ಪೋಲಿಸ್ ಕಸ್ಟಡಿ ಮುಗಿಯುವವರೆಗೂ ಜಾಮೀನು ಅರ್ಜಿ ಸಲ್ಲಿಸದಿರಲು ಮುರುಘಾ ಶರಣರಿಗೆ ಕೋರ್ಟ್ ಸೂಚನೆ
ಚಿತ್ರದುರ್ಗ, ಸೆಪ್ಟೆಂಬರ್ 3 : ವಸತಿ ನಿಲಯದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಮುರುಘಾ ಮಠದ ಶ್ರೀಗಳಿಗೆ ಸೋಮವಾರ ರಿಲೀಫ್ ಸಿಕ್ಕಿಲ್ಲ, ಸದ್ಯಕ್ಕೆ ಶ್ರೀಗಳಿಗೆ ಮತ್ತೆ ಪೊಲೀಸ್ ಕಸ್ಟಡಿಯಲ್ಲೇ ಮುಂದುವರಿಯಬೇಕಿದೆ.
ಶನಿವಾರವೂ ಮುರುಘಾ ಶರಣರ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಸೋಮವಾರವರೆಗೂ ಅರ್ಜಿ ಸಲ್ಲಿಸಬೇಡಿ ಎಂದು ಪೋಲಿಸ್ ಕಸ್ಟಡಿ ಮುಗಿಯುವವರೆಗೂ ಜಾಮೀನು ನೀಡುವುದಿಲ್ಲ ಎಂದು ಶ್ರೀಗಳ ಪರ ವಕೀಲರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಆರೋಗ್ಯ ತಪಾಸಣೆಗಾಗಿ ಮತ್ತೆ ಜಿಲ್ಲಾಸ್ಪತ್ರೆಗೆ ಶರಣರು
ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಜೈಲುಪಾಲಾಗಿರುವ ಮುರುಘಾ ಮಠದ ಶ್ರೀಗಳನ್ನು ಆರೋಗ್ಯ ತಪಾಸಣೆಗಾಗಿ ಮತ್ತೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ. ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಶ್ರೀಗಳಿಗೆ ವಿವಿಧ ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು. ನಂತರ ರಾತ್ರಿ ವಿಚಾರಣೆಗೆ ಡಿವೈಎಸ್ಪಿ ಕಚೇರಿಗೆ ಕರೆದೊಯ್ದಿದ್ದರು. ಇದೀಗ ಮತ್ತೆ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು ಆರೋಗ್ಯದಲ್ಲಿ ಏರು ಪೇರು ಕಂಡ ಬಂದ ಹಿನ್ನೆಲೆಯಲ್ಲಿ ಮತ್ತೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎಸ್.ಪಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜಿಲ್ಲಾಸ್ಪತ್ರೆಯ ಸುತ್ತಮುತ್ತ ಭದ್ರತೆ ಒದಗಿಸಲಾಗಿದೆ.

ಎರಡು ತಾಸುಗಳಿಗೂ ಹೆಚ್ಚು ಸಮಯ ವಿಚಾರಣೆ
ಚಿತ್ರದುರ್ಗದ ಡಿವೈಎಸ್‌ಪಿ ಕಚೇರಿಯಲ್ಲಿ ಮುರುಘಾ ಶ್ರೀಗಳನ್ನು ವಿಚಾರಣೆ ನಡೆಸಲಾಗಿದೆ. ಡಿವೈಎಸ್ ಪಿ ಅನಿಲ್ ಕುಮಾರ್ ನೇತೃತ್ವದಲ್ಲಿ ಮುರುಘಾಶ್ರೀಗಳ ವಿಚಾರಣೆ ನಡೆಸಲಾಗಿದೆ. ಸ್ವಾಮೀಜಿ ಎಲ್ಲಾ ಪ್ರಶ್ನೆಗಳಿಗೆ ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
ಇಂದು ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ಮುರುಘಾ ಶ್ರೀಗಳನ್ನು ವಿಚಾರಣೆ ನಡೆಸಲಾಗಿದೆ. ಈ ವೇಳೆ ಪೋಲಿಸರು ಶ್ರೀಗಳಿಗೆ ಕೆಲ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳಿದ್ದಾರೆ. ಕೆಲ ಪ್ರಶ್ನೆಗಳಿಗೆ ಶ್ರೀಗಳು ಉತ್ತರ ನೀಡಿದ್ದಾರೆ. ಆದರೆ ಕೆಲವು ಪ್ರಶ್ನೆಗಳಿಗೆ ಉತ್ತರಿಸಲು ಹಿಂದೇಟು ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಎರಡು ಗಂಟೆಗಳಿಂದ ಡಿವೈಎಸ್ ಪಿ ಅನಿಲ್ ಕುಮಾರ್ ನೇತೃತ್ವದಲ್ಲಿ ಮುರುಘಾಶ್ರೀಗಳ ವಿಚಾರಣೆ ನಡೆಸಲಾಗಿದೆ.

ಪ್ರಶ್ನೆಗಳ ಸುರಿಮಳೆ
ಶುಕ್ರವಾರ ರಾತ್ರಿ ಕಸ್ಟಡಿಗೆ ಪಡೆದುಕೊಂಡಿದ್ದ ಪೊಲೀಸರು ಶನಿವಾರ ಬೆಳಗ್ಗೆಯಿಂದಲೇ ಡಿವೈಎಸ್ಪಿ ಕಚೇರಿಯಲ್ಲಿ ಮುರುಘಾ ಶರಣರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಡಿವೈಎಸ್ಪಿ ಅನಿಲ್ ಕುಮಾರ್ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಸಂತ್ರಸ್ತ ಬಾಲಕಿಯರು ಸಿಆರ್ಪಿಸಿ ಸೆಕ್ಷನ್ 164 ಕೋರ್ಟ್ ಮುಂದೆ ನೀಡಿರುವ ಹೇಳಿಕೆ ಆಧಾರದ ಮೇಲೆ ಸ್ವಾಮೀಜಿಯನ್ನು ಪ್ರಶ್ನೆ ಮಾಡಿದ್ದಾರೆ. ಸುಮಾರು 100ಕ್ಕೂ ಹೆಚ್ಚು ಪ್ರಶ್ನೆಗಳನ್ನು ಸ್ವಾಮೀಜಿಗೆ ಕೇಳಿದ್ದಾರೆ ಎನ್ನಲಾಗಿದೆ.












Click it and Unblock the Notifications