ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಳ್ಳಕೆರೆ ನಗರಸಭೆ ಚುನಾವಣೆ; ಅಧಿಕಾರ ಕಾಂಗ್ರೆಸ್ ತೆಕ್ಕೆಗೆ

|
Google Oneindia Kannada News

ಚಿತ್ರದುರ್ಗ, ನವೆಂಬರ್ 03: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದುಕೊಂಡ ಹಿನ್ನೆಲೆಯಲ್ಲಿ ನಗರಸಭೆಯಲ್ಲಿ ಅಧಿಕಾರ ಹಿಡಿದಿದ್ದಾರೆ.

ಅಧ್ಯಕ್ಷ ಸ್ಥಾನ ಎಸ್.ಸಿ ಮಹಿಳೆಗೆ ಮೀಸಲು ಬಂದಿದ್ದರಿಂದ ಮಂಗಳವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಜಯಲಕ್ಷ್ಮಿ ಅವರು 17 ಮತ ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ. ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ ಜೈ ತುಂಬಿ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಚಳ್ಳಕೆರೆ ನಗರ ಸಭೆಯಲ್ಲಿ ಒಟ್ಟು 31 ವಾರ್ಡ್ ಗಳಿದ್ದು 16ರಲ್ಲಿ ಕಾಂಗ್ರೆಸ್, 10ರಲ್ಲಿ ಜೆಡಿಎಸ್, 04ರಲ್ಲಿ ಬಿಜೆಪಿ ಜಯಗಳಿಸಿದೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಪಕ್ಷದಿಂದ ಉಚ್ಛಾಟನೆಬಿಜೆಪಿ ಬಂಡಾಯ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಪಕ್ಷದಿಂದ ಉಚ್ಛಾಟನೆ

ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದುಕೊಂಡಿದ್ದು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಚಿತ್ರದುರ್ಗ ಉಪವಿಭಾಗಾಧಿಕಾರಿ ಪ್ರಸನ್ನ ಅವರ ನೇತೃತ್ವದಲ್ಲಿ ಚುನಾವಣೆ ನಡೆದಿದೆ. ನಗರಸಭಾ ಅಧ್ಯಕ್ಷರು ಹಾಗೂ ಸದಸ್ಯರು ಶಾಸಕ ಟಿ. ರಘುಮೂರ್ತಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.

Chitradurga: Congress Won Challakere Municipal Council Election

ಜೆಡಿಎಸ್ ದೂರು: ಜೆಡಿಎಸ್ 10 ಹಾಗೂ ಬಿಜೆಪಿ 04 ಸದಸ್ಯರು ಒಂದಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಪರಾಭವಗೊಂಡಿವೆ. ಸರ್ವೋಚ್ಚ ನ್ಯಾಯಲಯದ ಆದೇಶದಂತೆ 2/11/2020 ರೊಳಗೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯನ್ನು ನಡೆಸುವಂತೆ ಸ್ಪಷ್ಟ ಆದೇಶವಿದ್ದರೂ ಜಿಲ್ಲಾಡಳಿತ ದಿನಾಂಕ 3ನೇ ತಾರೀಕಿನಂದು ಚುನಾವಣೆ ನಡೆಸಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯನ್ನು ರದ್ದುಪಡಿಸಬೇಕು ಎಂದು ಕೋರಿ ಚುನಾವಣಾಧಿಕಾರಿ ಪ್ರಸನ್ನ ಅವರಿಗೆ ಜೆಡಿಎಸ್ ಸದಸ್ಯರು ಮನವಿ ಸಲ್ಲಿಸಿದ್ದಾರೆ.

English summary
Congress has won challakere Municipal council president and vice president election,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X