ಟಯರ್ ಸ್ಪೋಟ- ಮಧ್ಯ ರಾತ್ರಿಯಲ್ಲಿ ಹೊತ್ತಿ ಉರಿದ ಕಂಟೇನರ್ ಲಾರಿ!
ಹಿರಿಯೂರು ಫೆಬ್ರವರಿ 10 : ಚಲಿಸುತ್ತಿದ್ದ ಕಂಟೇನರ್ ಲಾರಿ ಟೈಯರ್ ಬ್ಲಾಸ್ಟ್ ಆಗಿ ಲಾರಿ ಹೊತ್ತಿ ಉರಿದ ಘಟನೆ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಚಿತ್ರದುರ್ಗ ಕಡೆಯಿಂದ ಬೆಂಗಳೂರು ಕಡೆಗೆ ಹೋಗುವ ಮಾರ್ಗ ಮಧ್ಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಂಬುಲೆನ್ಸ್ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಕಂಟೇನರ್ ಲಾರಿಯ ಚಾಲಕನ ಹೆಸರು, ಎಲ್ಲಿಂದ ಬಂದಿತ್ತು, ಸರಕು ಸಾಗಣೆ ವಸ್ತುಗಳು ಏನಿತ್ತು, ಎಂಬುದರ ಬಗ್ಗೆ ಹೆಚ್ಚಿನ ತಿಳಿದು ಬರಬೇಕಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.












Click it and Unblock the Notifications