ಚಿತ್ರದುರ್ಗದಲ್ಲಿ ಸಿಎಂ ಬೆಂಗಾವಲು ವಾಹನ-ಬೈಕ್‌ ಡಿಕ್ಕಿ: ಇಬ್ಬರ ಸ್ಥಿತಿ ಗಂಭೀರ

ಚಿತ್ರದುರ್ಗ, ನವೆಂಬರ್‌22: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ಪೋಲಿಸ್ ವಾಹನ ಹಾಗೂ ಬೈಕ್‌ ಡಿಕ್ಕಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಒಟ್ಟು ಆರು ಮಂದಿ ಗಾಯಗೊಂಡಿದ್ದು, ಬೈಕ್‌ನಲ್ಲಿದ್ದ ತಾಯಿ ಮಗನ ಸ್ಥಿತಿ ಗಂಭೀರವಾಗಿದೆ.

89 ವರ್ಷಗಳ ಬಳಿಕ ಭರ್ತಿಯಾಗಿ ಕೋಡಿ ಬಿದ್ದಿದ್ದ ವಾಣಿವಿಲಾಸ ಸಾಗರ ಜಲಾಶಯಕ್ಕೆ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದರು. ಕಾರ್ಯಕ್ರಮ ಮುಗಿದ ಬಳಿಕ ಸಿಎಂ ಬೊಮ್ಮಾಯಿ ವಾಣಿ ವಿಲಾಸ ಡ್ಯಾಂನಿಂದ ಹಿರಿಯೂರು ಪಟ್ಟಣದ ನೆಹರು ಮೈದಾನಕ್ಕೆ ಬರುವ ವೇಳೆ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ.

ಹಿರಿಯೂರು ಬಿಜೆಪಿ ಕಚೇರಿ ಸಮೀಪದ ಅನಿಲ್ ಲಾಡ್ಜ್‌ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಬೈಕ್ ಅಡ್ಡ ಬಂದ ಪರಿಣಾಮ ತಪ್ಪಿಸಲು ಹೋಗಿ ಸಿಎಂ ಬೊಮ್ಮಾಯಿ ಬೆಂಗಾವಲು ಪೋಲಿಸ್ ವಾಹನ ಪಲ್ಟಿಯಾಗಿದೆ ಎನ್ನಲಾಗಿದೆ.

CM Security Vehicle Accident At Chitradurga Hiriyur

ಘಟನೆಯಲ್ಲಿ ಬೈಕ್‌ನಲ್ಲಿದ್ದ ತಾಯಿ ಮಗ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ವೇಳೆ ಸಿಪಿಐ ರಮಾಕಾಂತ್ ಸೇರಿದಂತೆ ಹಲವರು ಪೊಲೀಸ್‌ ಸಿಬ್ಬಂದಿ ವಾಹನದಲ್ಲಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಪೊಲೀಸ್ ಬೆಂಗಾವಲು ಪಡೆಯ ವಾಹನವು ನಿಯಂತ್ರಣ ತಪ್ಪಿ ಪಾದಚಾರಿ ಮಹಿಳೆ ಹಾಗೂ ಮಗನಿಗೆ ಡಿಕ್ಕಿ ಹೊಡೆದಿದೆ, ಘಟನೆಯಲ್ಲಿ ಪೊಲೀಸ್‌ ಸಿಬ್ಬಂದಿಯೂ ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಷ್ಟಾದರೂ ಕೂಡ ಘಟನಾ ಸ್ಥಳಕ್ಕೆ ಸಮೀಪದಲ್ಲೇ ಇದ್ದ, ಮುಖ್ಯಮಂತ್ರಿಗಳಾಗಲಿ, ಯಾವುದೇ ಬಿಜೆಪಿ ಶಾಸಕರಾಗಲಿ, ಸಚಿವರಾಗಲಿ ಸೌಜನ್ಯಕ್ಕೂ ಗಾಯಾಳುಗಳನ್ನು ಭೇಟಿ ಮಾಡದೇ, ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಇದರಿಂದ ಅವರ ವಿಕೃತ ಮನೋಭಾವ ತೋರಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

CM Security Vehicle Accident At Chitradurga Hiriyur

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಮುಖಂಡರ ವಿರುದ್ಧದ ಪ್ರತಿಭಟನೆಯಲ್ಲಿ ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಈರಲಿಂಗೆ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ್ ತಾಲೂಕು ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಗುರುಪ್ರಸಾದ್, ಸೇರಿದಂತೆ ಅನೇಕ ಕಾಂಗ್ರೆಸ್‌ ಕಾರ್ಯಕರ್ತರು ಭಾಗಿಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+