ಚಿತ್ರದುರ್ಗದಲ್ಲಿ ಮಳೆ; ಸ್ವಂತ ಹಣದಲ್ಲಿ ಪರಿಹಾರ ಕೇಂದ್ರ ತೆರೆದ ಶಾಸಕ ಗೂಳಿಹಟ್ಟಿ ಡಿ ಶೇಖರ್

ಚಿತ್ರದುರ್ಗ, ಅಕ್ಟೋಬರ್ 22: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ತಡರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಲೂಕಿನ ವಿವಿಧ ಗ್ರಾಮಗಳಿಗೆ ನೀರು ನುಗ್ಗಿ ಸುಮಾರು 80ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.

ಈ ನೆರೆ ಸಂತ್ರಸ್ತರ ಕಷ್ಟಕ್ಕೆ ಸ್ಪಂದಿಸಬೇಕೆಂಬ ನಿಟ್ಟಿನಲ್ಲಿ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ತಮ್ಮ ಸ್ವಂತ ಹಣದಿಂದಲೇ ಹಾಲುರಾಮೇಶ್ವರದ ಯುವ ಭವನದಲ್ಲಿ ಗಂಜೀ ಕೇಂದ್ರ ವ್ಯವಸ್ಥೆ ಮಾಡಿದ್ದಾರೆ. ಜೊತೆಗೆ ಸಂತ್ರಸ್ತ ಕುಟುಂಬಗಳಿಗೆ ಮುಂಗಡವಾಗಿ ಹತ್ತು ಸಾವಿರ ರೂಪಾಯಿ ನೀಡಿದ್ದಾರೆ. ಹಲವು ಕುಟುಂಬಗಳು ಪರಿಹಾರ ಕೇಂದ್ರದಲ್ಲಿ ಬೀಡುಬಿಟ್ಟಿವೆ.

Chitradurga MLA Goolihatti D Shekhar Open Relief Centre In His Own Money

ಚಿತ್ರದುರ್ಗದಲ್ಲಿ ಮೊನ್ನೆ ರಾತ್ರಿಯಿಂದ ಮಳೆಯಾಗುತ್ತಿದ್ದು, ಅನೇಕ ಕೆರೆಕಟ್ಟೆಗಳು ತುಂಬಿ ಕೋಡಿ ಬಿದ್ದಿವೆ. ಇದರಿಂದ ಕೆಲವು ಗ್ರಾಮಗಳು ನೀರಿನಲ್ಲಿ ಮುಳುಗಿವೆ. ಇತ್ತ ಜಿಲ್ಲೆಯ ಏಕೈಕ ಜಲಾಶಯ ವಾಣಿವಿಲಾಸದಲ್ಲಿ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದ್ದು ಇದೀಗ 82 ಅಡಿ ತಲುಪಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+