ಕೊರೊನಾ ಸೋಂಕು; ಶತಕದ ಅಂಚಿನಲ್ಲಿ ಕೋಟೆನಾಡು ಚಿತ್ರದುರ್ಗ
ಚಿತ್ರದುರ್ಗ, ಜುಲೈ 9: ಚಿತ್ರದುರ್ಗದಲ್ಲಿ ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ ಮತ್ತೆ ಇಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ.
Recommended Video
ಇಂದಿನ ವರದಿಯಲ್ಲಿ ಹೊಳಲ್ಕೆರೆ ತಾಲ್ಲೂಕಿನ ಗೊಲ್ಲರಹಳ್ಳಿಯ 17 ವರ್ಷದ ಯುವಕ ಹಾಗೂ ಚಿತ್ರದುರ್ಗದ 28 ವರ್ಷದ ಯುವಕ ಸೇರಿದಂತೆ ಇಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಗುರುವಾರ ಒಟ್ಟು 53 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲೆಯ ಒಟ್ಟು 94 ದೃಢಪಟ್ಟ ಪ್ರಕರಣಗಳಲ್ಲಿ ಈಗಾಗಲೇ 72 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ 22 ಸಕ್ರಿಯ ಪ್ರಕರಣಗಳು ಇವೆ.
22 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 9, ಹಿರಿಯೂರು ತಾಲ್ಲೂಕು ಧರ್ಮಪುರದ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್ ನಲ್ಲಿ 2, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯಲ್ಲಿ 1, ಪರಶುರಾಂಪುರ 3, ಮೊಳಕಾಲ್ಮೂರು ತಾಲ್ಲೂಕು ರಾಂಪುರದಲ್ಲಿ 4, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗದಲ್ಲಿ 1 ಹಾಗೂ ಹೊಸದುರ್ಗ ತಾಲ್ಲೂಕು ಬೆಲಗೂರಿನ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್ ನಲ್ಲಿ ಇಬ್ಬರು ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಜಿಲ್ಲೆಯಲ್ಲಿ ಒಟ್ಟು 25 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1619 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದ್ದಾರೆ.












Click it and Unblock the Notifications