• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ: ರಾಮಗಿರಿಯಲ್ಲಿ ಅತ್ಯಧಿಕ ಮಳೆ

|

ಚಿತ್ರದುರ್ಗ, ಮೇ 12: ಚಿತ್ರದುರ್ಗ ಜಿಲ್ಲೆಯಲ್ಲಿ ಮೇ 12 ರಂದು ಬಿದ್ದ ಮಳೆಯ ವಿವರದನ್ವಯ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿಯಲ್ಲಿ 48.2 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಲವೆಡೆ ಮಳೆ ಅಬ್ಬರಿಸಿದೆ. ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಭಾರಿ ಮಳೆಯಾಗಿದ್ದು, ಹಲವೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಕಾತ್ರಿಕೇನಹಳ್ಳಿ ಬಳಿಯ ಹೊಸಕಟ್ಟೆ ಹಳ್ಳ ಭರ್ತಿಯಾಗಿದ್ದು, ವೇದಾವತಿ ನದಿಗೆ ಹೆಚ್ಚಿನ ಒಳ ಹರಿವು ಕಂಡು ಬಂದಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 12.2, ಹೆಚ್.ಡಿ.ಪುರದಲ್ಲಿ 14.2, ತಾಳ್ಯದಲ್ಲಿ 3.2 ಮಿ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 26.6, ಪರಶುರಾಂಪುರ 3 ಮಿ.ಮೀ, ಡಿ.ಮರಿಕುಂಟೆ 6.4, ತಳಕು 1.4 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಇಕ್ಕನೂರಿನಲ್ಲಿ 34.6 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 3, ಚಿತ್ರದುರ್ಗ-2ರಲ್ಲಿ 8, ಭರಮಸಾಗರ 10.2, ಸಿರಿಗೆರೆ 43.6, ತುರುವನೂರು 15.6, ಐನಹಳ್ಳಿಯಲ್ಲಿ 18 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರಿನಲ್ಲಿ 3.4 ಮಿ.ಮೀ ಮಳೆಯಾಗಿದೆ.

   Yediyurappa ಇಂದಿರಾ ಕ್ಯಾಂಟೀನ್ ಹತ್ರ ಬನ್ನಿ!! | Indira Canteen | Oneindia Kannada

   ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 5.2, ಬಾಗೂರು 10, ಮಾಡದಕೆರೆಯಲ್ಲಿ 24.2 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

   ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಮಳೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದ ಕರಾವಳಿ ಭಾಗದಲ್ಲಿ ಯೆಲ್ಲೂ ಅಲರ್ಟ್ ಜಾರಿಯಲ್ಲಿರಲಿದೆ. ಉತ್ತರ ಒಳನಾಡು ಮತ್ತ ಮಧ್ಯ ಕರ್ನಾಟಕ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಮೂರು ದಿನಗಳ ಕಾಲ ಅಲ್ಲಲ್ಲಿ ಗುಡುಗು ಸಹಿತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

   English summary
   Moderate rainfall recorded in Chitradurga district, Here is Taluk/Hobli level rainfall data recorded as on May 12.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X