• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ: ಕಾಂಗ್ರೆಸ್ ಮಾಜಿ ಶಾಸಕ ತಿಪ್ಪೇಸ್ವಾಮಿ ಪುತ್ರ ಶಿವಕುಮಾರ್ ನಿಧನ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜು 6: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ನೆರ್ಲಗುಂಟೆ ಎನ್.ತಿಪ್ಪೇಸ್ವಾಮಿ ಅವರ ಪುತ್ರ ಶಿವಕುಮಾರ್ ಅವರು ಅಕಾಲಿಕ ಮರಣ ಹೊಂದಿದ್ದಾರೆ.

ಪಿಎಸ್ಐ ಹಗರಣ; ಕಾಂಗ್ರೆಸ್‌ ಆರೋಪಕ್ಕೆ ಸಚಿವರ ದಿಟ್ಟ ಉತ್ತರಪಿಎಸ್ಐ ಹಗರಣ; ಕಾಂಗ್ರೆಸ್‌ ಆರೋಪಕ್ಕೆ ಸಚಿವರ ದಿಟ್ಟ ಉತ್ತರ

32 ವರ್ಷದ ಶಿವಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಚಿತ್ರದುರ್ಗ, ದಾವಣಗೆರೆ ಹಾಗೂ ಬೆಂಗಳೂರು ಸೇರಿದಂತೆ ಮತ್ತಿತರರ ಕಡೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ. ಮಾಜಿ ಶಾಸಕ ತಿಪ್ಪೇಸ್ವಾಮಿ ಅವರಿಗೆ ಶಿವಕುಮಾರ್ ಅವರು ಓರ್ವ ಪುತ್ರನಾಗಿದ್ದರು. ಆರೋಗ್ಯ ಸರಿಯಿಲ್ಲ ಇಲ್ಲದ ಕಾರಣ ಮನೆಯಲ್ಲಿದ್ದರು.

ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ

ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಎನ್. ತಿಪ್ಪೇಸ್ವಾಮಿ ಅವರು ಶಿಕ್ಷಕ ಸ್ಥಾನಕ್ಕೆ ರಾಜೀನಾಮೆ ನೀಡಿ 2013 ರಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಗೆಲುವು ಕಂಡಿದ್ದರು. ತದನಂತರ 2018 ರಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷ ಹಾಗೂ ಸಂಸ್ಥಾಪಕ ಬಿ. ಶ್ರೀರಾಮುಲು ಅವರು ಬಿಜೆಪಿ ಜೊತೆ ವಿಲೀನಗೊಂಡ ಬಳಿಕ ಮೊಳಕಾಲ್ಮೂರಿನಿಂದ ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ಸಿಗಲಿಲ್ಲ. 2018 ರಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ. ಶ್ರೀರಾಮುಲು ಸ್ಪರ್ಧಿಸಿದ ಕಾರಣ ಎನ್.ತಿಪ್ಪೇಸ್ವಾಮಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಶ್ರೀರಾಮುಲು ವಿರುದ್ಧ ಅತ್ಯಧಿಕ ಮತಗಳಿಂದ ಸೋಲು ಅನುಭವಿಸಿದ್ದರು.

congress former MLA Thippeswamy son passes away

ತದನಂತರ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಕ್ಷೇತ್ರಾದ್ಯಂತ ಪಕ್ಷ ಸಂಘಟನೆಗೆ ಮುಂದಾಗಿದ್ದು, 2023 ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದಾರೆ ತಿಪ್ಪೇಸ್ವಾಮಿ ಎಂದು ಹೇಳಬಹುದು.

Recommended Video

   PT Usha ಓಡುವ ಟ್ರ್ಯಾಕ್ ‌ನಿಂದ ಈಗ ರಾಜ್ಯಸಭೆ ಕಡೆಗೆ | *Sports | OneIndia Kannada
   English summary
   Chitradurga: Former congress MLA from Molakalmuru assembly constituency N Thippeswamy's son Shivakumar passed away.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X