ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವರದಿ ನಂತರ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕದ ನಿರ್ಧಾರ: ಸಿಎಂ

|
Google Oneindia Kannada News

ಚಿತ್ರದುರ್ಗ, ನವೆಂಬರ್ 08: ''ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಅರ್ಜಿ ಸಲ್ಲಿಕೆಯಾಗಿವೆ. ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ಜಿಲ್ಲೆಯ ಸಾಣೇಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ''ಆಡಳಿತಾಧಿಕಾರಿ ನೇಮಿಸುವ ಪೂರ್ವ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯಬೇಕಿದೆ. ಈ ಸಂಬಂಧ ಕಂದಾಯ ಇಲಾಖೆಯಿಂದ ವರದಿ ಸಲ್ಲಿಕೆಯಾದ ಬಳಿಕೆ ನೇಮಕ ಕುರಿತು ತೀರ್ಮಾನಿಸಲಾಗುವುದು'' ಎಂದರು.

ಮುರುಘಾ ಮಠದ ಸ್ವಾಮೀಜಿಯವರ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ. ಆ ಬಗ್ಗೆ ನ್ಯಾಯಾಲಯ ನಿರ್ಧಾರ ಮಾಡುತ್ತದೆ ಎಂದು ಕೆಲವು ಪ್ರಶ್ನೆಗಳಿಗೆ ಬೊಮ್ಮಾಯಿ ಉತ್ತರಿಸಿದರು.

CM Bommai on appointment of administrative officer for Murugha Math

ನಂಬಿಕೆಗಳಿಗೆ ಕೊಡಲಿ ಏಟು ಕೊಡುವ ಕೆಲಸ

ಶಾಸಕ ಸತೀಶ್ ಜಾರಕಿಹೊಳಿಯವರ ಹೇಳಿಕೆ ವಿಚಾರ, ಶತಮಾನಗಳಿಂದ ಯಾವುದೇ ಧರ್ಮ ನಡೆಯುವುದು ನಂಬಿಕೆ, ವಿಶ್ವಾಸದ ಮೇಲೆ. ಸ್ಥಾಪಿತವಾಗಿರುವ ನಂಬಿಕೆಗಳಿಗೆ ಕೊಡಲಿ ಏಟು ಕೊಡುವ ಕೆಲಸ ಶಾಸಕ ಸತೀಶ್ ಜಾರಕಿಹೊಳಿ ಅವರು ಮಾಡಿದ್ದಾರೆ. ಅದರ ಮೇಲೆ ಚರ್ಚೆ ಮಾಡುವುದ ಏನಿದೆ. ತಾಂತ್ರಿಕವಾಗಿ ಅವರ ಶಾಲಾ, ಕಾಲೇಜುಗಳ ಪ್ರಮಾಣಪತ್ರದಲ್ಲಿ ಹಿಂದೂ ಎಂದೇ ನಮೂದಾಗಿದೆ. ನಂಬಿಕೆಗಳು ಶತಮಾನಗಳಿಂದ ಇದೆ. ಜನರ ನಂಬಿಕೆಯನ್ನು ಘಾಸಿ ಮಾಡುವಂಥ ಕೆಲಸ ಮಾಡಿ ಪುನ: ಚರ್ಚೆ ಮಾಡುವುದು ಏನೂ ಇಲ್ಲ. ಅವರ ಕ್ಷಮೇಯೂ ಬೇಕಾಗಿಲ್ಲ. ಎಲ್ಲವನ್ನು ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

CM Bommai on appointment of administrative officer for Murugha Math

ಜನಸಂಕಲ್ಪ ಯಾತ್ರೆಗೆ ಸಿದ್ದರಾಮಯ್ಯಗೆ ಆಹ್ವಾನ

ಜನಸಂಕಲ್ಪ ಯಾತ್ರೆಯಲ್ಲಿ ಜನರೇ ಸೇರುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡುತ್ತೇನೆ, ಅವರೇ ಬಂದು ನೋಡಲಿ ಎಂದರು. ಮಾಧ್ಯಮದಲ್ಲಿ ತೋರಿಸುವ ಜನಸಾಗರವೇ ಉತ್ತರ. ಜನಸಂಕಲ್ಪ ಯಾತ್ರೆ, ವಿಜಯ ಸಂಕಲ್ಪವಾಗಿ ಪರಿವರ್ತನೆಯಾಗಲಿದೆ ಎಂದು ಬೊಮ್ಮಾಯಿ ಹೇಳಿದರು.

ಎರಡನೇ ಹಂತದಲ್ಲಿ ಜನಸಂಕಲ್ಪ ಯಾತ್ರೆಯು ಉಡುಪಿ, ಗದಗ, ಹಾವೇರಿ ಭಾಗದಲ್ಲಿ ನಡೆದಿದ್ದು ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಜರುಗಲಿದೆ ಎಂದು ಬೆಂಗಳೂರಿನಲ್ಲಿ ಬಸವರಾಜ ಬೊಮ್ಮಾಯಿ ಹೇಳಿದ್ದರು.

English summary
After submission report will take decision appointment of administrative officer for Murugha Math CM Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X