ಚಿತ್ರದುರ್ಗದಲ್ಲಿ ಜ.8ರಿಂದ ಕೋವಿಡ್ ಡ್ರೈ ರನ್ ಪ್ರಾರಂಭ
ಚಿತ್ರದುರ್ಗ, ಜನವರಿ 7: ಚಿತ್ರದುರ್ಗ ಜಿಲ್ಲೆಯಲ್ಲಿ ಶುಕ್ರವಾರ(ಜ.8) ರಂದು ಕೋವಿಡ್ ಡ್ರೈ ರನ್ ಆರಂಭವಾಗಲಿದ್ದು, ಇದಕ್ಕಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಚಿತ್ರದುರ್ಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿಥಲೀಕರಣ ಘಟಕದಲ್ಲಿ ಸುಮಾರು 30 ಲಕ್ಷ ಕೋವಿಡ್ ಲಸಿಕೆಗಳನ್ನು ಸಂಗ್ರಹಿಸಿಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆ ಸೇರಿದಂತೆ ಶಿವಮೊಗ್ಗ, ಬಳ್ಳಾರಿ, ದಾವಣಗೆರೆಗೆ ಇಲ್ಲಿಂದಲೇ ಲಸಿಕೆಯನ್ನು ಪೂರೈಸಲಾಗುತ್ತದೆ.

ಮೂರು ಹಂತದ ಕೊಠಡಿಗಳನ್ನು ಸರ್ಕಾರಿ ತರಬೇತಿ ಕೇಂದ್ರದಲ್ಲಿ ಲಸಿಕೆ ಕೊಡಲು ಸಿದ್ಧತೆ ಮಾಡಿಕೊಂಡಿದ್ದು, ಮೊದಲ ಹಂತದಲ್ಲಿ ನೂರು ಜನರಿಗೆ ಕೊಡಲಾಗುವುದು ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

ಶುಕ್ರವಾರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಮಕ್ಕಳ ಲಸಿಕಾ ಕೇಂದ್ರದಲ್ಲಿ ಲಸಿಕೆಯ ಡ್ರೈ ರನ್ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ನೆರೆವೇರಿಸಲಿದ್ದಾರೆ.
ಚಿತ್ರದುರ್ಗದ ಸರ್ಕಾರಿ ತರಬೇತಿ ಕೇಂದ್ರದಲ್ಲಿ ಲಸಿಕೆ ಕೊಡಲು ಸಿದ್ಧತೆ ಮಾಡಿಕೊಂಡಿದ್ದು, ಮೊದಲ ಹಂತದಲ್ಲಿ ನೂರು ಜನರಿಗೆ ಕೊಡಲಾಗುವುದು ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.#Chitradurga #COVID19 #vaccine pic.twitter.com/OEXi0JDw0k
— oneindiakannada (@OneindiaKannada) January 7, 2021
ನಂತರ ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕೂಡ ಕೋವಿಡ್ ಡ್ರೈ ರನ್ ಗಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಚಿತ್ರದುರ್ಗದ ಜಿಲ್ಲಾ ತರಬೇತಿ ಕೇಂದ್ರ, ಸಿರಿಗೆರೆ ಆರೋಗ್ಯ ಕೇಂದ್ರ, ಗುಡ್ಡದ ರಂಗವ್ವನಹಳ್ಳಿ, ಬುದ್ಧ ನಗರದ ನಗರ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಸಿದ್ಧತೆಗಳನ್ನು ಮಾಡಿಕೊಳ್ಳಾಗಿದೆ ಎಂದು ಡಾ.ತುಳಸಿ ರಂಗನಾಥ್ ಹೇಳಿದರು.












Click it and Unblock the Notifications