ಕೋವಿಡ್-19 : ಪಾನ್ ಮಸಾಲ, ತಂಬಾಕು ಉತ್ಪನ್ನಗಳ ಮಾರಾಟ,ನಿಷೇಧ
ಚಿತ್ರದುರ್ಗ, ಮೇ10: ಕೋವಿಡ್-19 ವೈರಸ್‍ನಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಪಾನ್‍ಮಾಸಾಲ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ತಂಬಾಕು ಉತ್ಪನ್ನಗಳಾದ ಜರ್ದಾ, ಖೈನಿ, ಪಾನ್‍ಮಸಾಲ ಇತ್ಯಾದಿ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದು. ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು.
ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‍ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರ ಭಾಗಗಳಿಗೂ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು.
ಕೋವಿಡ್-19 ಸೋಂಕಿತರು ಜಗಿಯುವ ಪಾನ್ ಮಸಾಲ, ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಬಳಸಿ ಉಗುಳುವುದರಿಂದ ಒಬ್ಬರಿಂದ ಇನ್ನೋಬ್ಬರಿಗೆ ಕೋವಿಡ್-19 ವೈರಸ್ ಹರಡುವ ಭೀತಿ ಇರುತ್ತದೆ. ಆದ್ದರಿಂದ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-19 ಹತೋಟಿಗೆ ಬರುವವರೆಗೂ, ಮುಂದಿನ ಆದೇಶದವರೆಗೂ ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಚಿತ್ರದುರ್ಗ ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ.

Recommended Video
ಒಂದು ವೇಳೆ ಉಲ್ಲಂಘನೆಯಾದಲ್ಲಿ ಸಾಂಕ್ರಾಮಿಕ ರೋಗಗಳ ಕಾಯಿದೆ-1897, ವಿಪತ್ತು ನಿರ್ವಹಣಾ ಕಾಯಿದೆ-2005, ಐಪಿಸಿ-1860, ಸಿಆರ್‍ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications