ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್-19 : ಪಾನ್ ಮಸಾಲ, ತಂಬಾಕು ಉತ್ಪನ್ನಗಳ ಮಾರಾಟ,ನಿಷೇಧ

|
Google Oneindia Kannada News

ಚಿತ್ರದುರ್ಗ, ಮೇ10: ಕೋವಿಡ್-19 ವೈರಸ್‍ನಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಪಾನ್‍ಮಾಸಾಲ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ತಂಬಾಕು ಉತ್ಪನ್ನಗಳಾದ ಜರ್ದಾ, ಖೈನಿ, ಪಾನ್‍ಮಸಾಲ ಇತ್ಯಾದಿ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದು. ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು.

ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‍ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರ ಭಾಗಗಳಿಗೂ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು.

ಕೋವಿಡ್-19 ಸೋಂಕಿತರು ಜಗಿಯುವ ಪಾನ್ ಮಸಾಲ, ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಬಳಸಿ ಉಗುಳುವುದರಿಂದ ಒಬ್ಬರಿಂದ ಇನ್ನೋಬ್ಬರಿಗೆ ಕೋವಿಡ್-19 ವೈರಸ್ ಹರಡುವ ಭೀತಿ ಇರುತ್ತದೆ. ಆದ್ದರಿಂದ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-19 ಹತೋಟಿಗೆ ಬರುವವರೆಗೂ, ಮುಂದಿನ ಆದೇಶದವರೆಗೂ ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಚಿತ್ರದುರ್ಗ ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ.

Covid 19 Pandemic: Pan Masala, Tobacco products Sale banned

Recommended Video

Tweet ಮುಖಾಂತರ corona ರಹಸ್ಯ ಬಯಲು! | Oneindia Kannada

ಒಂದು ವೇಳೆ ಉಲ್ಲಂಘನೆಯಾದಲ್ಲಿ ಸಾಂಕ್ರಾಮಿಕ ರೋಗಗಳ ಕಾಯಿದೆ-1897, ವಿಪತ್ತು ನಿರ್ವಹಣಾ ಕಾಯಿದೆ-2005, ಐಪಿಸಿ-1860, ಸಿಆರ್‍ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Pan Masala, Tobacco products Sale banned in Chitradurga during Covid 19 Pandemic
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X