ಚಿತ್ರದುರ್ಗ ಪಂಚಾಯತ್ ಅಧ್ಯಕ್ಷೆ ಕಾಂಗ್ರೆಸ್ ನಿಂದ ಉಚ್ಛಾಟನೆ
ಚಿತ್ರದುರ್ಗ , ನವೆಂಬರ್ 29 : ಚಿತ್ರದುರ್ಗ ಜಿಲ್ಲಾ ಪಂಚಾಯತ್ ಅಧ್ಯಕ್ಷೆಯನ್ನು ಪಕ್ಷದಿಂದ ಕಾಂಗ್ರೆಸ್ ಉಚ್ಛಾಟನೆ ಮಾಡಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನ ಬಿಟ್ಟುಕೊಡದ ಕಾರಣ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಬುಧವಾರ ಉಚ್ಛಾಟಿಸಲಾಗಿದೆ.
ಕಳೆದ ನಾಲ್ಕು ತಿಂಗಳಿನಿಂದ ಸೌಭಾಗ್ಯ ಬಸವರಾಜನ್ ಅವರ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿತ್ತು. ಇದ್ಯಾವುದನ್ನೂ ಲೆಕ್ಕಿಸದೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದುಕೊಂಡು ಬಂದಿದ್ದ ಸೌಭಾಗ್ಯ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ಅವರು ಆದೇಶ ನೀಡಿದ್ದಾರೆ.

ಐದು ವರ್ಷದ ಅವಧಿಯ ಅಧಿಕಾರವನ್ನು ತಲಾ 15 ತಿಂಗಳಿನಂತೆ ನಾಲ್ವರು ಮಹಿಳೆಯರಿಗೆ ಹಂಚಿಕೆ ಒಡಂಬಡಿಕೆ ಮಾಡಲಾಗಿತ್ತು. ಮೊದಲ ಅವಧಿಗೆ ಅಧ್ಯಕ್ಷ ಸ್ಥಾನವನ್ನು ಸೌಭಾಗ್ಯ ಬಸವರಾಜನ್ ಅವರು ಅಲಂಕರಿಸಿದ್ದರು. ಅವಧಿ ಮುಗಿದರೂ ಸ್ಥಾನ ಬಿಟ್ಟುಕೊಡದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಈ ಕುರಿತಾಗಿ ಶಾಸಕರು ಸಚಿವರು ಹಾಗೂ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಸದಸ್ಯರು ಹೈಕಮಾಂಡ್ ಗೆ ಮೊರೆ ಹೋಗಿದ್ದರು.











Click it and Unblock the Notifications