India
  • search
  • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋಟೆನಾಡು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜೂ. 17: ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ , ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಅವರ ಮೇಲೆ ಇಡಿ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕೋಟೆ ನಾಡು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು.

ಇನ್ನು ಕಾಂಗ್ರೆಸ್ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ನಾಯಕರನ್ನು ಪೊಲೀಸರು ಬಂಧಿಸಿದ ಘಟನೆ ಕೂಡ ನಡೆಯಿತು. ಕಾಂಗ್ರೆಸ್ ಕಚೇರಿಯಿಂದ ಹೊರಟ ಕಾಂಗ್ರೆಸ್ ನಾಯಕರುಗಳ ಮೆರವಣಿಗೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಸೋಮವಾರದವರೆಗೆ ಕಾಲಾವಕಾಶ ಕೋರಿದ್ದಾರೆ. ರಾಹುಲ್ ಗಾಂಧಿ ಅವರನ್ನು ಇಡಿ ಸತತ ಮೂರು ದಿನವೂ ಪ್ರಶ್ನಿಸಿದೆ. ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸತತ ಮೂರು ದಿನಗಳ ಕಾಲ ಸುಮಾರು 27 ಗಂಟೆ ವಿಚಾರಣೆ ಎದುರಿಸಿದ್ದಾರೆ.

ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನ ಪೀಠಾಧ್ಯಕ್ಷರು ಶಿವೈಕ್ಯ; ಅಸಹಜ ಸಾವು ಶಂಕೆಚಿಟುಗು ಮಲ್ಲೇಶ್ವರ ಮಹಾಸಂಸ್ಥಾನ ಪೀಠಾಧ್ಯಕ್ಷರು ಶಿವೈಕ್ಯ; ಅಸಹಜ ಸಾವು ಶಂಕೆ

ಪ್ರತಿಭಟನಾಕಾರರು -ಪೊಲೀಸರ ನಡುವೆ ಜಟಾಪಟಿ

ನಂತರ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಪ್ರತಿಭಟನಾ ಮಾರ್ಗ ಬದಲಿಸಿಕೊಂಡು, ನೇರವಾಗಿ ಪ್ರವಾಸಿ ಮಂದಿರದ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಪ್ರವಾಸಿ ಮಂದಿರದ ಬಳಿ ತಡೆಯಲು ಮುಂದಾದರು. ಇದರಿಂದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಜಟಾಪಟಿ ಏರ್ಪಟ್ಟಿತ್ತು. ಬಂಧಿಸಲು ಮುಂದಾದ ಪೋಲಿಸರಿಂದ ತಪ್ಪಿಸಿಕೊಂಡು ನೆಲದ ಮೇಲೆ ಬಿದ್ದು ಉರುಳಾಡಿದ ಘಟನೆ ನಡೆಯಿತು. ಆದರೆ ಪಟ್ಟು ಬಿಡದೆ ಪೋಲಿಸರು ಯುವ ಕಾಂಗ್ರೆಸ್ ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು.

ಠಾಣೆಗೆ ಮುತ್ತಿಗೆ: ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಪ್ರತಿಭಟನೆ ವೇಳೆಯಲ್ಲಿ ಕೆಲ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡರು ನಗರ ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು.

Congress Protest in Chitradurga Condemning ED Summons to Rahul Gandhi

ಅಂಬೇಡ್ಕರ್ ಪ್ರತಿಮೆಗೆ ಹಾರ ಹಾಕಿ ಗೌರವಿಸಿ ಮೆರವಣಿಗೆಯಲ್ಲಿ ಹೊರಟ ಕೆಲ ಕಾರ್ಯಕರ್ತರು ಹಾಗು ಮುಖಂಡರನ್ನು ಪೋಲಿಸರು ಬಂಧಿಸಿದ್ದರು. ಇದನ್ನು ಪ್ರಶ್ನಿಸಿದ ಕಾಂಗ್ರೆಸ್ ಮುಖಂಡರು ತನ್ನ ಕಚೇರಿಯಿಂದ ನೇರವಾಗಿ ನಗರ ಠಾಣೆಗೆ ಬಂದು ಮುತ್ತಿಗೆ ಹಾಕಿ ಪೋಲಿಸರ ವಿರುದ್ಧ ಆಕ್ರೋಶ ಹೊರ ಹಾಕಿದರು. ಈ ವೇಳೆ ಪೋಲಿಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ಮಾತಿನ ಚಕಮಕಿ, ನೂಕಾಟ ತಳ್ಳಾಟ ನಡೆಯಿತು.

 ಪ್ರತಿಭಟನೆ ಮೂಲಕ ಕಾಂಗ್ರೆಸ್‌ನಿಂದ ಬೆದರಿಕೆ: ಬಿ.ಸಿ. ಪಾಟೀಲ್ ಪ್ರತಿಭಟನೆ ಮೂಲಕ ಕಾಂಗ್ರೆಸ್‌ನಿಂದ ಬೆದರಿಕೆ: ಬಿ.ಸಿ. ಪಾಟೀಲ್

ನಮ್ಮನ್ನು ಬಂಧಿಸಿ ಇಲ್ಲವೇ ಅವರನ್ನು ಕೂಡಲೇ ಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇನ್ನು ಠಾಣೆಯೊಳಗೆ ನುಗ್ಗಲು ಪ್ರಯತ್ನಿಸಿದ ಕಾರ್ಯಕರ್ತರನ್ನು ಪೋಲಿಸರು ತಡೆದರು.

ಬಂಧಿಸಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಕರೆ ತರುವವರೆಗೂ ಪಟ್ಟು ಹಿಡಿದು ಠಾಣೆಯ ಮುಂದೆ ಪ್ರತಿಭಟನೆ ಮುಂದುವರೆಸಿದ ಪ್ರಸಂಗ ನಡೆಯಿತು. ರಾಹುಲ್ ಗಾಂಧಿ ವಿರುದ್ಧದ ಇಡಿ ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದೆ. ಇದೊಂದು ದ್ವೇಷದ ರಾಜಕೀಯ ಎಂದು ಆರೋಪಿಸಿದೆ.

(ಒನ್ಇಂಡಿಯಾ ಸುದ್ದಿ)

English summary
Chitradurga district Congress leaders and workers protest against ED case on Rahul Gandhi and Sonia Gandhi in the National Herald case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X