• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ರದುರ್ಗದಲ್ಲಿ ದಿಢೀರನೆ ಹೆಚ್ಚಳವಾದ ಕೊರೊನಾ ಸೋಂಕಿತರ ಸಂಖ್ಯೆ

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಆಗಸ್ಟ್ 31: ಚಿತ್ರದುರ್ಗದಲ್ಲಿ ಇಂದು 286 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,896ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ ಈ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

   ಕಾಂಗ್ರೆಸ್ ನ ನಿಷ್ಠಾವಂತ ಕಟ್ಟಾಳು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಚಿತ್ರದುರ್ಗ ತಾಲ್ಲೂಕಿನಲ್ಲಿ 50, ಹಿರಿಯೂರು-65, ಚಳ್ಳಕೆರೆ-60, ಮೊಳಕಾಲ್ಮೂರು 24, ಹೊಸದುರ್ಗ 57 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 30 ಸೇರಿದಂತೆ ಒಟ್ಟು 286 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

   ಚಿತ್ರದುರ್ಗದಲ್ಲಿ ಇಂದು 125 ಜನರಿಗೆ ಕೊರೊನಾ ಸೋಂಕು ಪತ್ತೆ

   ಜಿಲ್ಲೆಯ ಹಲವೆಡೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 14 ಜನರು ಇಂದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2,896 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇದುವರೆಗೆ 35 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 1,726 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಸದ್ಯ 1,135 ಸಕ್ರಿಯ ಪ್ರಕರಣಗಳು ಇವೆ.

   ಸದ್ಯ ಜಿಲ್ಲೆಯಲ್ಲಿ 626 ಕಂಟೈನ್ಮೆಂಟ್ ವಲಯಗಳಿವೆ. ಈವರೆಗೆ ಪರೀಕ್ಷೆಗೆ 38,670 ಜನರ ಮಾದರಿ ಸಂಗ್ರಹಿಸಲಾಗಿದ್ದು, 34,711 ಜನರ ವರದಿ ನೆಗೆಟಿವ್ ಬಂದಿದೆ. ಉಳಿದ 630 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

   English summary
   286 coronavirus cases have found today in chitradurga district today, Total 2896 cases reported till now in district
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X