Breaking: ಮಧ್ಯರಾತ್ರಿಯೇ ಮುರುಘಾ ಶ್ರೀ ನ್ಯಾಯಾಧೀಶರ ಮುಂದೆ ಹಾಜರು?
ಚಿತ್ರದುರ್ಗ, ಸೆ.2: ಪೋಕ್ಸೋ ಪ್ರಕರಣದಡಿ ಬಂಧಿನಕ್ಕೆ ಒಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವ ಸಾಧ್ಯತೆ ಇದೆ.
ಚಿತ್ರದುರ್ಗದಲ್ಲಿ ಗುರುವಾರ ರಾತ್ರಿ 10.30ರ ಸುಮಾರಿಗೆ ಬಂಧಿಸಲಾಯಿತು. ಅಲ್ಲಿಂದ ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ. ಬಳಿಕ ಅವರನ್ನು ಚಳ್ಳಕೆರೆಯ ಡಿವೈಎಸ್‌ಪಿ ಕಚೇರಿಗೆ ಕರೆತಂದು ಅಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್, ಡಿವೈಎಸ್‌ಪಿ ರಮೇಶ್‌ಕುಮಾರ್ ನೇತೃತ್ವದಲ್ಲಿಯೇ ವಿಚಾರಣೆ ನಡೆಸಲಾಯಿತು.
ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ:
ಪೊಲೀಸ್ ಅಧಿಕಾರಿಗಳಿಂದ ವಿಚಾರಣೆ ಮುಗಿಯುತ್ತಿದ್ದಂತೆ ಅವರನ್ನು ಚಳ್ಳಕರೆಯಿಂದ ಮತ್ತೆ ಚಿತ್ರದುರ್ಗಕ್ಕೆ ಕರೆತಂದು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಮುನ್ನ ಅವರನ್ನು ಸಾಮಾನ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಮುರುಘಾ ಶ್ರೀಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆತಂದಾಗ ಮಧ್ಯರಾತ್ರಿ 1ಗಂಟೆಯಾಗಿತ್ತು. ಅಲ್ಲಿ ಅವರಿಗೆ ಸಾಮಾನ್ಯ ತಪಾಸಣೆಗಳನ್ನು ಪ್ರಾರಂಭ ಮಾಡಲಾಯಿತು. ವೈದ್ಯರಿಂದ ಪರೀಕ್ಷಾ ವರದಿಗಳನ್ನು ಪಡೆದ ಬಳಿಕ ಸ್ವಾಮೀಜಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಚ್ಚಿನ ವರದಿಗಳನ್ನು ನಿರೀಕ್ಷಿಸಲಾಗುತ್ತಿದೆ.











Click it and Unblock the Notifications