Chitradurga Tragedy: ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬಸ್ ಸುಟ್ಟು ಭಸ್ಮ: 11 ಮಂದಿ ಪ್ರಯಾಣಿಕರ ಸಾವು
ಚಿತ್ರದುರ್ಗ, ಡಿಸೆಂಬರ್ 25: ಗೋಕರ್ಣಕ್ಕೆ ತೆರಳುತ್ತಿದ್ದ ಖಾಗಿ ಬಸ್‌ಗೆ ಬೆಂಕಿ ತಗುಲಿದ ಪರಿಣಾಮ 11 ಮಂದಿ ಪ್ರಯಾಣಿಕರು ಸಾವನ್ನಪಿದ್ದಾರೆ. ಈ ಘಟನೆ ಹಿರಿಯೂ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಅಷ್ಟಕ್ಕೂ ನಡೆದಿದ್ದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಲಾರಿಯೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಡು ರಸ್ತೆಯಲ್ಲಿಯೇ ಬಸ್ ಹೊತ್ತಿ ಉರಿದ ಘಟನೆ ಚಿತ್ರದುರ್ಗದ ಜಿಲ್ಲೆ ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು (ಡಿಸೆಂರ್ 25) ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಖಾಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಸುಮಾರು 11 ಪ್ರಯಾಣಿಕರು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

11 ಮಂದಿ ಸಾವು: ಬೆಂಗಳೂರಿಂದ ಗೋಕರ್ಣಕ್ಕೆ ಸ್ಲೀಪರ್ ಕೋಚ್ ಬಸ್‌ನಲ್ಲಿ ಚಾಲಕ, ಕಂಡಕ್ಟರ್ ಸೇರಿ 30 ಜನ ಪ್ರಯಾಣ ಮಾಡುತ್ತಿದ್ದರು. ಆದರೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಜವನಗೊಂಡಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬಸ್ ಅತೀ ವೇಗವಾಗಿ ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಇದ್ದಕ್ಕಿದ್ದಂತೆ ಬಸ್ ಹೊತ್ತಿ ಉರಿದಿದೆ. ಈ ಬೆಂಕಿಗೆ ಬಸ್‌ನಲ್ಲಿದ್ದ 11 ಮಂದಿ ಸುಟ್ಟು ಭಸ್ಮವಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡು: ಬಸ್‌ಗೆ ಬೆಂಕಿ ತಗುಲುತ್ತಿದ್ದಂತೆ ಕೆಲ ಪ್ರಯಾಣಿಕರು ಅದರಿಂದ ತಪ್ಪಿಸಿಕೊಳ್ಳಲು ಪ್ರಯತ್ತಿಸಿದ್ದಾರೆ. ಈ ವೇಳೆ 11 ಮಂದಿ ಸುಟ್ಟು ಭಸ್ಮವಾಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಮಿಸಿದ್ದು, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಈ ದುರಂತದಲ್ಲಿ ಗಾಯಗೊಂಡವನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬದಿದೆ.
ಘಟನೆ ನಡೆದ ಸಮಯ: ರಾತ್ರಿ 12 ಗಂಟೆಗೆ ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಹೊರಟಿತ್ತು, ಆದರೆ, ರಾತ್ರಿ 3:45ರ ಸುಮಾರಿಗೆ ಅಂದರೆ ಡಿಸೆಂಬರ್ 25ರಂದು ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಬೆಂಕಿ ಆವರಿಸಿದ್ದು, ಈ ಪ್ರಯಾಣಿಕರೆಲ್ಲ ನಿದ್ರೆಯಲ್ಲಿದ್ದರು. ಈ ವೇಳೆ ಕೆಲ ಮಂದು ಮಾತ್ರ ಕೆಳಗಡೆ ಇಳಿಯಲು ಸಾಧ್ಯವಾಯಿತು. ಇದರಲ್ಲಿ ಕೆಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ 11 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ಭೀಕರ ಅಫಘಾತ ಸಂಭವಿಸಿದ ಕಾರಣ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿ ವಾಹನ ಸವಾರರು ಪರದಾಡಿದ್ದಾರೆ. ಶಿರಾ-ಹಿರಿಯೂರು ನಡುವೆ ಕಿಲೋ ಮೀಟರ್‌ಗಟ್ಟಲೇ ವಾಹನಗಳು ನಿಂತಿದ್ದು, ಆಂಬುಲೆನ್ಸ್‌ಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಚರಣೆ ಮಾಡಿವೆ. ಇದೀಗ ಸದ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ನಿಧಾನವಾಗಿ ಕಡಿಮೆಯಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಒಂದು ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್ ದಾಟಿ ಎದುರು ಕಡೆಯಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್ ಕೋಚ್ ಬಸ್ ರಸ್ತೆ ಮಧ್ಯೆ ಹೊತ್ತಿಕೊಂಡು ಉರಿದಿದೆ. ಈ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ತಿಳಿದುಬಂದಿದೆ.












Click it and Unblock the Notifications