• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ರದುರ್ಗ ಜಿಲ್ಲಾಧಿಕಾರಿ ಆಪ್ತ ಸಹಾಯಕನಿಗೆ ಕೊರೊನಾ ಪಾಸಿಟಿವ್

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಜುಲೈ 22: ಚಿತ್ರದುರ್ಗದ ಜಿಲ್ಲಾಧಿಕಾರಿ ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯನ್ನು ತಾತ್ಕಾಲಿಕವಾಗಿ ಸೀಲ್ ಡೌನ್ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ತೆಯಾದ ಎರಡನೇ ಕೊರೊನಾ ಪಾಸಿಟಿವ್ ಪ್ರಕರಣ ಇದಾಗಿದೆ.

   ಟ್ಯಾಂಕರ್ ನಲ್ಲಿ ಇದ್ದ ಹಾಲನ್ನು ರಸ್ತೆಗೆ ಚೆಲ್ಲಿದ ಪ್ರತಿಭಟನಾಕಾರರು | Oneindia Kannada

   ಈ ಹಿಂದೆ ಎಡಿಸಿ ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದಿತ್ತು, ಇದೀಗ ಜಿಲ್ಲಾಧಿಕಾರಿ ಆಪ್ತ ಸಹಾಯಕನಿಗೆ ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿವೆ.

   ಚಿತ್ರದುರ್ಗದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಕರ್ತವ್ಯ ಲೋಪ

   ರಾಂಪುರ ಪೊಲೀಸ್ ಪೇದೆಗೆ ಕೊರೊನಾ ಸೋಂಕು ದೃಢ

   ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಪೊಲೀಸ್ ಠಾಣೆಯ ಪೊಲೀಸ್ ಪೇದೆಗೆ ಮಹಾಮಾರಿ ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿದೆ.

   26 ವರ್ಷದ ಪೊಲೀಸ್ ಪೇದೆಗೆ ಕೊರೊನಾ ವೈರಸ್ ಪಾಸಿಟಿವ್ ಆಗಿದ್ದು, ಆವರ ಸಂಪರ್ಕಕ್ಕೆ ಬಂದಿರುವ 20 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಮಂಗಳವಾರ ಕೊರೊನಾ ವೈರಸ್ ರ‌್ಯಾಂಡಮ್ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ರಾಂಪುರ ಠಾಣೆ ಪೊಲೀಸರು ಆತಂಕದಲ್ಲಿದ್ದಾರೆ.

   ಆರೋಗ್ಯ ಇಲಾಖೆಯು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಿದ್ದಾರೆ. ಪಾಸಿಟಿವ್ ಬಂದ ಪೊಲೀಸ್ ಪೇದೆಗೆ ರಾಂಪುರ ಕೊವೀಡ್ ಸೆಂಟರ್ ನಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದ್ದು, ಚಿತ್ರದುರ್ಗದಲ್ಲಿ ಇಂದು ಕೂಡ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ.

   ಚಳ್ಳಕೆರೆಯಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಮನೆಗಳು ಜಲಾವೃತ

   "ಒನ್ ಇಂಡಿಯಾ' ವರದಿ ಬಳಿಕ ಎಚ್ಚೆತ್ತ ಆರೋಗ್ಯ ಇಲಾಖೆ ಅಧಿಕಾರಿಗಳು

   ಕೊರೊನಾ ವೈರಸ್ ಪಾಸಿಟಿವ್ ವ್ಯಕ್ತಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸದೆ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವ ಘಟನೆ ಚಿತ್ರದುರ್ಗದ ನೆಹರು ನಗರದಲ್ಲಿ ನಡೆದಿತ್ತು. ಈ ಘಟನೆಯನ್ನು ಒನ್ ಇಂಡಿಯಾ ವರದಿ ಬಿತ್ತರಿಸಿತ್ತು. ಈ ವರದಿಯಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆ್ಯಂಬುಲೆನ್ಸ್ ಕಳುಹಿಸಿ ಸೋಂಕಿತ ವ್ಯಕ್ತಿಯನ್ನು ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

   ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೊರೊನಾ ಪಾಸಿಟಿವ್ ಸೋಂಕಿತ ವ್ಯಕ್ತಿ ಮನೆಯಲ್ಲೇ ಉಳಿದಿದ್ದರು. ಸೋಂಕಿತ ವ್ಯಕ್ತಿಯ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು. ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಅಧಿಕಾರಿಗಳು ಅಲರ್ಟ್ ಆಗಿ ಸೋಂಕಿತನನ್ನು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

   English summary
   Coronavirus Infection Case has been confirmed For police Constable of Rampur police station in Chitradurga district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X