ಕ್ರಿಕೆಟ್ ಬೆಟ್ಟಿಂಗ್; ಹಿರಿಯೂರು ನಗರಸಭೆ ಸದಸ್ಯ ಜಗದೀಶ್ ಬಂಧನ
ಚಿತ್ರದುರ್ಗ, ಏಪ್ರಿಲ್ 25; ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದವರ ಮೇಲೆ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ಮಾಡಿದ್ದಾರೆ. ಮಾಜಿ ಸಚಿವ ಡಿ. ಸುಧಾಕರ್ ಬೆಂಬಲಿಗ ಹಾಗೂ ನೂತನ ನಗರಸಭೆ ಸದಸ್ಯ ಜಗದೀಶ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಶನಿವಾರ ರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವೆ ಐಪಿಎಲ್ ಪಂದ್ಯ ಶನಿವಾರ ನಡೆದಿತ್ತು.
ಈ ಪಂದ್ಯಕ್ಕೆ ಬೆಟ್ಟಿಂಗ್ ನಡೆಸುತ್ತಿದ್ದರು ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಕಳೆದ ತಿಂಗಳು ನಡೆದ ನಗರಸಭೆಯ ಉಪಚುನಾವಣೆಯಲ್ಲಿ 15ನೇ ವಾರ್ಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಗದೀಶ್ 548 ಮತಗಳಿಂದ ಗೆಲುವು ಕಂಡಿದ್ದರು.

ಚುನಾವಣೆಯಲ್ಲಿ ಗೆದ್ದು ತಿಂಗಳು ಕಳೆಯುವ ಮೊದಲೇ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವುದು ಪತ್ತೆಯಾಗಿದೆ. ಜಗದೀಶ್ ಜೊತೆಗೆ ಮಾರುತಿ, ಕಿರಣ್, ರವಿ ಅಲಿಯಾಸ್ ಉಂಡೆರವಿ ಎಂಬುವವರನ್ನು ಬಂಧಿಸಲಾಗಿದೆ.
ಬಂಧಿತರಿಂದ ಸುಮಾರು 1 ಲಕ್ಷಕ್ಕೂ ಹೆಚ್ಚು ನಗದು ಮತ್ತು 10 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಿರಿಯೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಕಲಾಗಿದೆ.












Click it and Unblock the Notifications