ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗದಲ್ಲಿ ಶತಕದತ್ತ ಕೊರೊನಾ ವೈರಸ್ ಪ್ರಕರಣ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜುಲೈ 7: ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಒಬ್ಬ ವ್ಯಕ್ತಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.

Recommended Video

ಕಪ್ಪು ಪಟ್ಟಿ ಕಟ್ಟಿಕೊಂಡು ಬೀದಿಗೆ ಬಂದ ಡಾಕ್ಟರ್ ಮತ್ತು ನರ್ಸ್ ಗಳು | Oneindia Kannada

ಇಂದಿನ ವರದಿಯಲ್ಲಿ ಹಿರಿಯೂರಿನ 54 ವರ್ಷದ ಪುರುಷರೊಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಒಟ್ಟು 85 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ ಹಿರಿಯೂರು ತಾಲ್ಲೂಕಿನ ಓರ್ವ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದೆ.

ಚಿತ್ರದುರ್ಗದ 96 ವರ್ಷಗಳ ಅಜ್ಜಿ ಕೋವಿಡ್-19 ಗೆದ್ದಿದ್ದು ಹೇಗೆ?ಚಿತ್ರದುರ್ಗದ 96 ವರ್ಷಗಳ ಅಜ್ಜಿ ಕೋವಿಡ್-19 ಗೆದ್ದಿದ್ದು ಹೇಗೆ?

ಜಿಲ್ಲೆಯ ಒಟ್ಟು 90 ಪ್ರಕರಣಗಳಲ್ಲಿ 54 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ 36 ಸಕ್ರಿಯ ಪ್ರಕರಣಗಳಿವೆ. ಇವುಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 13, ಭರಮಸಾಗರ-4, ಹಿರಿಯೂರು ತಾಲ್ಲೂಕು ಧರ್ಮಪುರದ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್ ನಲ್ಲಿ 10, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯಲ್ಲಿ 1, ಪರಶುರಾಂಪುರ 2, ಮೊಳಕಾಲ್ಮೂರು ತಾಲ್ಲೂಕು ರಾಂಪುರದಲ್ಲಿ 4 ಹಾಗೂ ಹೊಸದುರ್ಗ ತಾಲ್ಲೂಕು ಬೆಲಗೂರಿನ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್ ನಲ್ಲಿ ಇಬ್ಬರು ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Coronavirus Positive Cases Increased To 90 In Chitradurga District


ಸದ್ಯ ಜಿಲ್ಲೆಯಲ್ಲಿ ಒಟ್ಟು 20 ಕಂಟೈನ್ಮೆಂಟ್ ವಲಯಗಳಿವೆ. ಒಟ್ಟು 1619 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ಸಾರಿ ಮತ್ತು ಐಎಲ್ ‍ಐ, ಯುಆರ್ ‍ಐನ ಒಟ್ಟು 2431 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಇಬ್ಬರು ಗುಣಮುಖ: ಜಿಲ್ಲೆಯಲ್ಲಿ ಇಂದು 96 ವರ್ಷದ ವೃದ್ಧೆ ಸೇರಿದಂತೆ ಮತ್ತೊಬ್ಬ ಮಹಿಳೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಹಿರಿಯೂರಿನ ವೇದಾವತಿ ನಗರದ ಕಿರಾಣಿ ಅಂಗಡಿ ಮಾಲೀಕನ ಪ್ರಾಥಮಿಕ ಸಂಪರ್ಕದಲ್ಲಿದ್ದ ಆತನ ಹೆಂಡತಿ ಮತ್ತು ತಾಯಿ ಇಂದು ಗುಣಮುಖರಾಗಿದ್ದು, ಹಿರಿಯೂರು ತಾಲ್ಲೂಕಿನಲ್ಲಿ ಗುಣಮುಖರಾದವರ ಸಂಖ್ಯೆ 9 ಆಗಿದೆ. ಹಿರಿಯೂರಿನಲ್ಲಿ ಒಟ್ಟು 25 ಪ್ರಕರಣಗಳಿವೆ. ಇಂದು ಹಿರಿಯೂರು ನಗರದ ವ್ಯಕ್ತಿಯಲ್ಲಿ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಆತನ ಮನೆಯ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.

English summary
In Chitradurga district, one person has been confirmed coronavirus positive today and the number has increased to 90 in the district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X