ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗದಲ್ಲೀಗ ಸೋಂಕಿಗೆ ಪೊಲೀಸರ ಸರದಿ; ಠಾಣೆಗಳು ಸೀಲ್ ಡೌನ್

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜುಲೈ 18: ಚಿತ್ರದುರ್ಗದಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರೆದಿದ್ದು, ಪೊಲೀಸ್ ಇಲಾಖೆಯಲ್ಲಿ ಭೀತಿ ಹೆಚ್ಚಾಗಿದೆ. 30 ವರ್ಷದ ಕಾನ್ಸ್ ಟೆಬಲ್ ಮತ್ತು ಹೊಸದುರ್ಗ ಪೊಲೀಸ್ ಠಾಣೆಯ 45 ವರ್ಷದ ಪೊಲೀಸ್ ಗೆ ಸೋಂಕು ದೃಢಪಟ್ಟಿದೆ. ಸೋಂಕಿತ ಪೊಲೀಸ್ ಗೆಸ್ಟ್ ಹೌಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಹಾಗೂ DAR ಕ್ವಾಟರ್ಸ್ ನಲ್ಲಿ ಸ್ನೇಹಿತರ ಜೊತೆ ವಾಸವಿದ್ದರು ಎನ್ನಲಾಗಿದೆ.

Recommended Video

ಕೊರೊನ ವಿರುದ್ಧದ ಯುದ್ಧದಲ್ಲಿ ಗೆದ್ದ Sharath Bacche Gowda | Oneindia Kannada

ಹೀಗಾಗಿ ಡಿವೈಎಸ್ಪಿ ಕಚೇರಿ ಸೇರಿದಂತೆ ಕ್ವಾಟರ್ಸ್ ಆವರಣದ ಸ್ಯಾನಿಟೈಸ್ ಮಾಡಲಾಗಿದೆ. ಸೋಂಕಿತ ಪೊಲೀಸ್ ವಾಸವಿದ್ದ ಕ್ವಾಟರ್ಸ್ ಸುತ್ತ ಸೀಲ್ ಡೌನ್ ಮಾಡಿದ್ದು, ಹೊಸದುರ್ಗ ಪೊಲೀಸ್ ಠಾಣೆಯನ್ನು ಸಹ ಸ್ಯಾನಿಟೈಸ್ ಮಾಡಿ ಸೀಲ್ ಡೌನ್ ಮಾಡಲಾಗಿದೆ. ಹೊಸದುರ್ಗ ಠಾಣೆಯ PSI ಸೇರಿ 35ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕ್ಯಾರಂಟೈನ್ ಗೆ ಒಳಪಡಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತೆ 24 ಜನರಿಗೆ ಕೋವಿಡ್ ಸೋಂಕು ದೃಢಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತೆ 24 ಜನರಿಗೆ ಕೋವಿಡ್ ಸೋಂಕು ದೃಢ

Coronavirus Increasing In Police Staffs

ಕಳೆದ ವಾರ ಶ್ರೀರಾಂಪುರ ಠಾಣೆ ಪೇದೆಗೆ ಸೋಂಕು ದೃಢಪಟ್ಟಿದ್ದರಿಂದ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿತ್ತು. 2 ದಿನಗಳ ಹಿಂದೆ ಚಿಕ್ಕಜಾಜೂರು ಠಾಣೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ದಿನೇ ದಿನೇ ಪೊಲೀಸರಿಗೆ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿದೆ. ಇದೀಗ ನೂರಕ್ಕೂ ಹೆಚ್ಚು ಪೊಲೀಸರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

English summary
Coronavirus cases increasing in police staff of chitradurga. Two policemen reported coronavirus positive yesterday,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X