್ಷಣ ಕ್ಷಣದ ಮಾಹಿತಿ

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಕೋಟೆನಾಡು ಚಿತ್ರದುರ್ಗ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

*ಸಮಯ 10: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಮತ ಎಣಿಕೆಯ ನಾಲ್ಕನೇ ಸುತ್ತು ಮುಕ್ತಾಯವಾಗಿದ್ದು, ಬಿಜೆಪಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು, ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರ ವಿರುದ್ಧ 9,793 ಮತಗಳ ಅಂತರದಿಂದ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ನಾಲ್ಕನೇ ಸುತ್ತಿನಲ್ಲಿ ಬಿಜೆಪಿ 1,37,830 ಮತ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ 1,28,037 ಮತಗಳನ್ನು ಪಡೆದಿದ್ದಾರೆ. ಮತ ಎಣಿಕೆ ಮುಂದುವರೆದಿದೆ.

*ಸಮಯ 11:50: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮುನ್ನಡೆ ಕಾಯ್ದುಕೊಂಡಿದ್ದಾರೆ. 12ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 4,99,530 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್‌ ಚಂದ್ರಪ್ಪ 4,71,424 ಮತಗಳನ್ನು ಪಡೆದಿದ್ದಾರೆ.

*ಸಮಯ 9:15: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆಯ ಮೊದಲ ಸುತ್ತಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಮುನ್ನಡೆ ಸಾಧಿಸಿದ್ದಾರೆ. ಚಂದ್ರಪ್ಪ 32,239 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದರೇ, ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ 32,164 ಮತಗಳನ್ನು ಪಡೆದು ಹಿನ್ನಡೆ ಕಾಯ್ದುಕೊಂಡಿದ್ದಾರೆ.

*ಸಮಯ 8:30: ಚಿತ್ರದುರ್ಗದಲ್ಲಿ ಮತ ಎಣಿಕೆ ಆರಂಭಗೊಂಡಿದ್ದು, ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ನಡೆಯುತ್ತಿರುವ ಮತ ಎಣಿಕೆ ನಡೆಯುತ್ತಿದೆ. ಸದ್ಯ ಚಿತ್ರದುರ್ಗದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಅಂಚೆ ಮತಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

*ಸಮಯ 8:00: ಚಿತ್ರದುರ್ಗ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಸ್ಟ್ರಾಂಗ್ ರೂಂ ಅನ್ನು ಭಾರೀ ಭದ್ರತೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಸಮ್ಮುಖದಲ್ಲಿ ತೆರೆಯಲಾಗಿದ್ದು, ಮೊದಲು ಅಂಚೆ ಮತ ಎಣಿಕೆ ನಡೆಯಲಿದೆ.

*ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 1,661 ಮತಗಟ್ಟೆಗಳಿದ್ದು, ಕರಡು ಮತದಾರರ ಪಟ್ಟಿಯಲ್ಲಿ 14,01,830 ಮತದಾರರು ಇದ್ದಾರೆ. ಮತದಾರರ ಅಂತಿಮ ಪಟ್ಟಿ ಪ್ರಕಟ ಅನ್ವಯ 7,04,896 ಪುರುಷ ಮತದಾರರು, 7,13,228 ಮಹಿಳಾ ಮತದಾರರು ಹಾಗೂ 87 ಇತರೆ ಮತದಾರರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 14,18,211 ಮತದಾರರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+