ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಡಿ ಪ್ರಕರಣ; ಸ್ಪಷ್ಟನೆ ನೀಡಿದ ಮಾಜಿ ಸಚಿವ ಸುಧಾಕರ್

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಏಪ್ರಿಲ್ 4; ಕರ್ನಾಟಕದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಸಿಡಿಯಲ್ಲಿರುವ ಸಂತ್ರಸ್ತ ಯುವತಿ ಜೊತೆ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಸಂಪರ್ಕ ಹೊಂದಿದ್ದರು ಎಂಬ ವಿಚಾರ ಶನಿವಾರ ಬಹಿರಂಗವಾಗಿದೆ.

ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ. ಸುಧಾಕರ್ ಹೆಸರು ಶನಿವಾರದಿಂದ ಕೇಳಿ ಬರುತ್ತಿದೆ. ಹಿರಿಯೂರು ಕ್ಷೇತ್ರದ ಮಾಜಿ ಶಾಸಕ ಸುಧಾಕರ್ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆಗಳನ್ನು ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಆರ್‌ಟಿ ನಗರದ ಪಿಜಿಯಲ್ಲಿ ಎಸ್ಐಟಿ ಮಹಜರು ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಆರ್‌ಟಿ ನಗರದ ಪಿಜಿಯಲ್ಲಿ ಎಸ್ಐಟಿ ಮಹಜರು

"ನನಗೂ ಸಿಡಿಯಲ್ಲಿದ್ದಾರೆ ಎಂಬ ಸಂತ್ರಸ್ತ ಯುವತಿಗೂ ಯಾವುದೇ ಸಂಬಂಧವಿಲ್ಲ. ನನ್ನ ಹೆಸರು ಮಾಧ್ಯಮದಲ್ಲಿ ಪ್ರಸ್ತಾಪವಾಗಿರುವುದು ಅಚ್ಚರಿ ಮೂಡಿಸಿದೆ. ಸಿಡಿ ವಿಚಾರದಲ್ಲಿ ನನ್ನ ಯಾವುದೇ ಪಾತ್ರವಿಲ್ಲ" ಎಂದು ಸುಧಾಕರ್ ಹೇಳಿದರು.

Connection With CD Women D Sudhakar Clarification

"ನನ್ನದು ಕಾಂಗ್ರೆಸ್ ಕುಟುಂಬ, ನಾನು ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರೊಂದಿಗೂ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರೊಂದಿಗೆ ಒಂದೇ ರೀತಿಯ ಬಾಂಧವ್ಯವನ್ನು ಹೊಂದಿದ್ದೇನೆ" ಎಂದರು.

"ನನ್ನ ತಂದೆ ಸ್ವಾತಂತ್ರ್ಯ ಹೋರಾಟಕ್ಕಾಗಿ ಜೈಲಿಗೆ ಹೋಗಿ ಬಂದವರು. ಅಂತಹ ಕುಟುಂಬದಿಂದ ನಾನು ಬಂದಿದ್ದೇನೆ. ನನ್ನ ಹೆಸರು ಮಾಧ್ಯಮದಲ್ಲಿ ಪ್ರಸ್ತಾಪಿಸಿರುವುದು ಆಚ್ಚರಿ ಮೂಡಿಸಿದೆ. ನಾನು ಜನಪ್ರತಿನಿಧಿ ದಿನನಿತ್ಯ ನೂರಾರು ಜನರು ಕರೆ ಮಾಡುತ್ತಾರೆ. ಅದರಲ್ಲಿ ಆ ಹುಡುಗಿ ಯಾರು? ಎಂದು ನನಗೆ ಗೊತ್ತಿಲ್ಲ" ಎಂದು ಮಾಜಿ ಸಚಿವರು ಸ್ಪಷ್ಟಪಡಿಸಿದರು.

ಸಿಡಿ ಪ್ರಕರಣದ ಕುರಿತು ನನ್ನನ್ನು ಏನೂ ಕೇಳಬೇಡಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಿಡಿ ಪ್ರಕರಣದ ಕುರಿತು ನನ್ನನ್ನು ಏನೂ ಕೇಳಬೇಡಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್

"ನಾನು ಯಾವುದೇ ಖಾತೆಗೆ ಹಣ ಕಳುಹಿಸಿಲ್ಲ. ಯಾರಿಗೂ 10 ರೂಪಾಯಿಯೂ ನೀಡಿಲ್ಲ. ಎಸ್‌ಐಟಿ ನನಗೆ ಯಾವುದೇ ನೋಟಿಸ್ ನೀಡಿಲ್ಲ. ಹಾಗೇನಾದರೂ ನೋಟಿಸ್ ನೀಡಿದಲ್ಲಿ ನಾನು ವಿಚಾರಣೆ ಹೋಗಲು ಸಿದ್ದವಿದ್ದೇನೆ" ಎಂದರು.

Recommended Video

ಜೈಲಿಗೆ ಹೋಗ್ಬೇಕು ಅಂತ ಹೆದರಿ ಹೊಸ ಡ್ರಾಮಾ ಶುರು ಮಾಡಿದ್ರಾ? | Jarkiholi High drama | Oneindia Kannada

"ಸದರಿ ಪ್ರಕರಣದಲ್ಲಿ ನಾನು ತಪ್ಪಿತಸ್ಥ ಎನ್ನುವ ಭಯ ನನ್ನಲ್ಲಿ ಇದ್ದಿದ್ದರೆ ಕೆಲವು ಸಚಿವರು ಮತ್ತು ಜನಪ್ರತಿನಿಧಿಗಳು ತಮ್ಮ ವಿರುದ್ಧ ವಿಚಾರಣೆ ನಡೆಸದಂತೆ ಘನ ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆಯನ್ನು ತಂದಿರುವಂತೆ ನಾನು ಸಹ ನ್ಯಾಯಾಲಯದ ಮೊರೆ ಹೋಗುತ್ತಿದ್ದೆ" ಎಂದು ಡಿ. ಸುಧಾಕರ್ ಹೇಳಿದರು.

English summary
Former minister and Congress leader D. Sudhakar clarification connection with the women in the BJP leader Ramesh Jarkiholi CD case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X