ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ 5 ವರ್ಷ ಪೂರ್ಣಗೊಳಿಸಲಿದೆ'

By Gururaj
|
Google Oneindia Kannada News

ಚಿತ್ರದುರ್ಗ, ಜೂನ್ 26 : 'ಸಮ್ಮಿಶ್ರ ಸರ್ಕಾರ ರಚನೆ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್-ಜೆಡಿಎಸ್ ಒಪ್ಪಂದ ಮಾಡಿಕೊಂಡಿವೆ. ಅದರಂತೆ ಐದು ವರ್ಷಗಳ ವರೆಗೂ ಸಮ್ಮಿಶ್ರ ಸರ್ಕಾರ ಇರುತ್ತದೆ' ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು.

ಮಂಗಳವಾರ ಚಿತ್ರದುರ್ಗದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು, 'ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸುತ್ತದೆ. ಕೆಪಿಸಿಸಿ ಅಧ್ಯಕ್ಷನಾಗಿ ಈ ಮಾತನ್ನು ಹೇಳುತ್ತಿದ್ದೇನೆ' ಎಂದರು.

ಬಜೆಟ್‌ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?, ವಿಡಿಯೋ ವೈರಲ್ಬಜೆಟ್‌ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?, ವಿಡಿಯೋ ವೈರಲ್

ಸಮ್ಮಿಶ್ರ ಸರ್ಕಾರ ಅವಧಿ ಪೂರ್ಣಗೊಳಿಸುವುದೇ? ಎಂಬ ಪ್ರಶ್ನೆಗೆ ಅಸಮಾಧಾನದಿಂದಲೇ ಪರಮೇಶ್ವರ ಅವರು ಉತ್ತರ ನೀಡಿದರು. 'ಈ ಪ್ರಶ್ನೆಯನ್ನು ಎಷ್ಟು ಬಾರಿ ಕೇಳಿದರೂ ನನ್ನ ಉತ್ತರ ಇದೇ' ಎಂದು ಪರಮೇಶ್ವರ ತಿಳಿಸಿದರು.

ಸಿದ್ದರಾಮಯ್ಯ ಮಾತಿಗೆ ನೇರವಾಗಿಯೇ ಎದಿರೇಟು ನೀಡಿದ ಕುಮಾರಸ್ವಾಮಿಸಿದ್ದರಾಮಯ್ಯ ಮಾತಿಗೆ ನೇರವಾಗಿಯೇ ಎದಿರೇಟು ನೀಡಿದ ಕುಮಾರಸ್ವಾಮಿ

 Parameshwara

'ಸಮ್ಮಿಶ್ರ ಸರ್ಕಾರ ರಚನೆ ಮಾಡುವ ಸಂದರ್ಭದಲ್ಲಿಯೇ ಕಾಂಗ್ರೆಸ್-ಜೆಡಿಎಸ್ ಒಪ್ಪಂದ ಮಾಡಿಕೊಂಡಿವೆ. ಅದರಂತೆ ಐದು ವರ್ಷಗಳ ವರೆಗೂ ಸಮ್ಮಿಶ್ರ ಸರ್ಕಾರ ಇರುತ್ತದೆ' ಎಂದು ಪರಮೇಶ್ವರ ಸ್ಪಷ್ಟಪಡಿಸಿದರು.

'ರಾಜಕಾರಣದಲ್ಲಿ ಯಾವಾಗ ಏನಾಗುತ್ತದೆ? ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ' ಎಂದು ಪರಮೇಶ್ವರ ಹೇಳಿದರು.

English summary
KPCC president and Deputy chief minister Dr.G.Parameshwara said that, Congress-JD(S) government in Karnataka will complete five-year tenure.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X