ಚಿತ್ರದುರ್ಗದಲ್ಲಿ ಏಳು ಶಿಕ್ಷಕರಿಗೆ ಕೊರೊನಾ ಪಾಸಿಟಿವ್

ಚಿತ್ರದುರ್ಗ, ಜನೆವರಿ 5: ರಾಜ್ಯ ಸರ್ಕಾರ ಶಾಲೆಗಳನ್ನು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ ಶಿಕ್ಷಕರಿಗೆ ಕೊರೊನಾ ಸೋಂಕು ಪತ್ತೆಯಾಗುತ್ತಿದೆ. ಚಿತ್ರದುರ್ಗದಲ್ಲಿ ಏಳು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಮಕ್ಕಳಗೆ ಕೊರೊನಾ ಸೋಂಕು ಹರಡಬಾರದು ಎಂಬ ಕಾರಣಕ್ಕೆ ಬರೋಬ್ಬರಿ 9 ತಿಂಗಳು ಶಾಲೆಗಳನ್ನು ಮುಚ್ಚಲಾಗಿತ್ತೋ, ಶಾಲೆಗಳನ್ನು ಮತ್ತೆ ಪ್ರಾರಂಭಿಸಿದ್ದರಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಕೊರೊನಾ ಆತಂಕ ಮನೆಮಾಡಿದೆ.

ಸೋಮವಾರವಷ್ಟೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲ್ಲೂಕು ಹಾಗೂ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಶಾಲೆಗಳ ಶಿಕ್ಷಕರಿಗೆ ಕೊರೊನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಚಿತ್ರದುರ್ಗ ಜಿಲ್ಲೆಯ ಶಿಕ್ಷಕರಲ್ಲಿಯೂ ವೈರಸ್ ಪತ್ತೆಯಾಗಿದೆ.

 Chitradurga: Coronavirus Positive For Seven Teachers In Chitradurga District

ಚಳ್ಳಕೆರೆ ತಾಲೂಕಿನ ಓರ್ವ, ಹಿರಿಯೂರು ತಾಲೂಕಿನ ನಾಲ್ಕು ಹಾಗೂ ಹೊಸದುರ್ಗ ತಾಲೂಕಿನ ಇಬ್ಬರಲ್ಲಿ ಕಾಣಿಸಿಕೊಂಡ ವೈರಸ್ ಪತ್ತೆಯಾಗಿದೆ. ಶಾಲೆ ಪ್ರಾರಂಭವಾದ ನಾಲ್ಕೇ ದಿನಕ್ಕೆ ಚಿತ್ರನಾಯಕನಹಳ್ಳಿ, ಅರೇಹಳ್ಳಿ, ಗರಗ, ಶ್ರೀರಾಂಪುರ ಶಾಲೆಯ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿರುವುದು ಶಾಲಾ ಮಕ್ಕಳ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

ವಿದ್ಯಾಗಮ ಕಾರ್ಯಕ್ರಮದಡಿ ಶಾಲೆಗಳು ಪುನರಾರಂಭವಾದ ಬೆನ್ನಲ್ಲೇ ಶಿಕ್ಷಕರಲ್ಲಿ ಕೊರೊನಾ ವೈರಸ್ ಪತ್ತೆಯಾಗುತ್ತಿರುವುದು ಮಕ್ಕಳು ಹಾಗೂ ಪೋಷಕರಿಗೆ ಭೀತಿ ಹುಟ್ಟಿಸಿದೆ.

ಶಾಲೆಗಳು ಪ್ರಾರಂಭವಾಗಿದ್ದರಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಮಕ್ಕಳ ಹಾಜರಾತಿಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿರುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದು ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಸವಾಲಿನ ಕೆಲಸವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+