ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗದಲ್ಲಿ ಜ.8ರಿಂದ ಕೋವಿಡ್ ಡ್ರೈ ರನ್ ಪ್ರಾರಂಭ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜನವರಿ 7: ಚಿತ್ರದುರ್ಗ ಜಿಲ್ಲೆಯಲ್ಲಿ ಶುಕ್ರವಾರ(ಜ.8) ರಂದು ಕೋವಿಡ್ ಡ್ರೈ ರನ್ ಆರಂಭವಾಗಲಿದ್ದು, ಇದಕ್ಕಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಚಿತ್ರದುರ್ಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿಥಲೀಕರಣ ಘಟಕದಲ್ಲಿ ಸುಮಾರು 30 ಲಕ್ಷ ಕೋವಿಡ್ ಲಸಿಕೆಗಳನ್ನು ಸಂಗ್ರಹಿಸಿಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆ ಸೇರಿದಂತೆ ಶಿವಮೊಗ್ಗ, ಬಳ್ಳಾರಿ, ದಾವಣಗೆರೆಗೆ ಇಲ್ಲಿಂದಲೇ ಲಸಿಕೆಯನ್ನು ಪೂರೈಸಲಾಗುತ್ತದೆ.

Chitradurga: Corona Vaccine Dry Run Starts On January 8

 ಕರ್ನಾಟಕದಲ್ಲಿ ಎರಡನೇ ಸುತ್ತಿನ ಲಸಿಕೆ ಡ್ರೈ ರನ್; ಏನೆಲ್ಲಾ ತಯಾರಿಯಾಗಿದೆ? ಕರ್ನಾಟಕದಲ್ಲಿ ಎರಡನೇ ಸುತ್ತಿನ ಲಸಿಕೆ ಡ್ರೈ ರನ್; ಏನೆಲ್ಲಾ ತಯಾರಿಯಾಗಿದೆ?

ಮೂರು ಹಂತದ ಕೊಠಡಿಗಳನ್ನು ಸರ್ಕಾರಿ ತರಬೇತಿ ಕೇಂದ್ರದಲ್ಲಿ ಲಸಿಕೆ ಕೊಡಲು ಸಿದ್ಧತೆ ಮಾಡಿಕೊಂಡಿದ್ದು, ಮೊದಲ ಹಂತದಲ್ಲಿ ನೂರು ಜನರಿಗೆ ಕೊಡಲಾಗುವುದು ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

Chitradurga: Corona Vaccine Dry Run Starts On January 8

ಶುಕ್ರವಾರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಮಕ್ಕಳ‌ ಲಸಿಕಾ ಕೇಂದ್ರದಲ್ಲಿ ಲಸಿಕೆಯ ಡ್ರೈ ರನ್ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ನೆರೆವೇರಿಸಲಿದ್ದಾರೆ.

ನಂತರ ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕೂಡ ಕೋವಿಡ್ ಡ್ರೈ ರನ್ ಗಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಚಿತ್ರದುರ್ಗದ ಜಿಲ್ಲಾ ತರಬೇತಿ ಕೇಂದ್ರ, ಸಿರಿಗೆರೆ ಆರೋಗ್ಯ ಕೇಂದ್ರ, ಗುಡ್ಡದ ರಂಗವ್ವನಹಳ್ಳಿ, ಬುದ್ಧ ನಗರದ ನಗರ ಆರೋಗ್ಯ ಕೇಂದ್ರಗಳಲ್ಲಿ‌ ಲಸಿಕೆ ನೀಡಲು ಸಿದ್ಧತೆಗಳನ್ನು‌ ಮಾಡಿಕೊಳ್ಳಾಗಿದೆ ಎಂದು ಡಾ.ತುಳಸಿ ರಂಗನಾಥ್ ಹೇಳಿದರು.

English summary
The Corona Vaccine Dry Run is scheduled to start on Friday (Jan. 8) in Chitradurga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X