ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗದಲ್ಲಿ ಬಿ.ಎನ್. ಚಂದ್ರಪ್ಪ ಸ್ಪರ್ಧೆ:ಮಾ.25 ರಂದು ನಾಮಪತ್ರ ಸಲ್ಲಿಕೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಮಾರ್ಚ್ 24:18 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಶನಿವಾರ ತಡರಾತ್ರಿ ಬಿಡುಗಡೆ ಮಾಡಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿ.ಎನ್. ಚಂದ್ರಪ್ಪ ಅವರು ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮೊದಲು ಜೆಡಿಎಸ್ ಚಿತ್ರದುರ್ಗ ಜಿಲ್ಲೆಯನ್ನು ತಮಗೆ ಬಿಟ್ಟು ಕೊಡುವಂತೆ ಮನವಿ ಮಾಡಿತ್ತು. ಆದರೆ ಹಾಲಿ ಸಂಸದರೂ ಆಗಿರುವ ಚಂದ್ರಪ್ಪ ಅವರಿಗೆ ಈ ಬಾರಿ ಮತ್ತೆ ಟಿಕೆಟ್ ನೀಡಲಾಗಿದ್ದು, ಸೋಮವಾರ (ಮಾ.25) ಚಂದ್ರಪ್ಪ ನಾಮಪತ್ರ ಸಲ್ಲಿಸಲಿದ್ದಾರೆ.

ಸೋಮವಾರ ನಾಮಪತ್ರ ಸಲ್ಲಿಸುವ ವಿವಿಧ ಪಕ್ಷದ ಅಭ್ಯರ್ಥಿಗಳ ಪಟ್ಟಿಸೋಮವಾರ ನಾಮಪತ್ರ ಸಲ್ಲಿಸುವ ವಿವಿಧ ಪಕ್ಷದ ಅಭ್ಯರ್ಥಿಗಳ ಪಟ್ಟಿ

ನಾಮಪತ್ರ ಸಲ್ಲಿಸಲು ಚಂದ್ರಪ್ಪ ಅವರು ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗೂಂಡುರಾವ್ ಬರುವ ಸಾಧ್ಯತೆ ಹೆಚ್ಚಿದೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ, ಮಾಜಿ ಸಚಿವ ಎಚ್. ಆಂಜನೇಯ, ಡಿ. ಸುಧಾಕರ್, ಬಿ.ಜಿ. ಗೋವಿಂದಪ್ಪ. ಟಿ. ರಘುಮೂರ್ತಿ , ಜೆಡಿಎಸ್ ಜಿಲ್ಲಾ ಅಧ್ಯಕ್ಷ ಡಿ. ಯಶೋಧರ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

Congress candidate BN Chandrappa will file nomination on March 25

ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ

ಅಷ್ಟೇ ಅಲ್ಲ, ಚಂದ್ರಪ್ಪ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.

Congress candidate BN Chandrappa will file nomination on March 25

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಏಂಟು ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಐದು ಬಿಜೆಪಿ, ಒಂದು ಜೆಡಿಎಸ್, ಇನ್ನೆರಡರಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಿ ಎ. ನಾರಾಯಣ ಸ್ವಾಮಿ ಅವರಿಗೆ ಟಿಕೆಟ್ ನೀಡಿದ್ದು, ಚಂದ್ರಪ್ಪ ಮತ್ತು ನಾರಾಯಣ ಸ್ವಾಮಿ ಇಬ್ಬರು ಒಂದೇ ಸಮುದಾಯದವರು ಎನ್ನಲಾಗಿದೆ.

English summary
In Chitradurga, Congress candidate BN Chandrappa will file nomination on March 25.According to sources, former Chief Minister Siddaramaiah is coming here.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X