ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್‌ಗೆ ನ್ಯಾಯಾಂಗ ಬಂಧನ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ನವೆಂಬರ್‌14 : ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ಇಬ್ಬರಿಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ನವೆಂಬರ್‌ 28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಶಿವಮೂರ್ತಿ ಶರಣರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಪೋಕ್ಸೊ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ನೀಡಿದ ಆರೋಪದಡಿ ಆರೋಪಿಗಳನ್ನು ಬಂಧಿಸಲಾಗಿತ್ತು.

ಹಿರಿಯೂರಿನಲ್ಲಿ ನಂಜಾವಧೂತ ಶ್ರೀಗಳ ಜೊತೆ ಸಮುದಾಯದ ಮುಖಂಡನ ವಾಗ್ವಾದಹಿರಿಯೂರಿನಲ್ಲಿ ನಂಜಾವಧೂತ ಶ್ರೀಗಳ ಜೊತೆ ಸಮುದಾಯದ ಮುಖಂಡನ ವಾಗ್ವಾದ

ಇಂದು ಪೋಲಿಸ್ ಕಸ್ಟಡಿ ಅವಧಿ ಮುಗಿದ ಕಾರಣ ಆರೋಪಿಗಳನ್ನು ತನಿಖಾ ತಂಡ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ವಿಚಾರಣೆಗೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶ ಹೊರಡಿಸಿದೆ.

Chitradurga Murugha Mutt Ex Administrator SK Basavarajan In Judicial Custody

ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಮಠದ ಫೋಟೋ ಕಳ್ಳತನಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ತನಿಖೆ ನಡೆಸಿದ್ದರು. ಈ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ಶ್ರೀನಿವಾಸ್ ನನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದರು. ಅಜ್ಞಾತ ಸ್ಥಳದಲ್ಲಿ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ವಿಚಾರಣೆ ನಡೆಸಲಾಗಿತ್ತು.

ಇನ್ನು ನವೆಂಬರ್ 7ರಂದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಹೊಸಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ ಹಾಗೂ ಎಸ್.ಜೆ.ಎಂ. ಕಾಲೇಜು ಉಪನ್ಯಾಸಕ ಶಿವಾನಂದ ಸ್ವಾಮಿ ಅವರನ್ನು ಬಂಧಿಸಲಾಗಿತ್ತು.ಇವರು ನೀಡಿದ ಮಾಹಿತಿ ಮೇರೆಗೆ ಬಸವರಾಜನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

English summary
Murugha Mutt Ex-Administrator SK Basavarajan in judicial custody.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X