ಚಿತ್ರದುರ್ಗ: ಶಾಲಾ ಜೀಪ್ ಮರಕ್ಕೆ ಡಿಕ್ಕಿ, 15 ಮಂದಿಗೆ ಗಂಭೀರ ಗಾಯ

ಚಿತ್ರದುರ್ಗ, ಜನವರಿ 03: ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದ ಶಾಲಾ ವಾಹನ ಮರಕ್ಕೆ ಡಿಕ್ಕಿ ಹೊಡೆದು ಶಿಕ್ಷಕರು ವಿದ್ಯಾರ್ಥಿಗಳು ಸೇರಿ 15 ಕ್ಕೂ ಹೆಚ್ಚುಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದಾಗ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ಕ್ರೂಸರ್ ಜೀಪ್ ಮರಕ್ಕೆ ಡಿಕ್ಕಿಹೊಡೆದು, ಶಿಕ್ಷಕರು, ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹುಳಿಯಾರು ರಸ್ತೆಯಲ್ಲಿ ನಡೆದಿದೆ.

Cruiser Jeep collision: 15 injured

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದಗಣಿ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಮಡಿಕೇರಿಯಿಂದ ಹಿಂದಿರುಗುವಾಗ ಹಿರಿಯೂರು ಬಳಿ ಘಟನೆ ನಡೆದಿದೆ. ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದ್ದು, ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಗಾಯಾಳುಗಳನ್ನು ಹಿರಿಯೂರು ತಾಲೂಕು ಆಸ್ಪತ್ರೆ, ಚಿತ್ರದುರ್ಗ ಮತ್ತು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+