ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು; ಎಚ್. ಆಂಜನೇಯ

ಚಿತ್ರದುರ್ಗ, ನವೆಂಬರ್ 22; " ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಒಟ್ಟು 11 ತಾಲೂಕುಗಳ ಸ್ಥಳೀಯ ಸಂಸ್ಥೆಗಳಿಂದ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ಗೆಲುವು ಸಾಧಿಸಲಿದ್ದಾರೆ" ಎಂದು ಮಾಜಿ ಸಚಿವ ಎಚ್. ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಚಿತ್ರದುರ್ಗ ನಗರದ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, "ಎರಡು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸದಸ್ಯರಲ್ಲ ಶೇ 65ರಷ್ಟು ನಮ್ಮವರೇ ಇದ್ದಾರೆ. ಹಾಗಾಗಿ ನಮ್ಮ ಅಭ್ಯರ್ಥಿ ಸೋಮಶೇಖರ್ ಗೆಲುವು ಸುಲಭವಾಗಲಿದೆ" ಎಂದು ತಿಳಿಸಿದರು.

"ರಘು ಆಚಾರ್ ಎರಡು ಬಾರಿ ಗೆಲುವು ಸಾಧಿಸಿದ್ದರು. ಈ ಬಾರಿ ಬೇರೆಯವರಿಗೆ ಅವಕಾಶ ನೀಡಬೇಕು ಎನ್ನುವ ಉದ್ದೇಶವಿತ್ತು. ಒಂದು ತಿಂಗಳು ಕಾಲಾವಕಾಶ ನೀಡಿದರೂ ಸ್ಥಳೀಯವಾಗಿ ಯಾರು ಸ್ಪರ್ಧಿಸಲು ಮುಂದೆ ಬರಲಿಲ್ಲ. ಸ್ಥಳೀಯವಾಗಿ ಜಿ. ಎಸ್. ಮಂಜುನಾಥ್, ಷಣ್ಮುಖಪ್ಪಗೆ ಚುನಾವಣೆಗೆ ಸ್ಪರ್ಧಿಸುವಂತೆ ಹೇಳಲಾಗಿತ್ತು. ಯಾರು ಮುಂದೆ ಬರಲಿಲ್ಲ. ಈ ಕಾರಣಕ್ಕೆ ಕಾಂಗ್ರೆಸ್‌ನಿಂದ ಸೋಮಶೇಖರ್‌ರನ್ನು ಹೈಕಮಾಂಡ್ ಆಯ್ಕೆ ಮಾಡಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲಾಗಿದೆ" ಎಂದರು.

 Congress Will Legislative Council Election Says H Anjaneya

"ಸೋಮಶೇಖರ್ ಗ್ರಾಮ ಪಂಚಾಯಿತಿ ಸದಸ್ಯರಾಗಿ ಮೇಲೆ ಬಂದಿರುವಂತವರು, ಅನುಭವ ಹೊಂದಿದ್ದಾರೆ. ರಾಜ್ಯ ಮಟ್ಟದ ಕ್ಯಾಬಿನೆಟ್ ದರ್ಜೆಯ ಸಾವಯವ ಕೃಷಿ ಸಮಿತಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಸಾಕಷ್ಟು ಸಂಘಟನೆಯಲ್ಲಿ ಕೆಲಸ ಮಾಡಿಕೊಂಡು ಅನುಭವಿದೆ. ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಹಾಗೂ ಗ್ರಾ, ಪಂಚಾಯಿತಿ ವ್ಯವಸ್ಥೆಯ ಬಗ್ಗೆ ತಿಳಿದುಕೊಂಡಿರುವ ಹಾಗೂ ಅಧ್ಯಯನ ಮಾಡಿಕೊಂಡು ವಿಷಯವಂತರಾಗಿದ್ದಾರೆ" ಎಂದು ಹೇಳಿದರು.

"ಜೀತದಾಳಾಗಿರುವವನೂ ಕೂಡ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯನಾಗುವ ಅವಕಾಶವನ್ನು ಕಾಂಗ್ರೆಸ್ ನೀಡಿದೆ. ಮಹಿಳೆಯರಿಗೆ ಹೆಚ್ಚಿನ ಅಧಿಕಾರ ಕೊಡಬೇಕು ಎನ್ನುವ ದೃಷ್ಠಿಯಿಂದ ಶೇ 50ರಷ್ಟು ಮೀಸಲಾತಿಯನ್ನು ನೀಡಿದ್ದೇವೆ" ಎಂದು ಆಂಜನೇಯ ತಿಳಿಸಿದರು.

"ಕಾಂಗ್ರೆಸ್ ಸರ್ಕಾರದ ಆಡಳಿತವಿದ್ದಾಗ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗೆ ಹೆಚ್ಚಿನ ಅನುದಾನ ನೀಡಲಾಗಿತ್ತು. ಹೀಗಿರುವಾಗ ಪರಿಷತ್ ಚುನಾವಣೆ ಅಭ್ಯರ್ಥಿ ನಮ್ಮ ಜಿಲ್ಲೆಯವರೇ. ಆದ್ದರಿಂದ ಅವರನ್ನು ಬೆಂಬಲಿಸಿ ಮತ ಹಾಕಿಸಿ ಗೆಲ್ಲಿಸುವ ಕೆಲಸ ಮಾಡುತ್ತೇವೆ" ಎಂದು ಹೇಳಿದರು.

ಜನ ಬೇಸತ್ತಿದ್ದಾರೆ; "ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಸರಿಯಾಗಿ ಕೆಲಸ ನಿರ್ವಹಿಸಿಲ್ಲ, ಕೋವಿಡ್ ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರಗಳು ವಿಫಲವಾಗಿವೆ. ಬಿಜೆಪಿ ಆಡಳಿತಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಇಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತವೆ. ಆದ್ದರಿಂದ ಈ ಬಾರಿ ಮತದಾರರು ಕಾಂಗ್ರೆಸ್ ಪರವಾಗಿ ಮತ ಹಾಕಲಿದ್ದು, ಗೆಲುವು ನಮ್ಮದಾಗುತ್ತದೆ" ಎಂದು ಎಚ್. ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದರು.

ಡಿಸೆಂಬರ್ 10ರಂದು ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ. ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+