ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ: ಬಸವೇಶ್ವರ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಆರಂಭ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಸೆಪ್ಟೆಂಬರ್ 7: ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಿದ್ದು, ಅದು ನಾಳೆಯಿಂದ ಪರೀಕ್ಷಾ ಕೇಂದ್ರ ಆರಂಭಗೊಳ್ಳಲಿದೆ ಎಂದು ಮುರುಘಾ ಶ್ರೀಗಳು ಹೇಳಿದರು.

Recommended Video

Corona ಅಂಕಿ ಅಂಶಗಳಲ್ಲಿ ಕಂಡ ಏಕೈಕ ಪಾಸಿಟಿವ್ ಸುದ್ದಿ | Oneindia Kannada

ನಗರದಲ್ಲಿರುವ ಶ್ರೀ ಮುರುಘರಾಜೇಂದ್ರ ಮಠದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳವಾರದಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ವಿಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆಗೊಳಿಸುವರು ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಮಾಹಿತಿ ನೀಡಿದರು.

ಚಿತ್ರದುರ್ಗ: ವಾಣಿವಿಲಾಸ ಸಾಗರಕ್ಕೆ ಹರಿದ ಭದ್ರಾ ನೀರುಚಿತ್ರದುರ್ಗ: ವಾಣಿವಿಲಾಸ ಸಾಗರಕ್ಕೆ ಹರಿದ ಭದ್ರಾ ನೀರು

ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ವಿಶ್ವ, ರಾಷ್ಟ್ರ, ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿದ್ದು, ಹೆಚ್ಚಿನ ಆತಂಕ ಸೃಷ್ಟಿಯಾಗುತ್ತಿದೆ. ಹಾಗಾಗಿ ನಾವು ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದರು. ಈ ನಿಟ್ಟಿನಲ್ಲಿ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಉತ್ತಮ ಸೇವೆ ನೀಡುವ ಕಾರಣಕ್ಕಾಗಿ ಈ ಸೆಂಟರ್ ಅನ್ನು ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

 Chitradurga: Covid-19 Test Center Start In Basaveshwara Hospital

ಆಸ್ಪತ್ರೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವರು, ವೈದ್ಯಕೀಯ ಸಚಿವರು, ಸಂಸದರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಇನ್ನು ಬಸವೇಶ್ವರ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಮಾತನಾಡಿ, ನಮ್ಮಲ್ಲಿ ದಿನಕ್ಕೆ 300 ಜನರಿಗೆ ಕೋವಿಡ್ಟೆಸ್ಟ್ ಮಾಡಬಹುದು ಎಂದು ಹೇಳಿದರು. ದಿನದ 24 ಗಂಟೆ ಪ್ರಯೋಗಾಲಯ ಕಾರ್ಯನಿರ್ವಹಿಸುತ್ತದೆ. ಸರ್ಕಾರ ಈಗಾಗಲೇ ಆರ್‍ಟಿಪಿಸಿಗೆ 3000 ರೂ. ಅಂತಿಮಗೊಳಿಸಿದೆ. ಅಷ್ಟೇ ಹಣವನ್ನು ನಾವು ತೆಗೆದುಕೊಳ್ಳುತ್ತೇವೆ ಎಂದರು.

ಸರ್ಕಾರಿ ಆಸ್ಪತ್ರೆಯಲ್ಲಿರುವ ಹೆಚ್ಚಿನ ಕೋವಿಡ್ ಟೆಸ್ಟ್ ಇದ್ದರೆ ನಮ್ಮಲ್ಲಿ ಕಳುಹಿಸಿದರೆ ನಾವು ಟೆಸ್ಟ್ ಮಾಡಿಕೊಡುತ್ತೇವೆ. ಕೊರೊನಾ ಲಕ್ಷಣಗಳಿರುವ ಜ್ವರ, ಕೆಮ್ಮು, ನೆಗಡಿ ಇದ್ದಲ್ಲಿ ಅಂತವರು ಬಂದು ಪರೀಕ್ಷೆ ಮಾಡಿಸಿಕೊಳ್ಳಬಹುದು. ನಮ್ಮಲ್ಲಿ 25 ವೆಂಟಿಲೇಟರ್‍ಗಳಿದ್ದು, ಕೋವಿಡ್ ರೋಗಿಗಳಿಗೆ 6 ವೆಂಟಿಲೇಟರ್ ಗಳನ್ನು ಕೊಡಲು ಸಿದ್ಧ. ಆಯುಷ್ಮಾನ್ ಭಾರತ ಸೌಲಭ್ಯವಿದ್ದು, ಅದು ಕೋವಿಡ್ ಗೂ ಅನ್ವಯಿಸುತ್ತದೆ ಎಂದು ತಿಳಿಸಿದರು.

ಎಸ್.ಜೆ.ಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ ಪರಮಶಿವಯ್ಯ, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪ್ರಶಾಂತ್, ವೈದ್ಯಕೀಯ ಅಧೀಕ್ಷಕರಾದ ಡಾ. ಪಾಲಾಕ್ಷಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

English summary
"The Covid-19 test center has been set up at Basaveshwara Hospital in Chitradurga city which will be Start From tomorrow.' Murugha Swamiji Said That.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X