ಬಿಜೆಪಿ ಶಾಸಕ ಎಂ.ಚಂದ್ರಪ್ಪ ವಿರುದ್ಧ ಪ್ರತಿಭಟನೆ: ಭಾವಚಿತ್ರಕ್ಕೆ ಚಪ್ಪಲಿ ಹಾರ
ಚಿತ್ರದುರ್ಗ, ಜೂನ್ 05: ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಅವರ ಹೇಳಿಕೆಯನ್ನು ಖಂಡಿಸಿ ದಲಿತ ಮುಖಂಡರು ಪ್ರತಿಭಟನೆ ನಡೆಸಿ, ಪ್ರತಿಕೃತಿ ದಹಿಸಿ, ಶಾಸಕರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ಹೊಳಲ್ಕೆರೆ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಇತ್ತೀಚೆಗಷ್ಟೇ ಶನಿವಾರ ನಡೆದ ಬಿಜೆಪಿ ಸಭೆಯಲ್ಲಿ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಇಬ್ಬರು ಮಂತ್ರಿಗಳು ಕಾರಣ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಖಂಡಿಸಿ ಇಂದು ಪ್ರತಿಭಟನೆ ನಡೆಸಿದರು. ಕಳೆದ ತಿಂಗಳು ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ. ಈ ಸೋಲಿಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹಾಗೂ ರಾಜ್ಯ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಸೋಲಿಗೆ ಇಬ್ಬರು ಕಾರಣರು ಎಂದಿದ್ದರು.
ಈ ಹೇಳಿಕೆ ನೀಡಿ ಎಂ.ಚಂದ್ರಪ್ಪ ದಲಿತ ಮುಖಂಡರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ನಡೆಸಿ ಪ್ರತಿಕೃತಿ ದಹಿಸಿ ಶಾಸಕರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಲಿತ ಮುಖಂಡರ ಪ್ರತಿಭಟನೆಗೆ ಕಾರಣ ಏನು?
ಇತ್ತೀಚೆಗಷ್ಟೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಇಬ್ಬರು ಮಂತ್ರಿಗಳು ಕಾರಣ ಎಂದು ಬಿಜೆಪಿ ಶಾಸಕ ಎಂ ಚಂದ್ರಪ್ಪ ಆರೋಪಿಸಿದ್ದರು.

ಬಿಜೆಪಿ ಸೋಲಿಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಸಚಿವ ಗೋವಿಂದ ಕಾರಜೋಳ ಕಾರಣ ಎಂದು ಹೇಳಿದ್ದರು. ರಾಜ್ಯದಲ್ಲಿ ಘೋಷಣೆ ಮಾಡಿರುವ ಒಳ ಮೀಸಲಾತಿ ವರ್ಗೀಕರಣ ಘೋಷಣೆಯೇ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಹೇಳಿದರು. ಈ ಒಳಮೀಸಲಾತಿ ಘೋಷಣೆಗೆ ಇಬ್ಬರು ಮಂತ್ರಿಗಳು ಕಾರಣವಾಗಿದ್ದಾರೆ. ಬೋವಿ ಸಮುದಾಯ, ಬಂಜಾರ ಸಮಾಜ, ಕೊರಚ ಹಾಗೂ ಕೊರಮ ಸಮುದಾಯಗಳು ವಿರೋಧಿಸಿದ್ದವು ಎಂದಿದ್ದರು.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕರಿಂದ ಕ್ಲಾಸ್
ಚಿತ್ರದುರ್ಗ ನೂತನ ಶಾಸಕ ಕೆಸಿ ವೀರೇಂದ್ರ ಪಪ್ಪಿ ಮೊದಲ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಚಿತ್ರದುರ್ಗ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಗ್ರಾಮ ಪಂಚಾಯಿತಿ ಶಾಸಕ ವೀರೇಂದ್ರ ಪಪ್ಪಿ ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಪಿಡಿಓಗಳು ಪಂಚಾಯತಿಗಳಲ್ಲಿಇರುವುದಿಲ್ಲ, ಜನರ ಕೈಗೆ ಸಿಗಲ್ಲ ಕೆಲಸ ಆಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಜನರ ಸಮಸ್ಯೆಗಳಿಗೆ ಮೊದಲು ಸಹಕರಿಸಿ. ನೀವುಗಳು ಹೊಸ ಶಾಸಕ ಏನು ತಿಳಿಯಲ್ಲ, ಬಹಳ ಸ್ಮೂತ್ ಮನುಷ್ಯ ಅನ್ಕೊಂಡ್ರೆ ತಪ್ಪು ಎಂದಿದ್ದಾರೆ. ನಾನು ಯಾರಿಗೂ ಏಕವಚನ ಬಳಸಲ್ಲ, ಒಬ್ಬ ಮನುಷ್ಯನಿಗೆ ಏನು ಗೌರವ ಕೊಡಬೇಕು ಅದು ನಾನು ಕೊಡುತ್ತೇನೆ. ನಾನು ದೇಶ, ವಿದೇಶವೆನಲ್ಲ ಸುತ್ತಿದ್ದೇನೆ ಅಭಿವೃದ್ಧಿಯೇ ನನ್ನ ಮೂಲ ಮಂತ್ರ ಎಂದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications