• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ರದುರ್ಗ; ಕ್ರಿಕೆಟ್ ವಿಚಾರಕ್ಕೆ ಯುವಕರ ಮಾರಾಮಾರಿ, ಪಂದ್ಯಾವಳಿ ರದ್ದು

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಏಪ್ರಿಲ್ 13; ಕ್ರಿಕೆಟ್ ಆಟದ ಮೈದಾನದ ವಿಚಾರಕ್ಕೆ ವಾಗ್ವಾದ ನಡೆದು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಹಿರಿಯೂರು ತಾಲೂಕಿನ ಚಳ್ಳಮಡು ಗ್ರಾಮದಲ್ಲಿ ಯುವಕರು ಹೊಡೆದಾಡಿಕೊಂಡಿದ್ದಾರೆ.

ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡಿಕೊಂಡಿದ್ದ ಒಂದು ಗುಂಪಿನ ಕಡೆಯವರು ಕ್ರಿಕೆಟ್ ಆಟ ಆಡಲು ಮೈದಾನ ಬಿಟ್ಟುಕೊಡುವಂತೆ ಒತ್ತಾಯಿಸಿದಾಗ ಮಾತಿಗೆ ಮಾತು ಬೆಳೆದಿದೆ. ಬಳಿಕ ಹೊಡೆದಾಟ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಡುಪಿ; ಕ್ರಿಕೆಟ್ ಪಂದ್ಯಾವಳಿ, ಬಹುಮಾನ ಪೆಟ್ರೋಲ್, ಡೀಸೆಲ್ಉಡುಪಿ; ಕ್ರಿಕೆಟ್ ಪಂದ್ಯಾವಳಿ, ಬಹುಮಾನ ಪೆಟ್ರೋಲ್, ಡೀಸೆಲ್

ಕಲ್ಲು, ದೊಣ್ಣೆ, ಮಾರಕಾಸ್ತ್ರಗಳಿಂದ ಬಡಿದಾಡಿ ಕೊಂಡಿದ್ದಾರೆ. ಗಾಯಾಳನ್ನು ಚಿಕಿತ್ಸೆಗಾಗಿ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆ ಆವರಣದಲ್ಲಿ ಸಹ ಜಗಳ ನಡೆದಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರು ಹಿರಿಯೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ಮೋದಿ ಹೆಸರುಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ಮೋದಿ ಹೆಸರು

ಏಪ್ರಿಲ್ 14 ಮತ್ತು 15ರಂದು ಕ್ರಿಕೆಟ್ ಪಂದ್ಯಾವಳಿ ನಡೆಯಬೇಕಿತ್ತು. ಯುವಕರ ಗಲಾಟೆ ಹಿನ್ನಲೆಯಲ್ಲಿ ಪಂದ್ಯಾವಳಿಯನ್ನು ರದ್ದು ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಪಂದ್ಯಾವಳಿಗಾಗಿ ಹಾಕಿದ್ದ ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.

 ಚಿಕ್ಕಬಳ್ಳಾಪುರ; ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿಕೊಂಡಿದ್ದ ಕಾನ್ ಸ್ಟೆಬಲ್ ಬಂಧನ ಚಿಕ್ಕಬಳ್ಳಾಪುರ; ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿಕೊಂಡಿದ್ದ ಕಾನ್ ಸ್ಟೆಬಲ್ ಬಂಧನ

   ದೇಶದಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣದ ಜೊತೆ ಸಾವಿನ ಸಂಖ್ಯೆಯಲ್ಲೂ ಏರಿಕೆ..! | Oneindia Kannada

   ಹೊಡೆದಾಟದಲ್ಲಿ ಗಾಯಗೊಂಡವರು ನಮ್ಮ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧ ಹಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

   English summary
   Clash between two groups in the issue of cricket tournament at Hiriyur, Chitradurga district. Several injured in the clash and police probing the case.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X